ಎರಡು ವರ್ಷದ ಬಳಿಕ ಕೇರಳ ಪತ್ರಕರ್ತ ಸಿದ್ದಿಕ್‌ ಕಪ್ಪನ್ ಜೈಲಿನಿಂದ ಬಿಡುಗಡೆ

ಲಕ್ನೋ: ಪಿಎಂಎಲ್​ಎ ಕಾಯ್ದೆಯಡಿ ಎರಡು ವರ್ಷದಿಂದ ಬಂಧನಕ್ಕೆ ಒಳಗಾಗಿದ್ದ ಕೇರಳ ಮೂಲದ ಪತ್ರಕರ್ತ ಸಿದ್ದೀಕ್ ಕಪ್ಪನ್ ಜೈಲಿನಿಂದ ಬಿಡುಗಡೆ ಹೊಂದಿದ್ದಾರೆ. ಇಲ್ಲಿನ ವಿಶೇಷ ಪಿಎಂಎಲ್‌ಎ ನ್ಯಾಯಾಲಯದಲ್ಲಿ ಶ್ಯೂರಿಟಿ ಸಲ್ಲಿಕೆ ಬಳಿಕ ಲಕ್ನೋ ಜೈಲಿನಿಂದ ಹೊರ ಬಂದರು.

ಸಿದ್ದಿಕ್‌ ಕಪ್ಪನ್‌ ವಿರುದ್ಧ ಉತ್ತರ ಪ್ರದೇಶ ಸರ್ಕಾರ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿ ಬಂಧಿಸಿತ್ತು. 2020ರ ಅಕ್ಟೋಬರ್ ನಲ್ಲಿ ಹತ್ರಾಸ್ ನಡೆದ ದಲಿತ ಮಹಿಳೆ ಮೇಲಿನ ಅತ್ಯಾಚಾರ ಮತ್ತು ಭೀಕರ ಕೊಲೆ ಪ್ರಕರಣದ ಬಗ್ಗೆ ವರದಿ ಮಾಡಲು ತೆರಳಿದ ಸಂದರ್ಭದಲ್ಲಿ ಕಪ್ಪನ್ ಮತ್ತು ಇತರ ಮೂವರನ್ನು ಬಂಧಿಸಲಾಗಿತ್ತು. ಕಪ್ಪನ್ ಮತ್ತು ಇತರರು ಹತ್ರಾಸ್‌ ಪ್ರಕರಣವನ್ನು ಪ್ರಚೋದಿಸಲು ಪ್ರಯತ್ನಿಸಿದರು ಎಂಬ ಆರೋಪವನ್ನು ಸಹ ಹೊರೆಸಲಾಗಿತ್ತು.

ಇದನ್ನು ಓದಿ: ಯುಎಪಿಎ ಪ್ರಕರಣ: ಕೇರಳ ಪತ್ರಕರ್ತ ಸಿದ್ದಿಕ್‌ ಕಪ್ಪನ್‌ಗೆ ಜಾಮೀನು ನೀಡಿದ ಸುಪ್ರೀಂ ಕೋರ್ಟ್‌

ಸಿದ್ದಿಕ್ ಕಪ್ಪನ್‌ ಅವರಿಗೆ ಇಲ್ಲಿನ ಸೆಷೆನ್ಸ್ ನ್ಯಾಯಾಲಯ ಜಾಮೀನು ನೀಡಿದ್ದು, ಲಕ್ನೋ ಜಿಲ್ಲಾ ಮತ್ತು ಸೆಷೆನ್ಸ್ ನ್ಯಾಯಾಧೀಶ ಸಂಜಯ್ ಶಂಕರ್ ಪಾಂಡೆ, ಸಿದ್ದೀಕ್ ಕಪ್ಪನ್ ಮೇಲೆ ಬೇರೆ ಯಾವುದೇ ಪ್ರಕರಣ ಇಲ್ಲದಿದ್ದರೆ ಅವರನ್ನು ಬಿಡುಗಡೆ ಮಾಡಿ ಎಂದು ಲಕ್ನೋ ಕಾರಾಗೃಹ ಅಧಿಕಾರಿಗೆ ನಿರ್ದೇಶನ ನೀಡಿದರು. ಸಿದ್ದಿಕ್ ಕಪ್ಪನ್ ಬಿಡುಗಡೆಗೊಳಿಸುವಂತೆ ನ್ಯಾಯಾಲಯ ಆದೇಶ ನೀಡಿರುವ ಹಿನ್ನೆಲೆಯಲ್ಲಿ ಅವರು ಇಂದು(ಫೆಬ್ರವರಿ 02) ಬಿಡುಗಡೆಗೊಂಡಿದ್ದಾರೆ. ಈ ಬಗ್ಗೆ ಸಿದ್ದಿಕ್‌ ಕಪ್ಪನ್ ಪರ ವಕೀಲ ಇಶಾನ್ ಬಾಘೆಲ್ ಮಾಹಿತಿ ನೀಡಿದ್ದಾರೆ.

2020 ಅಕ್ಟೋಬರ್ ತಿಂಗಳಲ್ಲಿ ಸಿದ್ದಿಕ್‌ ಕಪ್ಪನ್‌ ಅವರನ್ನು ಬಂಧಿಸಿ ಲಕ್ನೋ ಕಾರಾಗೃಹದಲ್ಲಿ ಇರಿಸಲಾಗಿತ್ತು. ಜಾರಿ ನಿರ್ದೇಶನಾಲಯ ಅವರ ವಿರುದ್ಧ ಪಿಎಂಎಲ್​ಎ ಕಾಯ್ದೆ ಅಡಿ ಪ್ರಕರಣ ದಾಖಲಿಸಿತ್ತು.  ಎರಡು ವರ್ಷಗಳಿಗೂ ಹೆಚ್ಚು ಕಾಲ ಜೈಲಿವಾಸ ಅನುಭವಿಸಿದ್ದಾರೆ.

2022ರ ಸೆಪ್ಟೆಂಬರ್ 9ರಂದು ಸುಪ್ರೀಂಕೋರ್ಟ್ ಆತನಿಗೆ ಒಂದು ಪ್ರಕರಣದಲ್ಲಿ ಜಾಮೀನು ನೀಡಿತು. ಮತ್ತೊಂದು ಪ್ರಕರಣ ಬಾಕಿ ಇದ್ದಿದ್ದರಿಂದ ಜೈಲು ವಾಸ ಮುಂದುವರೆದಿತ್ತು. ಅದಾದ ಬಳಿಕ ಡಿಸೆಂಬರ್ ತಿಂಗಳಲ್ಲಿ ಅಲಹಾಬಾದ್ ಹೈಕೋರ್ಟ್​ನ ಲಕ್ನೋ ಪೀಠ ಸಿದ್ದಿಕ್ ಕಪ್ಪನ್​ಗೆ ಮತ್ತೊಂದು ಪ್ರಕರಣದಲ್ಲಿ ಜಾಮೀನು ನೀಡಿತ್ತು.‌ ಅದರ ನಂತರವೂ ಜೈಲಿನಲ್ಲಿ ಮುಂದುವರೆಯಬೇಕಾಯಿತು.

ಇದನ್ನು ಓದಿ: ಸಿದ್ದಿಕಿ ಕಪ್ಪನ್‍ ಬಂಧನ- ಉತ್ತರಪ್ರದೇಶ ಪೋಲೀಸಿಗೆ ನೋಟೀಸು, ಮಧ್ಯಂತರ ಆದೇಶದ ಮಾತಿಲ್ಲ

ಮಾಧ್ಯಮದವರೊಂದಿಗೆ ಮಾತನಾಡಿದ ಪತ್ರಕರ್ತ ಸಿದ್ದಿಕ್ ಕಪ್ಪನ್, “ನಾನು 28 ತಿಂಗಳ ನಂತರ ಜೈಲಿನಿಂದ ಹೊರಬಂದಿದ್ದೇನೆ. ನನ್ನನ್ನು ಬೆಂಬಲಿಸಿದ್ದಕ್ಕಾಗಿ ನಾನು ಮಾಧ್ಯಮಗಳಿಗೆ ಧನ್ಯವಾದ ಹೇಳಲು ಬಯಸುತ್ತೇನೆ. ನನ್ನ ವಿರುದ್ಧ ಸುಳ್ಳು ಆರೋಪಗಳನ್ನು ಹಾಕಲಾಗಿದೆ. ಈಗ ಹೊರಬರಲು ನನಗೆ ಸಂತೋಷವಾಗಿದೆ” ಎಂದಿದ್ದಾರೆ.

ಆರೋಪಗಳೇನು?

ಕೇರಳದ ಮಲಪ್ಪುರಂನವರಾದ ಪತ್ರಕರ್ತ ಸಿದ್ದೀಕ್ ಕಪ್ಪನ್ ಅವರು ಉತ್ತರಪ್ರದೇಶದ ಹತ್ರಾಸ್ ಪಟ್ಟಣದಲ್ಲಿ 2020 ಅಕ್ಟೋರ್ 5ರಂದು ದಲಿತ ಮಹಿಳೆ ಮೇಲೆ ಸಂಭವಿಸಿದ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಸುದ್ದಿಯನ್ನು ವರದಿ ಮಾಡುವ ಸಂಬಂಧ ಹೋಗಿದ್ದರು. ಮಥುರಾ ಟಾಲ್ ಪ್ಲಾಜಾ ಬಳಿಕ ಸಿದ್ದಿಕ್ ಕಪ್ಪನ್ ಸೇರಿ ನಾಲ್ವರನ್ನು ಉತ್ತರಪ್ರದೇಶ ಪೊಲೀಸರು ಬಂಧಿಸಿದ್ದರು. ಇವರು ಪಿಎಫ್​ಐ ಸಂಘಟನೆಯೊಂದಿಗೆ ಸಂಪರ್ಕದಲ್ಲಿದ್ದು, ಇಲ್ಲಿ ಕಾನೂನು ವ್ಯವಸ್ಥೆಯನ್ನು ಹಾಳು ಮಾಡುವ ಸಂಚು ರೂಪಿಸಿದ್ದರು ಎಂಬುದು ಪೊಲೀಸರ ಆರೋಪವಾಗಿತ್ತು. ಅದರಂತೆ ಐಟಿ, ಯುಎಪಿಎ ಮತ್ತು ಇಪಿಸಿ ಕಾಯ್ದೆಗಳಡಿ ಸಿದ್ದಿಕ್‌ ಕಪ್ಪನ್ ವಿರುದ್ಧ ಪ್ರಕರಣಗಳು ದಾಖಲಾದವು. ನಂತರ ಅಕ್ರಮ ಹಣ ವ್ಯವಹಾರಕ್ಕೆ ಸಂಬಂಧಿಸಿ ಜಾರಿ ನಿರ್ದೇಶನಾಲಯ ಪ್ರಕರಣ ದಾಖಲಿಸಿತು.

ಇದನ್ನು ಓದಿ: ದೆಹಲಿ ಹೈಕೋರ್ಟ್‌ನಿಂದ ಜಾಮೀನು ಪಡೆದ ಜೆಎನ್‌ಯು, ಜಾಮಿಯಾ ವಿದ್ಯಾರ್ಥಿಗಳು

ಇಲ್ಲಿ ಕ್ಲಿಕ್‌ ಮಾಡಿ : ಜನಶಕ್ತಿ ಮೀಡಿಯಾ ವಾಟ್ಸ್‌ಪ್‌ ಗುಂಪು ಸೇರಲು ಈ ಲಿಂಕ್‌ ಕ್ಲಿಕ್‌ ಮಾಡಿ

Donate Janashakthi Media

Leave a Reply

Your email address will not be published. Required fields are marked *