ಬೆಂಗಳೂರು : ಮಂಡ್ಯ ಜಿಲ್ಲೆ ಕೆರೆಗೋಡಿನಲ್ಲಿ ಕೇಸರಿ ಧ್ವಜವನ್ನು ಇಳಿಸಿರುವುದನ್ನು ಖಂಡಿಸಿ ಬೆಂಗಳೂರಿನ ಮೈಸೂರು ಬ್ಯಾಂಕ್ ವೃತ್ತದಲ್ಲಿ ಬಿಜೆಪಿ ವತಿಯಿಂದ ಇಂದು ಬೃಹತ್ ಪ್ರತಿಭಟನೆ ನಡೆಯಿತು. ಇದೇ ವೇಳೆ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದರು. ಕೆರೆಗೋಡು
ಈ ಸಂದರ್ಭದಲ್ಲಿ ಶಾಸಕ ಸಿ.ಕೆ ರಾಮಮೂರ್ತಿ ಮಾತನಾಡಿ,ಈ ಪ್ರಕರಣದಲ್ಲಿ ಸ್ಥಳೀಯ ಶಾಸಕ ರವಿ ಗಾಣಿಗ ವಿರುದ್ಧ ಎಫ್ ಐ ಆರ್ ಮಾಡಬೇಕು. ಪೊಲೀಸರು ಹನುಮ ಭಕ್ತರ ಮೇಲೆ ಲಾಠಿ ಜಾರ್ಜ್ ಮಾಡಿದ್ದಾರೆ. ಅಲ್ಲದೆ ಸ್ವಯಂಪ್ರೇರಿತವಾಗಿ ದೂರು ದಾಖಲು ಮಾಡಿದ್ದಾರೆ ಎಂದು ಆರೋಪಿಸಿದರು. ಕಾಂಗ್ರೆಸ್ ಸರ್ಕಾರದಲ್ಲಿ ರಾಮ ಭಕ್ತರಿಗೆ ರಕ್ಷಣೆ ಇಲ್ಲ. ಇವರಿಗೆ ರಾಮ ಹನುಮಂತ ಆಗಲ್ಲ. ಹೋರಾಟ ಹತ್ತಿಕ್ಕುವ ಕೆಲಸ ಆಗ್ತಿದೆ. ಸಿದ್ದರಾಮಯ್ಯ ಪಾಕಿಸ್ತಾನದ ಬಾಂಗ್ಲಾದೇಶದ ಸಿಎಂ ಆಗಿದ್ದಾರಾ? ಈ ಸರ್ಕಾರದಲ್ಲಿ ಹನುಮಧ್ವಜ ಹಾರಿಸಲು ಅವಕಾಶ ಇಲ್ಲವೇ? ಎಂದು ಪ್ರಶ್ನಿಸಿದರು.
ಇದನ್ನು ಓದಿ : ಪರವಾನಿಗೆ ಉಲ್ಲಂಘಸಿ ಹಾರಿಸಿದ್ದ ಕೇಸರಿ ಧ್ವಜ ತೆರವು ಮಾಡಿದ ಜಿಲ್ಲಾಡಳಿತ
ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್. ಹರೀಶ್, ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷ ಸಪ್ತಗಿರಿ ಗೌಡ, ವಿಧಾನ ಪರಿಷತ್ತಿನ ಸದಸ್ಯೆ ಡಾ. ತೇಜಸ್ವಿನಿ ಗೌಡ, ಜನಪ್ರತಿನಿಧಿಗಳು, ಮಾಜಿ ಶಾಸಕರು, ನಗರ ಪಾಲಿಕೆ ಮಾಜಿ ಸದಸ್ಯರು, ಮುಖಂಡರು, ಕಾರ್ಯಕರ್ತರು ಇದರಲ್ಲಿ ಭಾಗವಹಿಸಿದ್ದರು.
ಏನಿದು ವಿವಾದ : ಕೆರಗೋಡು ಗ್ರಾಮದ ಶ್ರೀ ಗೌರಿಶಂಕರ ಸೇವಾ ಟ್ರಸ್ಟ್ ಕಳೆದ ಡಿ. 24 ರಂದು ಗ್ರಾಮ ಪಂಚಾಯಿತಿಗೆ ಅರ್ಜಿ ಸಲ್ಲಿಸಿ, ಗ್ರಾಮದಲ್ಲಿ ಧಾರ್ಮಿಕ, ಸಾಮಾಜಿಕ ಶೈಕ್ಷಣಿಕ, ಸಾಂಸ್ಕೃತಿಕ ಚಟುವಟಿಕೆಯಲ್ಲಿ ಟ್ರಸ್ಟ್ ಸಕ್ರಿಯವಾಗಿದ್ದು, ರಂಗಮಂದಿರದ ಆವರಣದಲ್ಲಿ ಧ್ವಜಸ್ಥಂಭ ನಿರ್ಮಿಸಲು ಅನುಮತಿ ನೀಡುವಂತೆ ಕೋರಿ ಸದರಿ ಧ್ವಜಸ್ತಂಭದಲ್ಲಿ ತ್ರಿವರ್ಣ ಧ್ವಜ, ಕರ್ನಾಟಕದ ಬಾವುಟ ಹಾರಿಸಲಾಗುವುದು, ಗ್ರಾಮ ಪಂಚಾಯತಿಯ ಷರತ್ತುಗಳಿಗೆ ಬದ್ಧರಾಗಿ ಇರುವುದಾಗಿ ತಿಳಿಸಿದ್ದರು.
ಇದನ್ನು ನೋಡಿ : ಬೆಲ್ಲದಂತಹ ಜನರಿಗೆ ಕೋಮುವಾದದ ಬೇವು ಕುಡಿಸಬೇಡಿJanashakthi Media