ಬೆಂಗಳೂರು: ರಾಜ್ಯ ಸರ್ಕಾರಿ ನೌಕರರು, ನಿಗಮ -ಮಂಡಳಿ ನೌಕರರಿಗೆ ವಾರದ ಕೆಲಸದ ದಿನಗಳಲ್ಲಿ ಒಂದು ದಿನ ಕಡ್ಡಾಯವಾಗಿ ಖಾದಿ ಬಟ್ಟೆ ಧರಿಸುವಂತೆ ಆದೇಶ ಹೊರಡಿಸಬೇಕು ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಪತ್ರ ಬರೆದು ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಮನವಿ ಮಾಡಿದ್ದಾರೆ.
ಖಾದಿ ಕೇವಲ ಬಟ್ಟೆಯಲ್ಲ, ಅದೊಂದು ಜೀವನ ಪದ್ಧತಿ, ಸ್ವಾವಲಂಬಿ ಬದುಕಿನ ರೂಪಕವಾಗಿದೆ. ಖಾದಿ ತೊಟ್ಟವರಿಗೆ ಸತ್ಯ ಮತ್ತು ಅಹಿಂಸೆ ಒಂದು ವ್ರತ ಎನ್ನುವ ಹಿರಿಯರ ನುಡಿ ಇದೆ. ಅಂತೆಯೇ ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಆಚರಣೆ ಸಂದರ್ಭದಲ್ಲಿ ಗಾಂಧಿ ಸ್ಮರಣೆ ಚಿರಕಾಲ ಇರಲು ಈ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.
ಇದನ್ನೂ ಓದಿ : ಮೆಟ್ರೋ ಹಳದಿ ಮಾರ್ಗ: ಜನವರಿ 15ರ ವೇಳೆಗೆ ಹೆಬ್ಬಗೋಡಿ ಡಿಪೋಗೆ ಬಂದು ತಲುಪಲಿದೆ CRTC ರೈಲು
ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಆಚರಣೆಯ ಹಿನ್ನೆಲೆಯಲ್ಲಿ ರಾಜ್ಯದ ಸರ್ಕಾರಿ ಅಧಿಕಾರಿಗಳು, ನೌಕರರು, ನಿಗಮ ಮಂಡಳಿಯ ಅಧಿಕಾರಿಗಳು ಹಾಗೂ ನೌಕರರಿಗೆ ಕೆಲಸದ ದಿನಗಳಲ್ಲಿ ವಾರದಲ್ಲಿ ಕಡ್ಡಾಯವಾಗಿ ಒಂದು ದಿನ ಖಾದಿ ಬಟ್ಟೆಗಳನ್ನು ಧರಿಸಬೇಕೆನ್ನುವ ಆದೇಶವನ್ನು ಹೊರಡಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ.
ನೈಸರ್ಗಿಕ ವಸ್ತು ಬಳಸಿ ಖಾದಿ ಬಟ್ಟೆ ತಯಾರಿಸುವುದರಿಂದ ಸರ್ಕಾರಿ ನೌಕರರು ಕೆಲಸಗಳಲ್ಲಿ ವಾರದಲ್ಲಿ ಒಂದು ದಿನ ಕಡ್ಡಾಯವಾಗಿ ಖಾದಿ ಬಟ್ಟೆ ಧರಿಸಲು ಆದೇಶ ಹೊರಡಿಸಿದರೆ ಗಾಂಧೀಜಿ ಕನಸು ನನಸಾಗುತ್ತದೆ ಎಂದು ಸಂತೋಷ್ ಲಾಡ್ ಹೇಳಿದ್ದಾರೆ.
ಇದನ್ನೂ ನೋಡಿ : ವಕ್ಫ್ ಆಸ್ತಿ ಗೊಂದಲ: ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ಸಮಿತಿ – ಸಿಎಂ Janashakthi Media