ಬೆಂಗಳೂರು | ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಉಸಿರಾಟದ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲು

ಬೆಂಗಳೂರು : ಕಾಂಗ್ರೇಸ್‌ ಹಿರಿಯ ನಾಯಕ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಅನಾರೋಗ್ಯದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರ ಆರೋಗ್ಯ ಸ್ಥಿರವಾಗಿದೆ ಎಂದು ಮಾಹಿತಿ ಲಭ್ಯವಾಗಿದೆ. ಹಿರಿಯ ವೈದ್ಯರು ಅವರ ಆರೋಗ್ಯದ ಮೇಲೆ ನಿಗಾ ಇರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಬೆಂಗಳೂರು

ಇಂದು ಬೆಳ್ಳಂಬೆಳಗ್ಗೆಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅನಾರೋಗ್ಯಕ್ಕೀಡಾಗಿದ್ದು, ಬೆಂಗಳೂರಿನ ಎಂಎಸ್ ರಾಮಯ್ಯ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸದ್ಯ ಖರ್ಗೆ ಅವರು ಸಾಮಾನ್ಯ ವಾರ್ಡ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಆರೋಗ್ಯದ ಮೇಲೆ ಹಿರಿಯ ವೈದ್ಯರು ನಿಗಾ ಇರಿಸಿದ್ದಾರೆ. ಮಲ್ಲಿಕಾರ್ಜುನ್‌ ಖರ್ಗೆ ಅವರಿಗೆ ಕೆಲ ದಿನಗಳಿಂದ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿತ್ತು. ಹೀಗಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು ಎಂದು ಮೂಲಗಳು ತಿಳಿಸಿವೆ. ಬೆಂಗಳೂರು

ಇದನ್ನೂ ಓದಿ : ಹುಣಸೂರು |ಅತಿಥಿ ಉಪನ್ಯಾಸಕರ ನೇಮಕಾತಿ ಹಾಗೂ ಪರೀಕ್ಷಾ ಶುಲ್ಕ ಪಾವತಿ ದಿನಾಂಕ ಮತ್ತು ಪರೀಕ್ಷೆ ಮೂಂದುಡುವಂತೆ ಎಸ್‌ ಫ್‌ ಐ ಪ್ರತಿಭಟನೆ

ಈಗಾಗಲೇ ಕಲ್ಯಾಣ ಕರ್ನಾಟಕದಲ್ಲಿ ಉಂಟಾದ ಪ್ರವಾಹದ ಕುರಿತು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ ಅಧ್ಯಕ್ಷರಾದ ಮಲ್ಲಿಕಾರ್ಜುನ್‌ ಖರ್ಗೆ ಅವರು ಸೋಮವಾರದಂದು ಮಾಹಿತಿ ಕಲೆ ಹಾಕಿದ್ರು. ಇನ್ನೂ ಮಲ್ಲಿಕಾರ್ಜುನ ಖರ್ಗೆ ಅವರು ಮಂಗಳವಾರ ಎಂದಿನಂತೆಯೇ ರಾಜಕೀಯ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದರು. ಉತ್ತರ ಕರ್ನಾಟಕದಲ್ಲಿ ಉಂಟಾಗಿರುವ ಭಾರಿ ಪ್ರವಾಹ ಮತ್ತು ಬೆಳೆ ಹಾನಿ ಬಗ್ಗೆ ಬೆಂಗಳೂರಿನಲ್ಲಿ ಅವರು ಮಂಗಳವಾರ ಪ್ರತಿಕ್ರಿಯಿಸಿದ್ದಾರೆ. ಅಲ್ಲದೆ, ಕಲ್ಯಾಣ ಕರ್ನಾಟಕದಲ್ಲಿ ಉಂಟಾಗಿರುವ ಪ್ರವಾಹ ಮತ್ತು ಬೆಳೆ ಹಾನಿಗೆ ಪರಿಹಾರ ನೀಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿಯವರಿಗೆ ವಿವರವಾದ ಪತ್ರ ಬರೆದು ಮನವಿ ಮಾಡುವುದಾಗಿ ಹೇಳಿದ್ದಾರೆ. ಇನ್ನೂ ಮಂಗಳವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಕಲ್ಯಾಣ ಕರ್ನಾಟಕ ಭಾಗದಲ್ಲಿ ಪ್ರವಾಹ ಪರಿಸ್ಥಿತಿಯ ಅವಲೋಕನ ಮಾಡಿದ್ದು, ಸೂಕ್ತ ಪರಿಹಾರದ ಭರವಸೆ ನೀಡಿದ್ದಾರೆ. ಅಲ್ಲದೆ, ಮನೆ ಕಳೆದುಕೊಂಡವರಿಗೆ ಮತ್ತು ಬೆಳೆ ಹಾನಿಯಾದವರಿಗೆ ಏನೇನು ಪರಿಹಾರ ನೀಡಬೇಕು ಎಂಬುದನ್ನು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಸೂಕ್ತ ಪರಿಹಾರಕ್ಕೆ ಮಲ್ಲಿಕಾರ್ಜುನ್‌ ಖರ್ಗೆ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆಗೆ ಚರ್ಚೆ ನಡೆಸಿದ್ದರು ಎಂದು ಮೂಲಗಳು ತಿಳಿಸಿವೆ.

ವೈಮಾನಿಕ ಸಮೀಕ್ಷೆ ಮೂಲಕ ಪ್ರವಾಹ ಹಾನಿ ಪರಿಶೀಲಿಸಿದ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಲಬುರಗಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಾಲ್ಕು ಜಿಲ್ಲೆಗಳ ಶಾಸಕರು, ಸಚಿವರು ಮತ್ತು ಅಧಿಕಾರಿಗಳ ಜತೆ ಮಂಗಳವಾರ ಸಭೆಯ ನಡೆಸಿದರು. ಈ ವೇಳೆ ಮಾತನಾಡಿದ ಸಿಎಂ, ಪ್ರವಾಹ ಇಳಿಕೆಯಾದ ಬಳಿಕ ವೈಜ್ಞಾನಿಕ ಜಂಟಿ ಸಮೀಕ್ಷೆ ನಡೆಸಿ ತುರ್ತಾಗಿ ಪರಿಹಾರ ನೀಡಲಾಗುತ್ತದೆ ಎಂದು ಭರವಸೆ ತಿಳಿಸಿದರು.

ಇದನ್ನೂ ನೋಡಿ : ನಿಮ್ಮ ಶ್ವಾನಕ್ಕೆ ನೀವೇ ತರಬೇತಿ ನೀಡಿ . ಡಾ : ಶ್ರೀಧರ Janashakthi Media

Donate Janashakthi Media

Leave a Reply

Your email address will not be published. Required fields are marked *