ಕಿತ್ತೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ₹50 ಕೋಟಿ ಅನುದಾನ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಹುಬ್ಬಳ್ಳಿ: ಕಿತ್ತೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ಪ್ರಸ್ತುಕ ವರ್ಷದಲ್ಲಿ ₹50 ಕೋಟಿ ವೆಚ್ಚ ಕ್ರಿಯಾ ಯೋಜನೆಗೆ ಅನುಮೋದನೆ ನೀಡಲಾಗುವುದೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಹುಬ್ಬಳ್ಳಿಯಲ್ಲಿ ಇಂದು ರಾಣಿ ಚನ್ನಮ್ಮನ ಜಯಂತಿ ಅಂಗವಾಗಿ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಅವರು, 2011ರಲ್ಲಿ ₹8 ಕೋಟಿ ಬಿಡುಗಡೆ ಮಾಡಿ ಯೋಜನೆ ಆರಂಭಿಸಲಾಯಿತು. ಕಿತ್ತೂರು ಚನ್ನಮ್ಮ ಪ್ರತಿಮೆಯನ್ನು ಬೆಳಗಾವಿಯ ನಗರದ ಕೇಂದ್ರ ಭಾಗದಲ್ಲಿ ಸ್ಥಾಪಿಸುವಲ್ಲಿ ಮಾಜಿ ಮುಖ್ಯಮಂತ್ರಿ  ಎಸ್.ಆರ್.ಬೊಮ್ಮಾಯಿ ಅವರ ಪಾತ್ರವನ್ನು ಸ್ಮರಿಸಿಕೊಂಡುರು.

ಕಿತ್ತೂರು ರಾಣಿ ಚೆನ್ನಮ್ಮ ಬೆಳಗಾವಿಗೆ ಮಾತ್ರ ಸೀಮಿತವಾಗಿರದೆ ಇಡೀ ರಾಜ್ಯಕ್ಕೆ ಸೇರಿದವರಾಗಿದ್ದಾರೆ. ಅವರ ಜ್ಯೋತಿಯನ್ನು ಬೆಂಗಳೂರಿನವರೆಗೆ ಕೊಂಡೊಯ್ಯಲಾಗಿದೆ. ಕಿತ್ತೂರು ಚನ್ನಮ್ಮ ಹಾಗೂ ಸಂಗೊಳ್ಳಿ ರಾಯಣ್ಣನವರ ಕೊಡುಗೆಯನ್ನು ಸ್ಮರಿಸಿ , ಅವರ ಆಶೋತ್ತರಗಳನ್ನು ಈಡೇರಿಸುವ ಕೆಲಸವನ್ನು ಸರ್ಕಾರ ಮಾಡಲಿದೆ ಎಂದು ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಸಚಿವರಾದ ಮುರುಗೇಶ್ ನಿರಾಣಿ,  ಶಂಕರ ಪಾಟೀಲ ಮುನೇನಕೊಪ್ಪ ಶಾಸಕ ರಾಜೂಗೌಡ ಮತ್ತು ಇತರರು ಉಪಸ್ಥಿತರಿದ್ದರು.

Donate Janashakthi Media

Leave a Reply

Your email address will not be published. Required fields are marked *