ಬಸ್​ ಇಲ್ಲದ್ದಕ್ಕೆ ಶಾಲೆಗೆ ನಡೆದುಕೊಂಡು ಹೋಗುತ್ತಿದ್ದ ವಿದ್ಯಾರ್ಥಿನಿಯರಿಗೆ ಕಾರು ಡಿಕ್ಕಿ; ಒಬ್ಬ ವಿದ್ಯಾರ್ಥಿನಿ ಸಾವು

ಕಿತ್ತೂರು : ಕಿತ್ತೂರು ತಾಲೂಕಿನ ನಿಚ್ಛಣಿಕೆ ಗ್ರಾಮದಲ್ಲಿ ಬಸ್ ಇಲ್ಲದಿದ್ದಕ್ಕೆ ನಡೆದುಕೊಂಡು ಹೊರಟಿದ್ದ ಮೂವರು ವಿದ್ಯಾರ್ಥಿನಿಯರಿಗೆ ಕಾರು ಡಿಕ್ಕಿಯಾಗಿದ್ದು, ಒಬ್ಬ ವಿದ್ಯಾರ್ಥಿನಿ ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಕಿತ್ತೂರು ಸರ್ಕಾರಿ ಪ್ರೌಢಶಾಲೆಯ 8ನೇ ತರಗತಿಯ ಅಕ್ಕವ್ವ ಹೂಲಿಕಟ್ಟಿ ಮೃತ ವಿದ್ಯಾರ್ಥಿನಿ. ಈ ಭಾಗದಲ್ಲಿ ಸಮರ್ಪಕವಾಗಿ ಬಸ್‌ ಸೇವೆ ಇರಲಿಲ್ಲ. ಹೀಗಾಗಿ ಶನಿವಾರ (ಡಿ.31) ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದರು. ಭಾನುವಾರ (ಜ.1, ಎಳ್ಳ ಅಮವಾಸೆಯಂದು ರಜೆ ಕೊಟ್ಟಿದ್ದರಿಂದ ಇಂದು ಶಾಲೆ ನಡೆಸಲಾಗಿದೆ) ಸಹ ಬಸ್ ವ್ಯವಸ್ಥೆ ಇಲ್ಲದೇ ಇದ್ದಿದ್ದಕ್ಕೆ ವಿದ್ಯಾರ್ಥಿನಿಯರು ಶಾಲೆಗೆ ನಡೆದೇ ಹೊರಟಿದ್ದರು. ಈ ಸಂದರ್ಭ ಅವರಿಗೆ ಕಾರು ಡಿಕ್ಕಿ ಹೊಡೆದಿದೆ.

ಮೃತ ಅಕ್ಕವ್ವ ಕಳೆದ 15 ದಿನಗಳ ಹಿಂದೆಯೇ ಕಿತ್ತೂರು ಶಾಸಕ ಮಹಾಂತೇಶ ದೊಡ್ಡಗೌಡರಗೆ ಮನವಿ ಸಲ್ಲಿಸಿದ್ದರು. 15 ದಿನಗಳು ಕಳೆದರೂ ಮನವಿಗೆ ಸ್ಪಂದಿಸದಕ್ಕೆ ನಿನ್ನೆಯೂ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದರು. ಆದರೆ ಇವರು ಮನೆಗೆ ತೆರಳುವಾಗ ಈ ಘಟನೆ ನಡೆದಿದೆ. ಇದೀಗ ಪ್ರತಿಭಟನೆ ನಡೆಸಿದರೂ ಬಸ್‌ ವ್ಯವಸ್ಥೆಯನ್ನು ಕಲ್ಪಿಸಲಾಗಿಲ್ಲ ಎಂದು ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Donate Janashakthi Media

Leave a Reply

Your email address will not be published. Required fields are marked *