ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಸಿ.ಟಿ ರವಿಗೆ ಕೊಕ್‌

ಬೆಂಗಳೂರು:ಭಾರತೀಯ ಜನತಾ ಪಕ್ಷ (ಬಿಜೆಪಿ) ತನ್ನ ರಾಷ್ಟ್ರೀಯ ಮಂಡಳಿಯನ್ನು ಪುನರ್‌ ರಚಿಸಿ ಹೊಸ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದ್ದು, ಆ ಪ್ರಕಾರ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಸಿ.ಟಿ ರವಿಗೆ ಕೊಕ್‌ ನೀಡಲಾಗಿದೆ.

ತೆಲಂಗಾಣದ ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಬಂಡಿ ಸಂಜಯ್‌ ಕುಮಾರ್‌ ಅವರನ್ನು ಸೇರಿದಂತೆ 8 ಜನರನ್ನು ಪ್ರಧಾನ ಕಾರ್ಯದರ್ಶಿಗಳನ್ನಾಗಿ ನೇಮಕ ಮಾಡಲಾಗಿದೆ. ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ. ಸಂಜಯ್‌ ಅವರನ್ನು ಇತ್ತೀಚೆಗೆ ತಲಂಗಾಣ ರಾಜ್ಯಾಧ್ಯಕ್ಷ ಸ್ಥಾನದಿಂದ ಕೆಳಕ್ಕಿಳಿಸಲಾಗಿತ್ತು.

ಇದನ್ನೂ ಓದಿ:ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವುದು ಬಿಜೆಪಿ ಅಭ್ಯರ್ಥಿಗಳ ಪಟ್ಟಿ ನಕಲಿ : ಸಿ.ಟಿ.ರವಿ ಸ್ಪಷ್ಟನೆ

13 ನಾಯಕರನ್ನು ರಾಷ್ಟ್ರೀಯ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿಯನ್ನಾಗಿ ಬಿ.ಎಲ್.ಸಂತೋಷ್‌ ಅವರನ್ನು ಮುಂದುವರೆಸಲಾಗಿದೆ.

ಇತರ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳೆಂದರೆ ಅರುಣ್‌ ಸಿಂಗ್‌,ಕೈಲಾಶ್‌ ವಿಜಯ್‌ ವರ್ಗೀಯ,ದುಷ್ಯಂತ ಕುಮಾರ್‌ ಗೌತಮ್‌, ತರುಣ್‌ ಚುಗ್‌, ವಿನೋದ್‌ ತಾವ್ಡೆ, ಸುನೀಲ್‌ ಬನ್ಸಲ್‌, ರಾಧಾಮೋಹನ್‌ ಅಗರ್ವಾಲ್‌.

ರಾಷ್ಟ್ರೀಯ ಸಹ ಸಂಘಟನಾ ಕಾರ್ಯದರ್ಶಿ ಹುದ್ದೆಯಲ್ಲಿ ಶಿವ ಪ್ರಕಾಶ್‌ ಅವರನ್ನು ಮುಂದುವರಿಸಲಾಗಿದೆ. ಸಂಘಟನಾ ಕಾರ್ಯದರ್ಶಿಗಳು,ಸಹ ಸಂಘಟನಾ ಕಾರ್ಯದರ್ಶಿಗಳು ಕೋಶ್ಯಾಧ್ಯಕ್ಷರನ್ನು ನೇಮಕ ಮಾಡಲಾಗಿದೆ.

 

Donate Janashakthi Media

Leave a Reply

Your email address will not be published. Required fields are marked *