ಕೋಲಾರ: ಕೊಲೆ ಆರೋಪಿ ಹತ್ಯೆಗೆ ಯತ್ನ ಸಾವಿರಕ್ಕೂ ಹೆಚ್ಚು ಜನರ ವಿರುದ್ಧ ಎಫ್‌ಐಆರ್!

ಕೋಲಾರ: ಮೊದಲ ಪತ್ನಿ ಮತ್ತು ಮಾವನನ್ನು ಮಚ್ಚಿನಿಂದ ಹೊಡೆದು ಕೊಲೆ ಮಾಡಿ ಅಡಗಿದ್ದ ಆರೋಪಿ ಹತ್ಯೆಗೆ ಯತ್ನ ಹಾಗೂ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನ ನಂಬಿಹಳ್ಳಿ ಗ್ರಾಮದ ಸಾವಿರಕ್ಕೂ ಹೆಚ್ಚು ಜನರ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

ಕೋಲಾರದ ನಂಬಿಹಳ್ಳಿ ಗ್ರಾಮದ ನಾಗೇಶ್ ಎಂಬಾತ ಸೆ.12ರಂದು ರಾಧಾ ಎಂಬಾಕೆಯನ್ನು ಕೊಚ್ಚಿ ಕೊಲೆ ಮಾಡಿದ್ದ. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ನಾಗೇಶ್ ಹೊಟೇಲ್ ಒಂದರಲ್ಲಿ ಅವಿತು ಕುಳಿತಿದ್ದ. ಪತ್ನಿ ರಾಧಾ ಸ್ಥಳದಲ್ಲಿಯೇ ಸಾವನ್ನಪ್ಪಿದರೆ, ಮಾವ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ನಾಗೇಶ್ ನನ್ನು ಬಂಧಿಸಲು ಆತನ ಕಾಲಿಗೆ ಗುಂಡೇಟು ಹಾರಿಸಲಾಗಿತ್ತು. ಆಸ್ಪತ್ರೆಗೆ ದಾಖಲಿಸಿದಾಗ, ಸ್ಥಳೀಯರು ಆಕ್ರೋಶಗೊಂಡು ಆತನ ಮೇಲೆ ಹಲ್ಲೆ‌ನಡೆಸಿದ್ದರು. ಪೊಲೀಸರು ತಡೆಯಲು ಹೋದಾಗಲು ಲೆಕ್ಕಿಸದೆ ಹಲ್ಲೆ ಯತ್ನ ನಡೆಸಿದ್ದರು. ಈ ಸಂಬಂಧ ಊರಿನ ಸಾವಿರಕ್ಕೂ ಹೆಚ್ಚು ಜನರ ಮೇಲೆ ಕೇಸ್ ದಾಖಲಾಗಿದೆ. ಬಂಧನ ಭೀತಿಯಿಂದ ಗ್ರಾಮದ ಹಲವರು ಊರು ತೊರೆದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ದೂರಿನಲ್ಲಿ ಏನಿದೆ?: ‌‘ಶ್ರೀನಿವಾಸಪುರ ಪಟ್ಟಣದ ಕುರಿ ವ್ಯಾಪಾರಿ‌, ಗ್ರಾಮದ ನಾಗೇಶ್ ಎಂಬಾತ ಮಚ್ಚಿನಿಂದ ಮೊದಲ ಪತ್ನಿ ರಾಧಾ, ಮಾವ ಮುನಿಯಪ್ಪ, ಪತ್ನಿ ಸಂಬಂಧಿಕರಾದ ವರುಣ್‌ ಹಾಗೂ ಅನುಷಾ ಎಂಬುವರ ಮೇಲೆ ಮಟನ್‌ ಕತ್ತರಿಸಲು ಬಳಸುತ್ತಿದ್ದ ಮಚ್ಚಿನಿಂದ ಹಲ್ಲೆ ಮಾಡಿ ಹೋಟೆಲ್‌ ಕೊಠಡಿಯಲ್ಲಿ ಅವಿತುಕೊಂಡಿದ್ದ. ರಾಧಾ ಸ್ಥಳದಲ್ಲೇ ಮೃತಪಟ್ಟಿದ್ದರು. ರೊಚ್ಚಿಗೆದ್ದ ನಂಬಿಹಳ್ಳಿ ಸಾವಿರಕ್ಕೂ ಅಧಿಕ ಗ್ರಾಮಸ್ಥರು ದೊಣ್ಣೆ, ಕಲ್ಲು ಹಿಡಿದು ಆರೋಪಿಯನ್ನು ಹೊಡೆದು ಸಾಯಿಸಲು ಮುಂದಾದರು. ಆಗ ನಾಗೇಶ್‌, ಅಡುಗೆ ಅನಿಲ ಸಿಲಿಂಡರ್‌ ತೋರಿಸಿ ಒಳಕ್ಕೆ ಬಂದರೆ ಸ್ಫೋಟಿಸುವುದಾಗಿ ಬೆದರಿಕೆಯೊಡ್ಡಿದ್ದ. ಆಗ ಗ್ರಾಮಸ್ಥರು ಕಲ್ಲು ತೂರಿದರು. ಅಡುಗೆ ಅನಿಲ ಸಿಲಿಂಡರ್‌ ತಂದು ಸ್ಫೋಟಿಸುವುದಾಗಿ ಹೇಳಿ ಆತಂಕ ಸೃಷ್ಟಿಸಿದರು. ವ್ಯಕ್ತಿಯೊಬ್ಬ ಪೆಟ್ರೋಲ್‌ ಎರಚಿ ಬೆಂಕಿ ಹಾಕಲು ಮುಂದಾದಾಗ ಪೊಲೀಸರು ಆತನನ್ನು ತಡೆದರು’ ಎಂದು ಪಿಎಸ್‌ಐ ಈಶ್ವರಪ್ಪ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಅಂದಿನ ಘಟನೆ ಕುರಿತು ಮಾಹಿತಿ ನೀಡಿದ್ದ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಎಂ.ನಾರಾಯಣ, ‘ಮುಳಬಾಗಿಲು ಡಿವೈಎಸ್ಪಿ ಸೇರಿದಂತೆ ಪೊಲೀಸರು ಸಾರ್ವಜನಿಕರಿಗೆ ತಿಳಿ ಹೇಳಿದರೂ ‌ಕೇಳಲಿಲ್ಲ. ನಾನೂ ಸ್ಥಳಕ್ಕೆ ತೆರಳಿ ಪರಿಸ್ಥಿತಿ ಹತೋಟಿಗೆ ತರಲು ಪ್ರಯತ್ನಿಸಿದೆ. ಮೊದಲ ಬಾರಿ ಎಚ್ಚರಿಕೆ ನೀಡಿದೆವು. ಲಾಠಿ ಪ್ರಹಾರ ಮಾಡಿದರೂ ಸುಮ್ಮನಾಗಲಿಲ್ಲ. ಪರಿಸ್ಥಿತಿ ಹತೋಟಿಗೆ ತರಲು ಟಿಯರ್‌ ಗ್ಯಾಸ್‌ ಸಿಡಿಸಿದೆವು. ಏಳು ಸುತ್ತು ಅಶ್ರುವಾಯು ಸಿಡಿಸಿದರೂ ಕೇಳಲಿಲ್ಲ. ಒಂದು ಸುತ್ತು ರಬ್ಬರ್‌ ಬುಲೆಟ್‌ ಹಾರಿಸಿದೆವು. ಆಗ ವಿಧಿ ಇಲ್ಲದೆ ಐದು ಸುತ್ತು ಗುಂಡನ್ನು ಗಾಳಿಯಲ್ಲಿ ಹಾರಿಸಿದೆವು. ಆಗ ಜನರು ಚದುರಿದರು. ಈ ಸಂಬಂಧ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಪ್ರಕರಣ ದಾಖಲಾಗಿದೆ. ಅವಿತುಕೊಂಡಿದ್ದ ಆರೋಪಿ ನಾಗೇಶ್‌ ಪೊಲೀಸರ ಮೇಲೆ ಮಚ್ಚಿನಿಂದ ‌ಹಲ್ಲೆ ಮಾಡಿದ್ದರಿಂದ ಸ್ವಯಂರಕ್ಷಣೆಗಾಗಿ ಆತನ ಮೇಲೆ ಗುಂಡು ಹಾರಿಸಿದ್ದೆವು. ಕುಸಿದ ಬಿದ್ದು ಆತನನ್ನು ಆಸ್ಪತ್ರೆಗೆ ದಾಖಲಿಸಿದ್ದೆವು. ತನಿಖೆ ಮುಂದುವರಿದಿದೆ’ ಎಂದಿದ್ದರು.

ಕೌಟುಂಬಿಕ ಕಲಹ ಹಿನ್ನಲೆ ಆರೋಪಿ ನಾಗೇಶ್, ಪತ್ನಿ ರಾಧಾ ಕೊಲೆ ಮಾಡಿದ್ದಾರೆ. ಬಂಧಿಸಲು ಹೋದಾಗ ಗ್ರಾಮಸ್ಥರು ಅಡ್ಡಿ ಮಾಡಿದ್ದರು. ಗಾಳಿಯಲ್ಲಿ ಗುಂಡು ಹಾರಿಸಿ, ಲಘು ಲಾಠಿ ಪ್ರಹಾರ ನಡೆಸಿ ಪರಿಸ್ಥಿತಿ ತಿಳಿಗೊಳಿಸಲಾಯಿತು. ಬಂಧನಕ್ಕೆ ಯತ್ನಿಸಿದಾಗ ಆರೋಪಿ ನಾಗೇಶ್ ಪೊಲೀಸರ ಮೇಲೆ ಮಚ್ಚಿನಿಂದ ದಾಳಿ ಮಾಡಿದ್ದ. ಪ್ರಾಣ ರಕ್ಷಣೆಗೆ ನಾಗೇಶ್ ಮೇಲೆ 5 ಸುತ್ತು ಗುಂಡು ಹಾರಿಸಲಾಗಿದೆ. ಆತನ ಮೇಲೆ ಹಾಗೂ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಲು ಮುಂದಾದ ಗ್ರಾಮಸ್ಥರ ಮೇಲೆ ಪ್ರಕರಣ ದಾಖಲಾಗಿದೆ ಎಂದು ಕೋಲಾರ ಎಸ್​​ಪಿ ಎಂ ನಾರಾಯಣ ತಿಳಿಸಿದ್ದಾರೆ.

 

 

 

Donate Janashakthi Media

Leave a Reply

Your email address will not be published. Required fields are marked *