ವಿದ್ಯುತ್ ಖಾಸಗೀಕರಣ ವಿರೋಧಿಸಿ ಹೋರಾಟ ಸಮಿತಿ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ

ಕೋಲಾರ: ವಿದ್ಯುತ್ ಖಾಸಗೀಕರಣವನ್ನು ವಿರೋಧಿಸಿ ಹಾಗೂ ಟಾಟಾ ಪವರ್ ಕಂಪನಿಗೆ ವಿದ್ಯುತ್ ವಿತರಣಾ ಪರವಾನಗಿ ನೀಡುವ ಪ್ರಸ್ತಾವನೆಯನ್ನು ತಿರಸ್ಕರಿಸಬೇಕೆಂದು ಆಗ್ರಹಿಸಿ ವಿದ್ಯುತ್ ಖಾಸಗೀಕರಣ ವಿರೋಧಿ ಹೋರಾಟ ಸಮಿತಿ ನೇತೃತ್ವದಲ್ಲಿ ಸೋಮವಾರ ಬೃಹತ್ ಪ್ರತಿಭಟನೆ ನಡೆಸಿದರು.

ನಗರದ ನಚಿಕೇತನ ನಿಲಯದ ಅಂಬೇಡ್ಕರ್ ಪ್ರತಿಮೆಗೆ ಮಾರ್ಪಾಣೆ ಮಾಡಿದ ನಂತರ ಮೆಕ್ಕೆ ವೃತ್ತದ ವರೆಗೆ ಕಾಲ್ನಡಿಗೆಯಲ್ಲಿ ಭಾಗವಹಿಸಿದ ಪ್ರತಿಭಟನಾಕಾರರು ಮಾನವ ಸರಪಳಿ ನಿರ್ಮಿಸಿ ಬೃಹತ್ ಪ್ರತಿಭಟನೆ ನಡೆಸಿ ತಹಶಿಲ್ದಾರ್ ಶ್ರೀನಿವಾಸ್ ಅವರಿಗೆ ಮನವಿ ಸಲ್ಲಿಸಿದರು

ಈ ಸಂದರ್ಭದಲ್ಲಿ ಪ್ರತಿಭಟನೆಯನ್ನು ಉದ್ದೇಶಿಸಿ ಹೋರಾಟ ಸಮಿತಿಯ ಸಹ ಸಂಚಾಲಕ ಹಾಗೂ ಜೆಡಿಎಸ್ ಮುಖಂಡ ಸಿಎಂಆರ್ ಶ್ರೀನಾಥ್ ಮಾತನಾಡಿ ರಾಜ್ಯ ಸರ್ಕಾರವು ಬಂಡವಾಳಶಾಹಿಗಳಿಗೆ ಲಾಭ ಮಾಡಿಕೊಡಲು ವಿದ್ಯುತ್ ಕ್ಷೇತ್ರವನ್ನು ಖಾಸಗೀಕರಣ ಮಾಡಲು ಹೊರಟಿದ್ದಾರೆ ಬೆಸ್ಕಾಂ ವ್ಯಾಪ್ತಿಯಲ್ಲಿ ಟಾಟಾ ಪವರ್ ಕಂಪನಿಗೆ ಸಮಾನಾಂತರ ವಿದ್ಯುತ್ ವಿತರಣಾ ಪರವಾನಗಿ ನೀಡುವ ಪ್ರಸ್ತಾವನೆಯನ್ನು ಕರ್ನಾಟಕ ವಿದ್ಯುತ್ ನಿಯಂತ್ರಣ ಮಂಡಳಿ ಕೂಡಲೇ ತಿರಸ್ಕರಿಸಬೇಕು ಖಾಸಗೀಕರಣದಿಂದ ಸಾಮಾನ್ಯ ಪ್ರಜೆಗೆ ಹಾಗೂ ರೈತರಿಗೆ ಭಾರಿ ತೊಂದರೆಯಾಗಲಿದೆ. ರೈತರ ಹಿತಾಸಕ್ತಿ ಮತ್ತು ಸಾರ್ವಜನಿಕ ವಿದ್ಯುತ್ ಸೇವೆಗಳ ರಕ್ಷಣೆಯೇ ಪ್ರಮುಖ ಉದ್ದೇಶವಾಗಬೇಕು ಎಂದರು.

ಹೋರಾಟ ಸಮಿತಿಯ ಸಂಚಾಲಕ ಗಾಂಧಿನಗರ ನಾರಾಯಣಸ್ವಾಮಿ ಮಾತನಾಡಿ ಖಾಸಗಿ ಕಂಪನಿಗೆ ವಿದ್ಯುತ್ ಪೂರೈಕೆಗೆ ಅವಕಾಶ ನೀಡಿದರೆ, ಸರ್ಕಾರಿ ಸ್ವಾಮ್ಯದ ಬೆಸ್ಕಾಂ ಸಂಸ್ಥೆಯ ಆರ್ಥಿಕ ಸ್ಥಿತಿ ಹದಗೆಡುತ್ತದೆ. ಅಲ್ಲದೆ, ಅಲ್ಲಿನ ಅಧಿಕಾರಿಗಳು ಮತ್ತು ಕಾರ್ಮಿಕರ ಭವಿಷ್ಯವೂ ಅಪಾಯಕ್ಕೆ ಸಿಲುಕುತ್ತದೆ ಇದರ ಬಗ್ಗೆ ಕರ್ನಾಟಕ ವಿದ್ಯುತ್‌ಚ್ಛಕ್ತಿ ನಿಯಂತ್ರಣ ಆಯೋಗಕ್ಕೆ ಅರ್ಜಿ ಸಲ್ಲಿಸಲಾಗಿದೆ. ಅದಕ್ಕೆ ಕೆಇಆರ್‌ಸಿಯೂ ಆಕ್ಷೇಪಣೆ ಆಹ್ವಾನಿಸಲಾಗಿದೆ ಹಲವು ಸಂಘಟನೆಗಳು ಆಕ್ಷೇಪಣೆ ಸಲ್ಲಿಸಿವೆ. ಅವುಗಳನ್ನು ಪರಿಗಣಿಸಿ, ಸರ್ಕಾರ ತನ್ನ ನಿರ್ಧಾರದಿಂದ ಹಿಂದೆ ಸರಿಯಬೇಕು ದೆಹಲಿ, ಓರಿಸ್ಸಾ ಮುಂತಾದೆಡೆ ಖಾಸಗಿಯವರಿಗೆ ನೀಡಲಾಗಿದ್ದು, ವಿದ್ಯುತ್ ಬೆಲೆ ಹೆಚ್ಚಳವಾಗಿದೆ. ಇದನ್ನು ರಾಜ್ಯ ಸರ್ಕಾರವು ಪರಿಗಣಿಸಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯ ನೇತೃತ್ವವನ್ನು ವಿದ್ಯುತ್ ಖಾಸಗೀಕರಣ ವಿರೋಧಿ ಹೋರಾಟ ಸಮಿತಿಯ, ಸಹ ಸಂಚಾಲಕರಾದ ವಕ್ಕಲೇರಿ ರಾಜಪ್ಪ, ಎನ್‌.ಎನ್.ಶ್ರೀರಾಮ್, ಅಬ್ಬಣಿ ಶಿವಪ್ಪ, ವಿ.ಗೀತಾ, ಕೆ.ನಾರಾಯಣಗೌಡ, ವರದೇನಹಳ್ಳಿ ವೆಂಕಟೇಶ್, ರಾಮುಶಿವಣ್ಣ, ವಡಗೂರು ರಾಮು, ಮಾರ್ಜೇನಹಳ್ಳಿ ಬಾಬು, ಟಿ.ವಿಜಯಕುಮಾರ್, ಭೀಮರಾಜ್, ನಾರಾಯಣರೆಡ್ಡಿ, ಕವಿಪ್ರ ನಿಗಮ ನೌಕರರ ಸಂಘದ ಕೇಂದ್ರ ಸಮಿತಿ ಸದಸ್ಯ ವೆಂಕಟೇಶ್, ಸ್ಥಳೀಯ ನೌಕರರ ಸಂಘದ ಅಧ್ಯಕ್ಷ ಗಾಂಧಿನಗರ ಸುಬ್ರಮಣಿ, ಕಾರ್ಯದರ್ಶಿ ಮಲ್ಲಿಕಾರ್ಜುನ್, ಪದಾಧಿಕಾರಿಗಳಾದ ಶ್ರೀನಾಥ್, ವಿಜಿಕುಮಾರ್ ಫೈರೋಜ್ ಖಾನ್ ಸೇರಿದಂತೆ ವಿವಿಧ ಜನಪರ ಸಂಘಟನೆಗಳ ಪದಾಧಿಕಾರಿಗಳು, ಮುಖಂಡರು ಬೆಸ್ಕಾಂ ನೌಕರರು, ರೈತರು, ಹಾಗೂ ಸಾರ್ವಜನಿಕರು ದೊಡ್ಡ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

 

Donate Janashakthi Media

Leave a Reply

Your email address will not be published. Required fields are marked *