ಕೋಲಾರ: ತಾಲ್ಲೂಕಿನ ಕೊಂಡರಾಜನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪುಷ್ಪಾ ಅವರು ಶುಕ್ರವಾರ ಆತ್ಮಹತ್ಯೆಗೆ ಯತ್ನಿಸಿದ್ದು, ಜಾಲಪ್ಪ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮನೆಯಲ್ಲಿ ನಿದ್ದೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಅಸ್ವಸ್ಥರಾಗಿದ್ದ ಅವರನ್ನು ಕುಟುಂಬ ಸದಸ್ಯರು ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದಾರೆ. ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪುಷ್ಮಾ ಅವರ ದೇಹಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
‘ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ನಾಗೇಶ್ ಹಾಗೂ ಸದಸ್ಯ ವಿಜಯ್‌ಕುಮಾರ್ ಅವರ ಕಿರುಕುಳದಿಂದ ಬೇಸರಗೊಂಡು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ’ ಎಂದು ಪುಷ್ಪಾ ಅವರು ಆತ್ಮಹತ್ಯೆಗೆ ಯತ್ನಿಸುವುದಕ್ಕೂ ಮುನ್ನ ಪತ್ರ ಬರೆದಿಟ್ಟಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.
ಪುಷ್ಪಾ ರವರು ಅಧಿಕಾರ ಸ್ವೀಕರಿಸಿದ ದಿನದಂದಲೂ ಅವರಿಗೆ ಸವರ್ಣೀಯರು ಒಂದಿಲ್ಲೊಂದು ಕಿರುಕುಳ ನೀಡುತ್ತಿದ್ದಾರೆಂದು ಆರೋಪಿಸಲಾಗಿದ್ದು, ಇದೇ ಕಾರಣಕ್ಕೆ ಅವರು ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಇನ್ನೊಂದೆಡೆ ಅವರ ಪತಿಯ ಹಸ್ತಕ್ಷಪೇಪ ಹೆಚ್ಚಾಗಿದ್ದ ಕಾರಣ ಇತರೆ ಸದಸ್ಯರು ಆಕ್ಷೇಪ ವ್ಯಕ್ತಪಡಿಸುತ್ತಿದ್ದರು, ಇತ್ತ ಪತಿಯ ಮಾತನ್ನು ಕೇಳಲಾಗದ ಸ್ಥಿತಿ ಒಂದು ಕಡೆ ಹಾಗೂ ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲಾಗದ ಸ್ಥಿತಿ ಒಂದು ಕಡೆ ಹಾಗಾಗಿ ಗೊಂದಲಕ್ಕೆ ಸಿಲುಕಿ ಆತ್ಮಹತ್ಯೆಗೆ ಯತ್ನಸಿದ್ದಾರೆ ಎಂಬ ಮಾತುಗಳು ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿದೆ.
ಅಂಬೇಡ್ಕರ್ ಸೇವಾ ಸಮಿತಿಯ ಸಂಪಾದಕರಾದ ಕೆ.ಎಂ ಸಂದೇಶ್ ರವರು ಆಸ್ಪತ್ರೆಗೆ ಭೇಟಿ ನೀಡಿ ಈ ಸಂಬಂಧ ಸರ್ವಣಿಯರ ಅಟ್ಟಹಾಸವನ್ನು ಖಂಡಿಸಿ ಪ್ರತಿಭಟನೆಗೆ ಕರೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.