ಮಂಗಳೂರು: ಅನಾರೋಗ್ಯದಿಂದ ಬಳಲುತ್ತಿದ್ದ ಕೊಂಕಣಿ ಸಂಗೀತ ಕ್ಷೇತ್ರದ ದಿಗ್ಗಜ, ಜನ ಚಳುವಳಿಯ ಒಡನಾಡಿ ಎರಿಕ್ ಒಝಾರಿಯೋ ನಿಧನರಾಗಿದ್ದಾರೆ ಅವರಿಗೆ 76 ವರ್ಷ ವಯಸ್ಸಾಗಿತ್ತು.
ಹಲವಾರು ದಶಕಗಳಿಂದ, ಅವರು ತಮ್ಮ ಸೃಜನಶೀಲ ಮತ್ತು ಸಾಂಸ್ಥಿಕ ಪ್ರಯತ್ನಗಳ ಮೂಲಕ ಕೊಂಕಣಿ ಭಾಷೆಯನ್ನು ಸಂರಕ್ಷಿಸುವಲ್ಲಿ ಮತ್ತು ಉತ್ತೇಜಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.
ಇದನ್ನೂ ಓದಿ: ಭೂಸ್ವಾಧೀನ: ರೈತರ ಪ್ರತಿಭಟನಾ ಸ್ಥಳಕ್ಕೆ ಶಾಸಕ ಸತೀಶ್ ರೆಡ್ಡಿ ಭೇಟಿ
ಎರಿಕ್ ಒಜಾರಿಯೊ ಎಂದು ಜನಪ್ರಿಯರಾಗಿದ್ದ ಇವರು ಮೇ 18, 1949 ರಂದು ಮಂಗಳೂರಿನ ಜೆಪ್ಪುವಿನಲ್ಲಿ ಜನಿಸಿದರು. ಇವರು ಪ್ರಸಿದ್ಧ ಕೊಂಕಣಿ ಸಂಗೀತ ಸಂಯೋಜಕ, ಸಾಂಸ್ಕೃತಿಕ ಕಾರ್ಯಕರ್ತ ಮತ್ತು ಕೊಂಕಣಿ ಸಮುದಾಯದ ಬಗ್ಗೆ ಅಪಾರ ಕಾಳಜಿಯಿರುವ ವ್ಯಕ್ತಿಯಾಗಿ ಗುರುತಿಸಿಕೊಂಡಿದ್ದರು.
ಅನಾರೋಗ್ಯದ ಹಿನ್ನೆಲೆಯಲ್ಲಿ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅದರೆ ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಕೊನೆಯುಸಿರೆಳೆದರು. ಸಾಂಸ್ಕೃತಿಕ ಸಂಘಟನೆ ಮಾಂಡ್ ಸೋಬಾಣ್ ಸಂಸ್ಥೆಯನ್ನು ಸ್ಥಾಪಿಸಿ ಕೊಂಕಣಿ ಪ್ರದರ್ಶನ ಕಲೆಗಳಿಗೆ ಉತ್ತೇಜನ ನೀಡಿದರು. ಕೊಂಕಣಿ ಸಂಸ್ಕೃತಿಯನ್ನು ಕಲಿಸುವ ಮತ್ತು ಉಳಿಸುವ ನಿಟ್ಟಿನಲ್ಲಿ ಶಕ್ತಿನಗರದಲ್ಲಿ ಕಲಾಂಗಣ ಪಾಂರಂಪರಿಕ ಕೇಂದ್ರವನ್ನು ನಿರ್ಮಾಣ ಮಾಡಿದರು. ರಾಜ್ಯದೆಲ್ಲೆಡೆ ಕೊಂಕಣಿಯನ್ನು ಶಾಲೆಗಳಲ್ಲಿ ಐಚ್ಛಿಕ ಭಾಷೆಯಾಗಿ ಅಳವಡಿಕೆಯಾಗುವ ನಿಟ್ಟಿನಲ್ಲಿ ಪ್ರಮುಖ ಪಾತ್ರವಹಿಸಿದ್ದರು.
ಇದನ್ನೂ ನೋಡಿ: ಸೌಹಾರ್ದತೆಯ ತಾಣ, ಮೊಹಮ್ಮದ್ ಗವಾನ್ ಮದರಸಾ Janashakthi Media
