ಕೋಮು ಪ್ರಚೋದನೆ ಭಾಷಣ ಮಾಡಿದ ಆಂದೋಲದ ಸಿದ್ದಲಿಂಗ ಶ್ರೀ ದೋಷಿ; ನ್ಯಾಯಾಲಯ ತೀರ್ಪು

ಯಾದಗಿರಿ: ನಗರದ ಪದವಿಪೂರ್ವ ಕಾಲೇಜು ಮೈದಾನದಲ್ಲಿ 2015ರ ಜನವರಿ 2ರಂದು ವಿಶ್ವ ಹಿಂದೂ ಪರಿಷತ್ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಕೋಮು ಪ್ರಚೋದನೆ ಭಾಷಣ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಸಿವಿಲ್‌ ನ್ಯಾಯಾಲಯ ಆಂದೋಲದ ಸಿದ್ದಲಿಂಗ ಶ್ರೀ ಸ್ವಾಮಿ ದೋಷಿ ಎಂದು ತೀರ್ಪು ನೀಡಿದೆ.

ಮುಸ್ಲಿಂ ಸಮುದಾಯದ ಬಗ್ಗೆ ಅವಹೇಳನಕಾರಿಯಾಗಿ ಭಾಷಣ ಮಾಡಿದ್ದ ಆರೋಪಿ ಸಿದ್ದಲಿಂಗ ಶ್ರೀ ಸ್ವಾಮಿ ವಿರುದ್ಧ ಪ್ರಕರಣ ದಾಖಲಾಗಿತ್ತು. ಆರೋಪಿ ವಿರುದ್ಧ ಐಪಿಸಿ ಕಲಂ 153 (ಎ), 295ರಡಿಯಲ್ಲಿ ಯಾದಗಿರಿ ನಗರ ಪೊಲೀಸ್ ಠಾಣೆಯ ಪೊಲೀಸರು ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ 8 ವರ್ಷಗಳ ಸುದೀರ್ಘ ವಿಚಾರಣೆ ನಡೆಸಿದ ನ್ಯಾಯಾಧೀಶ ರವೀಂದ್ರ ಹೊನೋಲೆ ತೀರ್ಪು ಪ್ರಕಟಿಸಿದ್ದಾರೆ.

ಇದನ್ನು ಓದಿ: ಕಲಬುರಗಿ ನಿಷೇಧಾಜ್ಞೆ: ಶ್ರೀರಾಮಸೇನೆ ರಾಜ್ಯಾಧ್ಯಕ್ಷ ಬಂಧನ-ಪ್ರಮೋದ್ ಮುತಾಲಿಕ್, ಚೈತ್ರಾ ಕುಂದಾಪುರಗೆ ನಿರ್ಬಂಧ

ಗುರುವಾರ(ಮಾರ್ಚ್‌ 16ರಂದು) ನ್ಯಾಯಾಧೀಶರು, ಆಂದೋಲದ ಕರುಣೇಶ್ವರ ಮಠದ ಪೀಠಾಧಿಪತಿ ಹಾಗೂ ಶ್ರೀರಾಮಸೇನೆ ರಾಜ್ಯಾಧ್ಯಕ್ಷ ಸಿದ್ದಲಿಂಗ ಶ್ರೀ ಸ್ವಾಮಿ ಅವರನ್ನು ದೋಷಿ ಎಂದು ತೀರ್ಪು ನೀಡಿದ್ದಾರೆ.

ತೀರ್ಪು ನೀಡುತ್ತಿದ್ದಂತೆ ದೋಷಿಯ ಹಿನ್ನೆಲೆಯ ವರದಿ ನೀಡುವಂತೆ ಪ್ರೋಬೇಷನರಿ ಅಧಿಕಾರಿಗಳಿಗೆ ನ್ಯಾಯಾಧೀಶರು ಸೂಚಿಸಿದ್ದಾರೆ. ಹಿನ್ನೆಲೆಯ ವರದಿ ಆಧಾರದ ಮೇಲೆ ಆಂದೋಲದ ಸಿದ್ದಲಿಂಗ ಶ್ರೀ ಸ್ವಾಮಿಗೆ ಶಿಕ್ಷೆ ಪ್ರಮಾಣ ನಿರ್ಧಾರವಾಗಲಿದೆ.

ಇಲ್ಲಿ ಕ್ಲಿಕ್‌ ಮಾಡಿ : ಜನಶಕ್ತಿ ಮೀಡಿಯಾ ವಾಟ್ಸ್‌ಪ್‌ ಗುಂಪು ಸೇರಲು ಈ ಲಿಂಕ್‌ ಕ್ಲಿಕ್‌ ಮಾಡಿ

Donate Janashakthi Media

Leave a Reply

Your email address will not be published. Required fields are marked *