ಕೊಪ್ಪಳ : ಇಂದು ನಾಡಿನಾದ್ಯಂತ 68ನೇ ಕರ್ನಾಟಕ ರಾಜ್ಯೋತ್ಸವವನ್ನು ಸಂಭ್ರಮವನ್ನು ಆಚರಿಸಲಾಗುತ್ತಿದೆ. ಇನ್ನೂ ಹಲವೆಡೆ ರಾಜ್ಯೋತ್ಸವವನ್ನು ವಿಶಿಷ್ಟವಾಗಿ ಆಚರಿಸಲಾಗುತ್ತಿದ್ದರೆ, ಕೊಪ್ಪಳ ಜಿಲ್ಲೆಯ ಕುಕನೂರು ಪಟ್ಟಣದ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ನಿರ್ವಾಹಕರೊಬ್ಬರು ಕರ್ನಾಟಕ ರಾಜ್ಯೋತ್ಸವವನ್ನು ವಿನೂತನವಾಗಿ ಆಚರಿಸಿದ್ದಾರೆ.
ಕುಕನೂರಿನಿಂದ ಹುಬ್ಬಳ್ಳಿಗೆ ಹೊರಟ ಬಸ್ಗೆ ಆಗಮಿಸಿದ ಪ್ರಯಾಣಿಕರಿಗೆ ನಿರ್ವಾಹಕ ಅಶೋಕ್ ಭಂಗಿ ಅವರು ಎಲ್ಲರಿಗೂ ಕನ್ನಡದ ಶಾಲು ನೀಡಿ ಸ್ವಾಗತಿಸಿದರು. ಟಿಕೆಟ್ ವಿತರಿಸಿದ ಬಳಿಕ ನಿರ್ವಾಹಕರು ಕನ್ನಡ ಹಾಡು ಹೇಳಿ, ಜೊತೆಗೆ ಹಾಡಿಗೆ ತಕ್ಕಂತೆ ನೃತ್ಯ ಮಾಡಿ ಪ್ರಯಾಣಿಕರನ್ನು ರಂಜಿಸಿದ್ದಾರೆ. ನಂತರ ಬಸ್ನಲ್ಲಿದ್ದ ಪ್ರಯಾಣಿಕರಿಗೆ ಸಿಹಿ ತಿಂಡಿ ವಿತರಿಸಿ ವಿಶೇಷವಾಗಿ ಕರ್ನಾಟಕ ರಾಜ್ಯೋತ್ಸವವನ್ನು ಆಚರಿಸಿದ್ದಾರೆ.
ಇದನ್ನೂ ಓದಿ: ಇಂದಿನಿಂದ ಎಲ್ಲಾ ಸರ್ಕಾರಿ ಶಾಲೆಗಳಿಗೆ ಉಚಿತ ನೀರು ಮತ್ತು ವಿದ್ಯುತ್ ನೀಡಲಾಗುವುದು| ಸಿಎಂ ಸಿದ್ದರಾಮಯ್ಯ ಘೋಷಣೆ
ಪ್ರಯಾಣಿಕರಿಂದ ಮೆಚ್ಚುಗೆ: ಸಾರಿಗೆ ಬಸ್ಸನ್ನು ಕನ್ನಡ ಧ್ವಜ ಹಾಗೂ ವಿವಿಧ ಹೂವುಗಳಿಂದ ಅಲಂಕಾರ ಮಾಡಲಾಗಿತ್ತು. ಇದನ್ನು ಕಂಡು ಬಸ್ನಲ್ಲಿದ್ದ ಪ್ರಯಾಣಿಕರು ಮೆಚ್ಚುಗೆ ವ್ಯಕ್ತಪಡಿಸಿದರು.
ರಾಜ್ಯೋತ್ಸವ ನಿಮಿತ್ತ ಕುಕನೂರು ಬಸ್ ನಿಲ್ದಾಣದಲ್ಲಿ ಮೊದಲು ರಾಜ್ಯೋತ್ಸವ ಆಚರಿಸಲಾಯಿತು. ಈ ವೇಳೆ ಬಸ್ ಕಂಡಕ್ಟರ್, ಚಾಲಕ ಮತ್ತು ಇತರ ಸಿಬ್ಬಂದಿ ಉಪಸ್ಥಿತರಿದ್ದರು.
ವಿಡಿಯೋ ನೋಡಿ: ಬಾರಿಸು ಕನ್ನಡ ಡಿಂಡಿಮವ – ಕುವೆಂಪು – ಹಾಡಿದವರು : ಶ್ವೇತಾ ಮೂರ್ತಿ Janashakthi Media