ಕೊತ್ತಲ ಬಸವೇಶ್ವರ ಭಾರತೀಯ ಸಂಸ್ಕೃತಿ ಉತ್ಸವ’ಕ್ಕೆ ರೋವರ್ ಮತ್ತು ರೇಂಜರ್ಸ್‌ ವಿದ್ಯಾರ್ಥಿಗಳನ್ನು ನಿಯೋಜನೆ – ಎಸ್‌ಎಫ್‌ಐ ಆಕ್ರೋಶ

ಬೆಂಗಳೂರು : ಜನವರಿ 28 ರಿಂದ ಫೆಬ್ರವರಿ 07  ರವರೆಗೆ 11 ದಿನಗಳ ಕಾಲ ನಡೆಯುವ ‘ಕೊತ್ತಲ ಬಸವೇಶ್ವರ ಭಾರತೀಯ ಸಂಸ್ಕೃತಿ ಉತ್ಸವ’ ಕಾರ್ಯಕ್ರಮಕ್ಕೆ ರೋವರ್ ಮತ್ತು ರೇಂಜರ್ಸ್‌ ವಿದ್ಯಾರ್ಥಿಗಳನ್ನು ನಿಯೋಜನೆ ಮಾಡಿರುವುದಕ್ಕೆ ಭಾರತ ವಿದ್ಯಾರ್ಥಿ ಫೆಡರೇಷನ್‌ (ಎಸ್‌ಎಫ್‌ಐ) ಕರ್ನಾಟಕ ರಾಜ್ಯ ಸಮಿತಿ ಆಕ್ರೋಶವ್ಯಕ್ತಪಡಿಸಿದೆ.

11 ದಿನ ನಡೆಯುವ ಈ ಉತ್ಸವದಲ್ಲಿ ಸರ್ಕಾರಿ ಹಾಗೂ ಖಾಸಗಿ ಅನುದಾನಿತ ಕಾಲೇಜುಗಳ ರೋವರ್ ವಿದ್ಯಾರ್ಥಿಗಳು ಮತ್ತು ರೇಂಜರ್ಸ್‌ ವಿದ್ಯಾರ್ಥಿಗಳನ್ನು ಸ್ವಯಂ ಸೇವಕರಾಗಿ ಕಾರ್ಯನಿರ್ವಹಿಲು ಕಳುಹಿಸುವಂತೆ ಕಾಲೇಜು ಶಿಕ್ಷಣ ಇಲಾಖೆ ದಿನಾಂಕ 22-01-2025 ರಂದು ಕಲಬುರಗಿ ಜಿಲ್ಲಾಧಿಕಾರಿಗಳು ಮತ್ತು ಜಂಟಿ ನಿರ್ದೇಶಕರು, ಪ್ರಾದೇಶಿಕ ಕಚೇರಿ, ಕಾಲೇಜು ಶಿಕ್ಷಣ ಇಲಾಖೆ ಇವರಿಗೆ ಕಾಲೇಜು ಶಿಕ್ಷಣ ನಿರ್ದೇಶಕರು ಆದೇಶ ಮಾಡಿರುತ್ತಾರೆ. ಜೊತೆಗೆ ಈ ಕಾರ್ಯಕ್ರಮದಲ್ಲಿ ಅಧ್ಯಾಪಕರು ಅನ್ಯಕಾರ್ಯ ನಿಮಿತ್ತ ಭಾಗವಹಿಸುವಂತೆ ತಿಳಿಸಲಾಗಿದೆ. ಸ್ವತಃ ಕಾಲೇಜು ಶಿಕ್ಷಣ ಇಲಾಖೆ ವಿದ್ಯಾರ್ಥಿಗಳಲ್ಲಿ ಮತೀಯವಿಚಾರಗಳನ್ನು ಪ್ರೋತ್ಸಾಹಿಸುವ ಕೆಲಸ ಮಾಡುತ್ತಿರುವುದು ಶಿಕ್ಷಣ ವಿರೋಧಿ ನಡೆಯಾಗಿದೆ ಎಂದು ರಾಜ್ಯಾಧ್ಯಕ್ಷ  ಶಿವಪ್ಪ , ರಾಜ್ಯ ಕಾರ್ಯದರ್ಶಿ ವಿಜಯ್ ಕುಮಾರ್ ಆರೋಪಿಸಿದ್ದಾರೆ.

ಕಾಲೇಜು ಶಿಕ್ಷಣ ಇಲಾಖೆಯ ಆದೇಶ ನೋಡಲು ಈ ಲಿಂಕ್‌ ಕ್ಲಿಕ್‌ ಮಾಡಿ

ಕಲ್ಯಾಣ ಕರ್ನಾಟಕದ ಭಾಗದಲ್ಲಿ ಶಿಕ್ಷಕರು ಮತ್ತು ಅಧ್ಯಾಪಕರ ಕೊರತೆ ಇದೆ ಜೊತೆಗೆ ಪದವಿ ಪರೀಕ್ಷೆಗಳು ನಡೆಯುತ್ತಿದೆ. ಈಗ ನಡೆಯುತ್ತಿರುವ ಪರೀಕ್ಷೆಗಳು ಕಾಲೇಜು ಪ್ರಾರಂಭವಾದ 3 ತಿಂಗಳಿನಲ್ಲಿಯೇ ನಿಗದಿತ ಪಠ್ಯಕ್ರಮ ( ಪಾಠ )ಮುಗಿಸದೆ ಪರೀಕ್ಷೆ ಸರ್ಕಾರ ನಡೆಸುತ್ತಿದೆ. ಗುಣಮಟ್ಟದ ಶಿಕ್ಷಣ ನೀಡಬೇಕಿದ್ದ ಸರ್ಕಾರ ಇಂದು ಕಾಟಚಾರದ ಶಿಕ್ಷಣ ನೀಡಲು ಮುಂದಾಗಿದೆ. ಜೊತೆಗೆ ಕಾಲೇಜುಗಳಲ್ಲಿ ಮೂಲಭೂತ ಸೌಕರ್ಯಗಳಿಲ್ಲದೆ ವಿದ್ಯಾರ್ಥಿಗಳು ಹಲವಾರು ಸಮಸ್ಯೆ ಎದುರಿಸುತ್ತಿದ್ದಾರೆ ಅದರ ಕಡೆ ಗಮನ ನೀಡದೆ ವಿದ್ಯಾರ್ಥಿಗಳ ಗುಣಮಟ್ಟ ಶಿಕ್ಷಣವನ್ನು ಕುಂಟಿತಗೊಳಿಸುವ ಪ್ರಯತ್ನ ಮಾಡುತ್ತಿರುವುದು ದುರಂತ. ಧಾರ್ಮಿಕ ಕಾರ್ಯಕ್ರಮಕ್ಕೆ ಸ್ವಯಂ ಸೇವಕರಾಗಿ ವಿದ್ಯಾರ್ಥಿಗಳನ್ನು ಮತ್ತು ಅಧ್ಯಾಪಕರನ್ನು ಭಾಗವಹಿಸಲು ಆದೇಶ ಮಾಡಿರುವುದು ಖಂಡನೀಯ. ತಕ್ಷಣ ಈ ಆದೇಶವನ್ನು ವಾಪಸ್ ಪಡೆಯಬೇಕೆಂದು ಎಸ್‌ಎಫ್‌ಐ ಆಗ್ರಹಿಸಿದೆ. ಈ ಕುರಿತು ಕಲಬುರ್ಗಿ ಜಿಲ್ಲಾ ಸಮಿತಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದೆ.  ಈ ವೇಳೆ ಜಿಲ್ಲಾ ಕಾರ್ಯದರ್ಶಿ ಸುಜಾತಾ ವೈ, ಮುಖಂಡರಾದ ಪ್ರೇಮ್‌, ನಾಗಮ್ಮ, ಯುವರಾಜ, ದರ್ಶನ್‌, ದ್ರೌಪದಿ, ಪ್ರಜ್ವಲ್‌ ಇದ್ದರು.

Donate Janashakthi Media

Leave a Reply

Your email address will not be published. Required fields are marked *