ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಉನ್ನತ ಮಟ್ಟದ ಸಮಿತಿ ರಚನೆ: ಕೆಪಿಸಿಸಿ

ಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿಯು (ಕೆಪಿಸಿಸಿ), ರಾಜ್ಯದಲ್ಲಿ ಮತ್ತೆ ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು, ವಿದ್ಯಾರ್ಥಿ ದಿಸೆಯಿಂದಲೇ ನಾಯಕತ್ವ ಗುಣಗಳನ್ನು ಬೆಳೆಸುವ ದೃಷ್ಟಿಯಿಂದ ಚುನಾವಣೆ ಪ್ರಕ್ರಿಯೆ, ರೂಪು-ರೇಷೆ ಕುರಿತು ಅಧ್ಯಯನ ಮಾಡಲು ಉನ್ನತ ಮಟ್ಟದ ಸಮಿತಿ ರಚಿಸಿದೆ.

ಈ ಕುರಿತು ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್‌ ಸಮಿತಿ ಸಂಚಾಲಕರು, ಸದಸ್ಯರನ್ನು ನೇಮಿಸಿ ಆದೇಶ ಹೊರಡಿಸಿದ್ದಾರೆ.

ವಿದ್ಯಾರ್ಥಿ ಸಂಘದ ಚುನಾವಣೆಗಳನ್ನು ನಡೆಸಬೇಕು ಎಂಬ ಪಕ್ಷದ ನಾಯಕರು ಹಾಗೂ ಕಾರ್ಯಕರ್ತರ ಅಭಿಪ್ರಾಯಗಳ ಆಧಾರದ ಮೇಲೆ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್‌ ಈ ಸಮಿತಿ ರಚನೆ ಮಾಡಿದ್ದಾರೆ.

ಇದನ್ನೂ ಓದಿ: ಬೆಂಗಳೂರು | ಕೋಗಿಲು‌ ಲೇ ಔಟ್ ಸ್ಲಂ ಮನೆಗಳಿಗೆ ಸೂಕ್ತ ಪುನರ್ವಸತಿ ಕಲ್ಪಿಸಿ – ಎ.ಎ.‌ರಹೀಮ್‌

ಈ ಸಮಿತಿಗೆ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣಪ್ರಕಾಶ ಆರ್. ಪಾಟೀಲ್ ಸಂಚಾಲಕರಾಗಿ ನೇಮಕಗೊಂಡಿದ್ದಾರೆ.

ಉಳಿದಂತೆ ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್‌, ಮುಖ್ಯ ಸಚೇತಕ ಸಲೀಂ ಅಹಮದ್‌, ಶಾಸಕರಾದ ರಿಜ್ವಾನ್‌ ಅರ್ಷದ್‌, ಬಿ. ಶಿವಣ್ಣ, ವಿಧಾನ ಪರಿಷತ್‌ ಸದಸ್ಯರಾದ ಪುಟ್ಟಣ್ಣ, ಬಸವನಗೌಡ ಬಾದರ್ಲಿ ಹಾಗೂ ಎಚ್‌.ಎಸ್. ಮಂಜುನಾಥ್‌, ಕೀರ್ತೀ ಗಣೇಶ್‌ ಈ ಸಮಿತಿಯಲ್ಲಿ ಇದ್ದಾರೆ.

ವಿದ್ಯಾರ್ಥಿ ಚುನಾವಣೆಯನ್ನು ಯಾವ ಹಂತದಲ್ಲಿ ನಡೆಸಬಹುದು, ಸಾಧಕ-ಬಾಧಕ, ಚುನಾವಣೆ ಪ್ರಕ್ರಿಯೆ, ವ್ಯವಸ್ಥೆ, ಪಾರದರ್ಶಕತೆ, ರಾಜಕೀಯೇತರ ರೀತಿಯಲ್ಲಿ ಚುನಾವಣೆ ನಡೆಸಬೇಕೇ ಎಂಬುದು ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ಅಧ್ಯಯನ ನಡೆಸಲು ಸಮಿತಿಗೆ ಸ್ಪಷ್ಟಪಡಿಸಲಾಗಿದೆ.

ಸಮಿತಿ ರಚನೆಯಾದ ಹದಿನೈದು ದಿನಗಳ ಒಳಗಾಗಿ ಸಮಿತಿ ಅಧ್ಯಯನ ನಡೆಸಿ ವರದಿ ಸಲ್ಲಿಸಬೇಕು ಎಂದು ಸೂಚಿಸಲಾಗಿದೆ.

ಇದನ್ನೂ ನೋಡಿ: ಬೀದಿಯಲ್ಲಿ ಕ್ರಿಸ್ಮಸ್ ವಿರುದ್ಧ ಭಜರಂಗಿಗಳ ಅಟ್ಟಹಾಸಚರ್ಚ್ ನಲ್ಲಿ ಪ್ರಧಾನಿಗಳ ಮಂದಹಾಸ?? Janashakthi Media

Donate Janashakthi Media

Leave a Reply

Your email address will not be published. Required fields are marked *