ಕೆಪಿಟಿಸಿಎಲ್‌ ಅಕ್ರಮ: ಮತ್ತೆ ಮೂವರ ಬಂಧನ

ಬೆಳಗಾವಿ: ಕೆಪಿಟಿಸಿಎಲ್‌ನಲ್ಲಿ ಕಿರಿಯ ಅಭಿಯಂತರ ಹುದ್ದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಅವರು ನಡೆಸಿದ ಪರೀಕ್ಷೆಯಲ್ಲಿ ಅಕ್ರಮಕ್ಕೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಬೆಳಗಾವಿ ಪೊಲೀಸರು, ತನಿಖೆಯನ್ನು ಎಲ್ಲ ಆಯಾಮಗಳಲ್ಲಿ ತೀವ್ರಗೊಳಿಸಿದ್ದಾರೆ. ಈ ಕುರಿತಂತೆ ಮತ್ತೆ ಮೂವರನ್ನು ಬಂಧಿಸಿದ್ದಾರೆ.

ಅತಿಥಿ ಉಪನ್ಯಾಸಕ, ಅಭ್ಯರ್ಥಿಗಳ ಇಬ್ಬರು ಸಂಬಂಧಿಕರನ್ನು ಬಂಧನ ಮಾಡಿಲಾಗಿದೆ. ಲೀಕ್ ಆದ ಪ್ರಶ್ನೆ ಪತ್ರಿಕೆ ನೋಡಿ ಅತಿಥಿ ಉಪನ್ಯಾಸಕ ಆದೇಶ ನಾಗನೂರಿ ಉತ್ತರ ಬರೆಯುತ್ತಿದ್ದರು ಎನ್ನಲಾಗುತ್ತಿದೆ. ಗದಗ ಮುನ್ಸಿಪಲ್ ಪಿಯು ಕಾಲೇಜಿನಿಂದ ಪ್ರಶ್ನೆಪತ್ರಿಕೆ ಲೀಕ್ ಆಗಿತ್ತು. ಹುಕ್ಕೇರಿ ತಾಲೂಕಿನ ಶಿರಹಟ್ಟಿ ಬಿ.ಕೆ.ಗ್ರಾಮದ ತೋಟದ ಮನೆಯಲ್ಲಿ ಉತ್ತರ ಸಿದ್ಧಪಡಿಸುತ್ತಿದ್ದ. ಉತ್ತರ ಸಿದ್ಧಪಡಿಸಿ ಕಿಂಗ್ ಪಿನ್ ಸಂಜು ಭಂಡಾರಿ ಸೇರಿ ಇತರ ಕಿಂಗ್‌ಪಿನ್‌ಗಳಿಗೆ ನೀಡುತ್ತಿದ್ದ. ಆ ಉತ್ತರಗಳನ್ನು ಬ್ಲ್ಯೂಟೂಥ್ ಡಿವೈಸ್‌ದೊಂದಿಗೆ ಹಾಜರಾದ ಅಭ್ಯರ್ಥಿಗಳಿಗೆ ತಲುಪಿಸುವ ವ್ಯವಸ್ಥೆ ಮಾಡಲಾಗುತ್ತಿತ್ತು. ಇನ್ನುಳಿದ ಇಬ್ಬರು ಆರೋಪಿಗಳು ಪರೀಕ್ಷಾರ್ಥಿಗಳ ಸಂಬಂಧಿಕರಾಗಿದ್ದಾರೆ. ತಮ್ಮ ಸಂಬಂಧಿಗಳ ಸಲುವಾಗಿ ಬ್ಲ್ಯೂಟೂಥ್ ಡಿವೈಸ್ ಪಡೆದಿದ್ದ ಮಡಿವಾಳಪ್ಪ ತೋರಣಗಟ್ಟಿ, ಶಂಕರ್ ಉಣಕಲ್ ಅರೆಸ್ಟ್ ಆಗಿದ್ದಾರೆ.

ಇದನ್ನೂ ಓದಿ : ರಾಜ್ಯದಲ್ಲಿ ಮತ್ತೊಂದು ಹಗರಣ ಬೆಳಕಿಗೆ – 9 ಮಂದಿ ಬಂಧನ

9 ಜನ ಆರೋಪಿಗಳ ಬಂಧನ: ಪ್ರಕರಣಕ್ಕೆ ಸಂಬಂಧಿಸಿದಂತೆ ಗೋಕಾಕ್ ನಗರ ಪೊಲೀರು ಈ ಹಿಂದೆ 9 ಜನ ಆರೋಪಿಗಳನ್ನು ಬಂಧಿಸಿದ್ದರು. ಈ ಕುರಿತಾಗಿ ಬೆಳಗಾವಿ ಎಸ್‌ಪಿ‌ ಡಾ.ಸಂಜೀವ್ ಪಾಟೀಲ್ ಮಾತನಾಡಿ, ಗೋಕಾಕ್‌, ಗದಗದಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ ಮಾಡಿದ್ದರು. ಆ.7ರಂದು ನಡೆದಿದ್ದ ಕೆಪಿಟಿಸಿಎಲ್ ಕಿರಿಯ ಸಹಾಯಕ ಪರೀಕ್ಷೆಯಲ್ಲಿ ಗೋಕಾಕ್‌ನಲ್ಲಿ ಸ್ಮಾರ್ಟ್​ವಾಚ್ ಬಳಸಿ ಪರೀಕ್ಷೆಯಲ್ಲಿ ಅಕ್ರಮ ಎಸಗಿದ್ದರು. ಈ ಸಂಬಂಧ ಗೋಕಾಕ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಹೀಗಾಗಿ ಪರೀಕ್ಷಾರ್ಥಿ ಸಿದ್ದಪ್ಪ ಮದೀಹಳ್ಳಿ ಎಂಬುವರನ್ನು ಪೊಲೀಸರು ಬಂಧಿಸಿದ್ದರು. ಸಿದ್ದಪ್ಪ ನೀಡಿದ ಮಾಹಿತಿ ಆಧರಿಸಿ ಉಳಿದ ಆರೋಪಿಗಳ ಬಂಧನ ಮಾಡಲಾಗಿದೆ ಎಂದು ಎಸ್‌ಪಿ‌ ಡಾ.ಸಂಜೀವ್ ಪಾಟೀಲ್ ಹೇಳಿದ್ದಾರೆ.

ಎಸ್‌ಪಿ ಪ್ರಕರಣದ ತನಿಖೆಗೆ ಎರಡು ಪ್ರತ್ಯೇಕ ತಂಡಗಳನ್ನು ರಚಿಸಿದ್ದಾರೆ. ಮೂವರು ಕಿಂಗ್‌ಪಿನ್‌ಗಳಿಗಾಗಿ ಶೋಧ ಕಾರ್ಯ ಮುಂದುವರೆದಿದೆ. ಕೆಪಿಟಿಸಿಎಲ್ 600 ಕಿರಿಯ ಸಹಾಯಕ ಹುದ್ದೆಗಳಿಗಾಗಿ ರಾಜ್ಯಾದ್ಯಂತ 3 ಲಕ್ಷ ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು.

Donate Janashakthi Media

Leave a Reply

Your email address will not be published. Required fields are marked *