ಕ್ರೀಡಾಂಗಣಗಳನ್ನು ತಾತ್ಕಾಲಿಕ ಜೈಲುಗಳಾಗಿ ಬಳಸಲು ಅನುಮತಿ ನಿರಾಕರಣೆ

ನವದೆಹಲಿ: ಪಂಜಾಬ್‌ ರೈತರು ಆರಂಭಿಸಿರುವ ‘ದೆಹಲಿ ಚಲೋ’ ಪ್ರತಿಭಟನಾ ಮೆರವಣಿಗೆಯು ದೆಹಲಿಯತ್ತ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಒಂಬತ್ತು ಕ್ರೀಡಾಂಗಣಗಳನ್ನು ತಾತ್ಕಾಲಿಕ ಜೈಲುಗಳಾಗಿ ಬಳಸಲು ದೆಹಲಿ ಪೊಲೀಸರು ಅನುಮತಿ ಕೋರಿದ್ದರು. ಆದರೆ ದೆಹಲಿ ಸರ್ಕಾರ ಅನುಮತಿಯನ್ನು ನಿರಾಕರಿಸಿದೆ.

‘ಈ ಪ್ರತಿಭಟನೆ ಅಹಿಂಸಾತ್ಮಕವಾಗಿದೆ. ಅಹಿಂಸಾತ್ಮಕ ಪ್ರತಿಭಟನೆ ಪ್ರತಿಯೊಬ್ಬ ಭಾರತೀಯನ ಹಕ್ಕು. ಆದ್ದರಿಂದ ರೈತರನ್ನು ಜೈಲಿನಲ್ಲಿಡಲು ಸಾಧ್ಯವಿಲ್ಲ. ದೆಹಲಿ ಸರ್ಕಾರವು ದೆಹಲಿ ಪೊಲೀಸರ ಮನವಿಯನ್ನು ನಿರಾಕರಿಸಿದೆ’ ಎಂದು ದೆಹಲಿ ಗೃಹ ಸಚಿವ ಸತ್ಯೇಂದ್ರ ಜೈನ್‌ ಅವರು ಹೇಳಿದರು. ರೈತರ ಬೇಡಿಕೆಗಳು ನ್ಯಾಯಸಮ್ಮತವಾಗಿವೆ. ರೈತರನ್ನು ಜೈಲಿನಲ್ಲಿಡುವುದು ಸಮಸ್ಯೆಗೆ ಪರಿಹಾರವಲ್ಲ. ಅವರ ಬೇಡಿಕೆಗಳನ್ನು ಕೇಂದ್ರ ಸರ್ಕಾರ ಅಂಗೀಕರಿಸಬೇಕು ಎಂದು ಸತ್ಯೇಂದ್ರ ಜೈನ್‌ ಅವರು ಗೃಹ ಕಾರ್ಯದರ್ಶಿಗೆ ಬರೆದಿರುವ ಪತ್ರದಲ್ಲಿ ಹೇಳಿದ್ಧಾರೆ.

ಕೇಂದ್ರ ಸರ್ಕಾರದ ರೈತ ಮತ್ತು ಕಾರ್ಮಿಕ ವಿರೋಧಿ ನೀತಿಗಳನ್ನು ವಿರೋಧಿಸಿ ರೈತರು ನಡೆಸುತ್ತಿರುವ ದೆಹಲಿ ಚಲೋ ವೇಳೆ ದೆಹಲಿಗೆ ಬರುವ ರೈತರನ್ನು ಬಂಧಿಸಿಡಲು ದೆಹಲಿ ಪೊಲೀಸರು ದೆಹಲಿಯಲ್ಲಿರುವ 9 ಕ್ರೀಡಾಂಗಣಗಳನ್ನು ಬಳಸಿಕೊಳ್ಳಲು ದೆಹಲಿ ಸರ್ಕಾರದ ಅನುಮತಿ ಕೇಳಿದ್ದರು. ಆದರೆ ದೆಹಲಿ ಸರ್ಕಾರ ಅನುಮತಿ ನಿರಾಕರಿಸಿದೆ.

Donate Janashakthi Media

Leave a Reply

Your email address will not be published. Required fields are marked *