ಅತಿಹೆಚ್ಚು ಮಳೆಯಿಂದ ಆಗುವ ಅತಿವೃಷ್ಟಿಯ ಹಾನಿಯನ್ನು ತಡೆಗಟ್ಟಲು ಒಟ್ಟು 5000 ಹೋಟಿ ರೂ. ಗಳ ಜಾಗೃತ ಯೋಜನೆಯನ್ನು ರೂಪಿಸಲಾಗಿದೆ: ಕೃಷ್ಣ ಭೈರೇಗೌಡ

ಬೆಳಗಾವಿ : ಅತಿಹೆಚ್ಚು ಮಳೆಯಿಂದ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಪ್ರದೇಶಗಳಲ್ಲಿ ಪ್ರವಾಹ ರೀತಿಯಲ್ಲಿ ಉಂಟಾಗುವ ಅತಿವೃಷ್ಟಿಯ ಹಾನಿಯನ್ನು ತಡೆಗಟ್ಟಲು ಒಟ್ಟು 5000 ಹೋಟಿ ರೂ. ಗಳ ಜಾಗೃತ ಯೋಜನೆಯನ್ನು ರೂಪಿಸಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರು ಹೇಳಿದರು. ಪ್ರಸಕ್ತ ವರ್ಷ ರಾಜ್ಯದಲ್ಲಿ ಅಧಿಕ ಮಳೆಯಿಂದ ಉಂಟಾದ ಹಾವಿ ಕುರಿತಂತೆ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಶುಕ್ರವಾರ ಸರ್ಕಾರದ ಪರವಾಗಿ ಹೇಳಿಕೆ ನೀಡಿದರು.

ಬೆಂಗಳೂರು ವ್ಯಾಪ್ತಿಯಲ್ಲಿ ಅತಿಹೆಚ್ಚು ಮಳೆ ಸುರಿದಾಗ ಪದೇ ಪದೇ ಹಾವಿಗೊಳಗಾಗುವ ಪ್ರದೇಶಗಳನ್ನು ಗುರುತಿಸಲಾಗಿದೆ. ಮಳೆ ಸುರಿದಂತಹ ಸಂದರ್ಭದಲ್ಲಿ ನೀರು ಸರಾಗವಾಗಿ ಹರಿಯುವಂತೆ ರಾಜಕಾಲುವ ಹಾಗೂ ವಸತಿ ಪ್ರದೇಶದಲ್ಲಿನ ಕಾಲುವಗಳನ್ನು ಪರಿಪಕ್ಷವಾಗಿ ಸುಧಾರಿಸಲು ಕ್ರಮ ವಹಿಸಲಾಗಿದೆ. ಈ ವ್ಯಾಪ್ತಿಯಲ್ಲಿ 858 ಕಿ.ಮೀ, ರಾಜಕಾಲುವೆಗಳಿದ್ದು, ರಾಜಕಾಲುವೆ ಇಲ್ಲದ ಕಡೆ 200 ಕಿ.ಮೀ. ತಿದು ಕಾಲುವೆಗಳು ಸೇರಿದಂತೆ ಒಟ್ಟು 1100 ಕಿ.ಮೀ. ಕಾಲುವೆಗಳಲ್ಲಿ ಹೆಚ್ಚಿನ ಮಳೆ ನೀರು ಸರಾಗವಾಗಿ ಹರಿಯುವಂತೆ ಮಾಡಲು ಪಾಕೃವ ಯೋಜನೆಯನ್ನು ರೂಪಿಸಲಾಗಿದೆ.

ಈಗಾಗಲೆ 700 ಕಿ.ಮೀ. ಅಭಿವೃದ್ಧಿ ಪಡಿಸಲಾಗಿದ್ದು ಇನ್ನೂ 300 ಕಿ.ಮೀ. ರಾಜಕಾಲುವೆಯನ್ನು ಬರುವ ಒಂದು ವರ್ಷದ ಅವಧಿಯಲ್ಲಿ ಅಭಿವೃದ್ಧಿಪಡಿಸಲಾಗುವುದು, ಇದಕ್ಕಾಗಿ ಡಿಸಾಸ್ಟ್‌ ಮಿಟಿಗೇಶನ್ ಫಂಡ್ ನಡಿ 240 ಕೋಟಿ ರೂ. ಒದಗಿಸಲಾಗುತ್ತಿದೆ ಎಂದರು. ರಾಜಕಾಲುವೆಗಳ ಅಭಿವೃದ್ಧಿಗೆ 03 ಸಾವಿರ ಕೋಟಿ, ಬೆಂಗಳೂರಿನಲ್ಲಿ ಮಳೆ ಬಂದಾಗ ಪ್ರವಾಹ ತಡೆಗಟ್ಟುವ ನಿಟ್ಟಿನಲ್ಲಿ 5 ಸಾವಿರ ಕೋಟಿ ರೂ.ವೆಚ್ಚದಲ್ಲಿ ಶಾಶ್ವತ ಪರಿಹಾರ ಕ್ರಮಗಳನ್ನು ಸರಕಾರ ಕೈಗೊಳ್ಳುತ್ತಿದೆ.

ಇದನ್ನೂ ಓದಿ : ರಾಜ್ಯದಲ್ಲಿ 50 ಗ್ರಾಮಪಂಚಾಯ್ತಿಗಳ ಪ್ರಸ್ತಾವನೆ: ಬಿ.ಎಸ್.ಸುರೇಶ್

ಬೃಹತ್ ಬೆಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಮಳೆಯಿಂದಾಗುವ ಹಾನಿ ತಡೆಗಟ್ಟಲು ಒಂದು ಬಾರಿಯ ಶಾಕೃದ ಕಾಮಗಾರಿ ಕೈಗೊಳ್ಳಲು ವಿಶ್ವಬ್ಯಾಂಕ್ ನೆರವು ಪಡೆಯುವ ನಿಟ್ಟಿನಲ್ಲಿ ಈಗಾಗಲೆ 10 ಸುತ್ತಿನ ಸಭೆಗಳನ್ನು ನಡೆಸಲಾಗಿದೆ, ವಿಶ್ವಬ್ಯಾಂಕ್‌ನಿಂದ 3000 ಕೋಟಿ ರೂ. ಸಾಲ ಪಡೆದು, ಬಿಬಿಎಂಪಿ ಮೂಲಕ 2000 ಕೋಟಿ ರೂ. ವೆಚ್ಚದಲ್ಲಿ ಎಲ್ಲ ರಾಜಕಾಲುವೆಗಳನ್ನು ಅಭಿವೃದ್ಧಿಪಡಿಸಲು ಯೋಚಿಸಲಾಗಿದೆ.

ಬಿಬಿಎಂಪಿಗೆ ಹೊಸದಾಗಿ ಸೇರ್ಪಡೆಯಾಗಿರುವ 110 ಹಳ್ಳಿಗಳಲ್ಲಿ ಒಳಚರಂಡಿ ವ್ಯವಸ್ಥೆ ಇರದ ಕಡೆ ಒಳಚರಂಡಿ ವ್ಯವಸ್ಥೆಯನ್ನು ಸಮರ್ಪಕವಾಗಿ ರೂಪಿಸಿ ಸದರಿ ಒಳಚರಂಡಿ ನೀರು ನೇರವಾಗಿ ಸೇವಜ್ ಟ್ರೇಟ್‌ಮೆಂಟ್ ವಾಟರ್ ಲೈನ್‌ಗೆ ಸೇರ್ವಡೆಯಾಗುವ ನಿಟ್ಟಿನಲ್ಲಿ ಯೋಜನ ರೂಪಿಸಲಾಗಿದ್ದು, ಈ ಕಾರ್ಯಕ್ಕೆ, ಬೆಂಗಳೂರು ಜಲಮಂಡಳಿಗೆ 01 ಸಾವಿರ ಕೋಟಿ ರೂಗಳನ್ನು ಒದಗಿಸಲಾಗುತ್ತಿದೆ. ಇನ್ನಿತರ ಕಾಮಗಾರಿಗಳಿಗಾಗಿ 02 ಸಾವಿರ ಕೋಟಿ ರೂ. ಗಳನ್ನು ವೆಚ್ಚ ಮಾಡಲು ನಿರ್ಧರಿಸಲಾಗಿದೆ ಎಂದು ಸಚಿವರು ವಿವರಿಸಿದರು.

ಇನ್ನೂಳಿದ 2000 ಕೋಟಿ ರೂ. ಗಳಮ್ಮ ರಾಜ್ಯ ಸರ್ಕಾರ ಭರಿಸಲು ನಿರ್ಧರಿಸಲಾಗಿದೆ. ಬೆಂಗಳೂರಿನಲ್ಲಿ ಮಳೆಯಿಂದ ಪದೇ ಪದೇ ಹಾವಿಗೀಡಾಗುವ ಪ್ರಮುಖ ರಸ್ತೆಗಳನ್ನು ಗುರುತಿಸಲಾಗಿದ್ದು, ಇಂತಹ ರಸ್ತೆಗಳಮ್ಮ ದುರಸ್ತಿಪಡಿಸಿ, ಡಾಂಬರೀಕರಣಗೊಳಿಸಲು 695 ಕೋಟಿ ರೂ. ಗಳ ಯೋಜನೆ ರೂಪಿಸಿ, ಸಚಿವ ಸಂಪುಟದ ಅನುಮೋದನೆ ಪಡೆದು ಈಗಾಗಲೆ ಟೆಂಡರ್ ಪ್ರಕ್ರಿಯೆ ಪ್ರಾರಂಭಿಸಲಾಗಿದೆ. ಒಟ್ಟಾರೆ ಬೆಂಗಳೂರಿನಲ್ಲಿ ಅತಿಯಾದ ಮಳೆಯಾದಾಗ ಹಾನಿಯಾಗುವುದನ್ನು ಪಡೆಗಟ್ಟಲು ಸರ್ಕಾರ ಜಾಗೃತವಾದ ಯೋಜನೆಗಳನ್ನು ರೂಪಿಸಿದ್ದು, ಹಂತ ಹಂತವಾಗಿ ಅಮಾನಗೊಳಿಸಲಾಗುತ್ತಿದೆ ಎಂದು ಸಚಿವ ಕೃಷ್ಣ ಭೈರೇಗೌಡ ಹೇಳಿದರು.

ಇದನ್ನೂ ನೋಡಿ : ಕೋವಿಡ್‌ ಹಣ ತಿಂದವರನ್ನು ಬಿಡಲ್ಲ: ಡಿಸಿಎಂ ಡಿಕೆ ಶಿವಕುಮಾರ್ Janashakthi Media

Donate Janashakthi Media

Leave a Reply

Your email address will not be published. Required fields are marked *