ಬೆಂಗಳೂರು: ಇನ್ಮುಂದೆ ರಾಜ್ಯದಲ್ಲಿ ಎಲ್ಲೇ ಅಕ್ರಮ ಹಾಗೂ ಅನಧಿಕೃತ ಬಡಾವಣೆ ನಿರ್ಮಾಣ ಮಾಡಿದ್ದೇ ಆದಲ್ಲಿ, ಅಂತಹ ಬಡಾವಣೆಗಳನ್ನು ಸರ್ಕಾರ ಮುಟ್ಟುಗೋಲು ಹಾಕಿಕೊಳ್ಳುವುದಾಗಿ ಕಂದಾಯ ಸಚಿವ ಕೃಷ್ಣಬೈರೇಗೌಡ ಎಚ್ಚರಿಸಿದ್ದಾರೆ.
ಇಂದು ವಿಕಾಸಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, ರಾಜ್ಯ ಸರ್ಕಾರದಿಂದ ನೋಂದಣಿಯಿಲ್ಲದೇ, ಅನುಮತಿ ಇಲ್ಲದೇ, ಅನಧಿಕೃತ, ಅಕ್ರಮ ಬಡಾವಣೆ ನಿರ್ಮಾಣದ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಿದೆ.
ಇದನ್ನೂ ಓದಿ : ರಾಷ್ಟ್ರವನ್ನೇ ಬೆಚ್ಚಿಬೀಳಿಸಿದ ಭಯೋತ್ಪಾದಕ ದಾಳಿ: ಮೋದಿ ಸರ್ಕಾರದ ಭದ್ರತಾ ವೈಫಲ್ಯವನ್ನು ಎತ್ತಿ ತೋರಿಸುತ್ತದೆ ಕೃಷ್ಣಭೈರೇಗೌಡ
ಹೀಗೆ ನಿರ್ಮಾಣ ಮಾಡುತ್ತಿರುವುದು ಸಹಿಸೋದಿಲ್ಲ. ರಾಜ್ಯಾಧ್ಯಂತ ಅನಧಿಕೃತ ಬಡಾವಣೆಗಳಿಗೆ ಕಡಿವಾಣ ಹಾಕುವುದಾಗಿ ತಿಳಿಸಿದರು.
ಈಗಾಗಲೇ ಸುಪ್ರೀಂ ಕೋರ್ಟ್ ನಿಂದ ಅನಧಿಕೃತ ಬಡಾವಣೆ ವಿರುದ್ಧ ಕ್ರಮ ಕೈಗೊಳ್ಳಲು ನಿರ್ದೇಶನವಿದೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಕೂಡ ಕ್ರಮ ಆಗಬೇಕು ಎಂಬುದಾಗಿ ತಿಳಿಸಿದ್ದಾರೆ. ರಾಜ್ಯದ ಅನೇಕ ಕಡೆಯಲ್ಲಿ ಕೃಷಿ ಜಮೀನಿನಲ್ಲೇ ಅನಧಿಕೃತ ಬಡಾವಣೆ ನಿರ್ಮಾಣ ಮಾಡಲಾಗುತ್ತಿದೆ. ಇದನ್ನು ನಾವು ಸಹಿಸೋದಿಲ್ಲ ಎಂದರು.
ಇನ್ಮುಂದೆ ಅನಧಿಕೃತ, ಅಕ್ರಮ ಬಡಾವಣೆಗಳನ್ನು ನಿರ್ಮಾಣ ಮಾಡಿದರೇ ಅವುಗಳನ್ನು ಸರ್ಕಾರ ಮುಟ್ಟುಗೋಲು ಹಾಕಿಕೊಳ್ಳೋಲಾಗುತ್ತದೆ. ಈ ಬಗ್ಗೆ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಯಾರು ಅಕ್ರಮ ಬಡಾವಣೆ ನಿರ್ಮಾಣ ಮಾಡಬಾರದು ಅಂತ ಕಿವಿಮಾತು ಹೇಳಿದರು.
ಇದನ್ನೂ ನೋಡಿ : ಶಾಂತಿ ಸ್ಥಾಪಿಸುವ ಬದಲು ಪ್ರಚೋದಿಸುತ್ತಿರುವ ಗೋಧಿ ಮೀಡಿಯಾ ಬಗ್ಗೆ ಕಾಶ್ಮೀರಿ ಜನರ ಆಕ್ರೋಶ Janashakthi Media