2025-26 ನೇ ಸಾಲಿನ ವಿವಿಧ ಕೋರ್ಸ್‍ಗಳಿಗೆ ಕೆಎಸ್‌ಓಯು ಇಂದ ಪ್ರವೇಶಾತಿ ಪ್ರಾರಂಭ

ಮೈಸೂರು: 2025-26 ನೇ ಸಾಲಿನ ಜುಲೈ ಆವೃತ್ತಿಯ ವಿವಿಧ ಕೋರ್ಸ್‍ಗಳಿಗೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಪ್ರಾದೇಶಿಕ ಕೇಂದ್ರ ಮಡಿಕೇರಿಯಲ್ಲಿ ಪ್ರವೇಶಾತಿ ಪ್ರಾರಂಭಿಸಲಾಗಿದ್ದು, ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು ತನ್ನ 2025-26ನೇ ಜುಲೈ ಆವೃತ್ತಿಗೆ ಶೈಕ್ಷಣಿಕ ಕಾರ್ಯಕ್ರಮಗಳಿಗೆ ಪ್ರವೇಶಾತಿಗೆ ಈಗಾಗಲೇ ಆನ್‍ಲೈನ್ ಮುಖಾಂತರ ಅರ್ಜಿ ಆಹ್ವಾನಿಸಲಾಗಿದೆ. ವಿವಿಧ 

ಮುಕ್ತ ವಿಶ್ವವಿದ್ಯಾಲಯವು “ನಿಮ್ಮ ಮನೆಯೇ ನಿರಂತರ ಪಾಠಶಾಲೆ” ಎಂಬ ಧ್ಯೆಯವಾಕ್ಯದೊಂದಿಗೆ ಯುಜಿಸಿ ಅನುಮೋದಿತ ಶಿಕ್ಷಣ ಕ್ರಮಗಳ ಅಧ್ಯಯನದ ಅವಕಾಶವನ್ನು ವಿದ್ಯಾರ್ಥಿಗಳಿಗೆ ಈಗಾಗಲೇ ಹಲವು ವರ್ಷಗಳಿಂದ ನೀಡುತ್ತಾ ಬಂದಿದೆ, ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು ರಾಜ್ಯದಲ್ಲಿ ಮುಕ್ತ ಶಿಕ್ಷಣ ನೀಡುವ ಏಕೈಕ ವಿದ್ಯಾಲಯವಾಗಿದೆ. ವಿವಿಧ 

ಸ್ನಾತಕ ಶಿಕ್ಷಣ ಕಾರ್ಯಕ್ರಮಗಳ ಅಡಿಯಲ್ಲಿ ಬರುವ (ಬಿ.ಎ, ಬಿಕಾಂ, ಬಿಲಿಬ್ ಐಎಸ್ಸಿ, ಬಿಬಿಎ, ಬಿಸಿಎ, ಬಿಎಸ್ಸಿ, ಬಿಎಸ್‍ಡಬ್ಲ್ಯೂ) ಹಾಗು ಸ್ನಾತಕೋತ್ತರ ಪಿಜಿ. ಕೋರ್ಸ್‍ಗಳಾದ (ಎಂಎ, ಎಂಎ-ಪತ್ರಿಕೋದ್ಯಮ, ಎಂಕಾಂ, ಎಂಬಿಎ, ಎಂಲಿಬ್‍ಐಎಸ್ಸಿ, ಎಂಎಸ್ಸಿ, ಎಂಸಿಎ, ಎಂಎಸ್‍ಡಬ್ಲೂ) (ಪಿಜಿ ಡಿಪ್ಲೋಮಾ ಪ್ರೋಗ್ರಾಮ್ಸ್ ಸರ್ಟಿಫಿಕೇಟ್ ಪ್ರೋಗ್ರಾಮ್ಸ್) ಕೋರ್ಸ್‍ಗಳಿಗೆ ಪ್ರವೇಶಾತಿ ಪ್ರಾರಂಭವಾಗಿದೆ.

ಇದನ್ನೂ ಓದಿ: ಬ್ರಹ್ಮಾವರ ವಾರಂಬಳ್ಳಿ ಪಂಚಾಯತ್ ಅವ್ಯವಸ್ಥೆಗಳ ಆಗರ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ, ಅಲ್ಪಸಂಖ್ಯಾತ ಸಮುದಾಯಗಳಾದ (ಮುಸ್ಲಿಂ, ಕ್ರೈಸ್ತ, ಜೈನ, ಭೌದ್ಧ, ಸಿಖ್ಖ್, ಪಾರ್ಸಿ) ಈ ಸಮುದಾಯದವರಿಗೆ ಉಚಿತ ಪ್ರವೇಶಾತಿ ಇರುತ್ತದೆ. ವಿದ್ಯಾರ್ಥಿಗಳು ಆದಾಯ ಮತ್ತು ಜಾತಿ ಪ್ರಮಾಣಪತ್ರ ಕಡ್ಡಾಯವಾಗಿ ಸಲ್ಲಿಸಬೇಕು, ಮತ್ತು ಆದಾಯ ರೂ. ಎಂಟು ಲಕ್ಷ ಮೀರಿರಬಾರದು.

ಎಸ್‍ಎಸ್‍ಎಲ್‍ಸಿ ಅಂಕಪಟ್ಟಿ ಪ್ರತಿ, ಪಿಯುಸಿ ಅಥವಾ ತತ್ಸಮಾನ ಅಂಕಪಟ್ಟಿ ಪ್ರತಿ, ಪದವಿ ಅಂಕಪಟ್ಟಿ ಪ್ರತಿ, (ಎಲ್ಲಾ ವರ್ಷಗಳ ಅಥವಾ ಎಲ್ಲಾ ಸೆಮಿಸ್ಟರ್ಗಳು), ಆಧಾರ್ ಕಾರ್ಡ್ ಜೆರಾಕ್ಸ್. ಬ್ಯಾಂಕ್ ಖಾತೆ ವಿವರಗಳು, ಬ್ಯಾಂಕ್ ಖಾತೆ ಸಂಖ್ಯೆ, ಬ್ಯಾಂಕ್ ಖಾತೆ ಹೋಲ್ಡರ್ ಹೆಸರು, ಬ್ಯಾಂಕ್ ಹೆಸರು, ಐಎಫ್‍ಎಸ್‍ಸಿ ಕೋಡ್. ನಾಲ್ಕು ಫೆÇೀಟೋಗಳು. ದೂರವಾಣಿ ಸಂಖ್ಯೆ, ವಿದ್ಯಾರ್ಥಿ ಇ-ಮೇಲ್ ಐಡಿ, ಬಿಪಿಎಲ್ ಕಾರ್ಡ್ (ಮಹಿಳೆಯರಿಗೆ ಮಾತ್ರ). ಎಟಿಎಂ ಕಾರ್ಡ್/ ಫೋನ್ ಪೇ / ಗೂಗಲ್ ಪೇ/ ನೆಟ್ ಬ್ಯಾಂಕಿಂಗ್-ಶುಲ್ಕ ಪಾವತಿಗೆ ಹೆಚ್ಚಿನ ಮಾಹಿತಿಗೆ ಮಡಿಕೇರಿ ಜೂನಿಯರ್ ಕಾಲೇಜು ಆವರಣದ ಭವನದಲ್ಲಿರುವ ಪ್ರಾದೇಶಿಕ ಕಚೇರಿಯನ್ನು ಸಂಪರ್ಕಿಸಲು ಕೋರಿದೆ.

ಹೆಚ್ಚಿನ ಮಾಹಿತಿಗೆ 9844395986, 8296215714, 9483570900, 9743576338 ಈ ದೂರವಾಣಿಯ ಮುಖಾಂತರ ವಿವರ ಪಡೆಯಬಹುದಾಗಿದೆ ಎಂದು ಕೇಂದ್ರದ ಪ್ರಾದೇಶಿಕ ನಿರ್ದೇಶಕಿ ಸ್ಮಿತಾ ಸುಬ್ಬಯ್ಯ ತಿಳಿಸಿದ್ದಾರೆ.

ಇದನ್ನೂ ನೋಡಿ: ಸಮಾಜವಾದ, ಸೆಕ್ಯುಲರಿಸಂ ಅಂದರೆ ಆರೆಸ್ಸೆಸ್ ಗೆ ಅಸಹನೆ ಯಾಕೆ? Janashakthi Media

Donate Janashakthi Media

Leave a Reply

Your email address will not be published. Required fields are marked *