ಬೆಂಗಳೂರು: ಸಾರಿಗೆ ನೌಕರರು ಮುಷ್ಕರ ಹಿಂಪಡೆದು ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಸರ್ಕಾರವೂ ಕೂಡ ಕೂಡಲೇ ಪಟ್ಟು ಸಡಿಲಿಸಿ ಮಾತುಕತೆಗೆ ಮುಂದಾಗಬೇಕು ಎಂದು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ಮತ್ತು ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ನ್ಯಾಯಪೀಠವು ಸೂಚನೆ ನೀಡಿದೆ.
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ವ್ಯಾಪ್ತಿಯ ನೌಕರರು ಬೇಡಿಕೆಗಳನ್ನು ಈಡೇರಿಸಬೇಕೆಂದು ಅನಿರ್ದಿಷ್ಟಾವಧಿ ಮುಷ್ಕರ ನಡೆಸಿದರ ಸಂಬಂಧ ಪಟ್ಟಂತೆ ಹೈಕೋರ್ಟ್‌ನಲ್ಲಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಇಂದು ನ್ಯಾಯಾಲಯ ವಿಚಾರಣೆ ನಡೆಸಿತು.
ಇದನ್ನು ಓದಿ: ಐಸೋಲೇಷನ್ ವಾರ್ಡ್ಗಳಾಗಿ ಪರಿವರ್ತನೆಯಾಗಿರುವ ರೈಲ್ವೆ ಬೋಗಿಗಳು : ಬೇಡಿಕೆ ಸಲ್ಲಿಸದ ರಾಜ್ಯ ಸರಕಾರ
ಕೆಲಸ ಕಳೆದುಕೊಂಡವರಿಗೆ ಮತ್ತೆ ಕೆಲಸ ನೀಡಲು ಆದೇಶ
ಅಮಾನತಾಗಿರುವ ಸಿಬ್ಬಂದಿಗಳು ಅಮಾನತು ಪ್ರಶ್ನಿಸಿ ಮೇಲ್ಮನವಿ ಪ್ರಾಧಿಕಾರಕ್ಕೆ ಅರ್ಜಿ ಸಲ್ಲಿಸಬೇಕು. ಈ ಅರ್ಜಿಗಳು ಸಲ್ಲಿಕೆಯಾದ ಎರಡು ವಾರಗಳ ಒಳಗೆ ಪ್ರಾಧಿಕಾರವು ಇತ್ಯರ್ಥಪಡಿಸಬೇಕು. ಅಮಾನತುಗೊಂಡಿರುವ ನೌಕರರನ್ನು ಮೊದಲಿನ ಕಾರ್ಯಸ್ಥಳಗಳಿಗೆ ನಿಯೋಜಿಸಬೇಕು.
ವಜಾಗೊಂಡ ನೌಕರರೂ ಮೇಲ್ಮನವಿ ಸಲ್ಲಿಸಬೇಕು. ಈ ಅರ್ಜಿಗಳನ್ನು ಎರಡು ತಿಂಗಳಲ್ಲಿ ಮೇಲ್ಮನವಿ ಪ್ರಾಧಿಕಾರ ತೀರ್ಮಾನಿಸಬೇಕು. ಮೇ 12ರೊಳಗೆ ಸರ್ಕಾರ ಮಾತುಕತೆ ನಡೆಸಬೇಕು. ಮಾತುಕತೆ ಮೂಲಕ ಸಮಸ್ಯೆ ಇತ್ಯರ್ಥಪಡಿಸಲು ಯತ್ನಿಸಬೇಕು. ಮಾತುಕತೆಯ ಬಳಿಕವೂ ಸಮಸ್ಯೆ ಮುಂದುವರೆಯದಂತೆ ನೋಡಿಕೊಳ್ಳಬೇಕೆಂದು ನ್ಯಾಯಪೀಠ ಹೇಳಿದೆ.
ಇದನ್ನು ಓದಿ: ಕರ್ನಾಟಕ ಲಾಕ್ಡೌನ್ : ಹೊಸಮಾರ್ಗಸೂಚಿಯಲ್ಲಿ ಏನಿದೆ? ಯಾವುದಕ್ಕೆಲ್ಲಾ ಅನುಮತಿ??
ಪ್ರಯಾಣಿಕರಿಗೆ ತೊಂದರೆಯಾಗಬಾರದು. ಮೇ 12ರೊಳಗೆ ಮಾತುಕತೆ ನಡೆಸದಿದ್ದರೆ ಮಧ್ಯಸ್ಥಿಕೆಗೆ ನಿವೃತ್ತ ನ್ಯಾಯಾಧೀಶರನ್ನು ನೇಮಿಸಲಾಗುವುದು ಎಂದು ಹೈಕೋರ್ಟ್ ವಿಭಾಗೀಯ ಪೀಠವು ಆದೇಶಿಸಿದೆ ಎಂದು ಸಾರಿಗೆ ನೌಕರರ ಪರ ಹಿರಿಯ ವಕೀಲ ಶಿವರಾಜ್ ಮಾಹಿತಿ ಮಾಹಿತಿ ನೀಡಿದ್ದಾರೆ.
ತಮ್ಮ ಬದುಕಿನ ಪ್ರಶ್ನೆಗಳನ್ನು ಮುಂದಿಟ್ಟುಕೊಂಡು ಸಾರಿಗೆ ನೌಕರರು ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯದಲ್ಲಿ ಈಚೆಗೆ ಸಾರಿಗೆ ನಿಗಮಗಳ ನೌಕರರು ನಡೆಸಿದ್ದ ಮುಷ್ಕರದಿಂದಾಗಿ ರಾಜ್ಯದಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿತ್ತು. ಸದ್ಯದ ಆರ್ಥಿಕ ಪರಿಸ್ಥಿತಿಯಲ್ಲಿ ನೌಕರರ ಬೇಡಿಕೆ ಈಡೇರಿಸಲು ಸಾಧ್ಯವಿಲ್ಲ ಎಂದು ರಾಜ್ಯ ಸಕಾರದ ಹಠಮಾರಿ ಧೋರಣೆಯಿಂದಾಗಿ ಮುಷ್ಕರ ಮತ್ತಷ್ಟು ತೀವ್ರಗೊಂಡಿದ್ದವು. ಈ ನಡುವೆ ರಾಜ್ಯ ಸರಕಾರವು ಸಹ ಮುಷ್ಕರ ನಿರತ ಹಲವು ನೌಕರರನ್ನು ಅಮಾನತು ವಜಾ ವಜಾ ಮಾಡಿತ್ತು.
ಪರಿಸ್ಥಿತಿ ಮತ್ತಷ್ಟು ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆ ಹೈಕೋರ್ಟ್ ಮಧ್ಯಪ್ರವೇಶದಿಂದ ಸಾರಿಗೆ ನೌಕರರು ಕೆಲಸಕ್ಕೆ ಹಾಜರಾಗಿದ್ದರು.