ಬೆಂಗಳೂರು : ಕುಕ್ಕೆ ಸುಬ್ರಹ್ಮಣ್ಯ ವ್ಯವಸ್ಥಾಪನಾ ಸಮಿತಿ ರಚಿಸುವ ಪ್ರಸ್ತಾವವನ್ನು ಕೈಬಿಟ್ಟು ಸರ್ಕಾರ “ಕುಕ್ಕೆ ಅಭಿವೃದ್ದಿ ಪ್ರಾಧಿಕಾರ ಸ್ಥಾಪನೆ”ಗೆ ಮುಂದಾಗಿದ್ದು, ಪ್ರಾಧಿಕಾರ ಸ್ಥಾಪನೆಯ ಪ್ರಸ್ತಾವ ಸರ್ಕಾರದ ಮುಂದೆ ಇದೆ. ಬರುವ ಸಚಿವ ಸಂಪುಟ ಸಭೆಯಲ್ಲಿ ಕುಕ್ಕೆ ಅಭಿವೃದ್ಧಿ ಪ್ರಾಧಿಕಾರ ಸ್ಥಾಪನೆಯ ಕುರಿತು ಚರ್ಚೆ ನಡೆಯಲಿದೆ.
ಈ ಬಗ್ಗೆ ಮಂಗಳೂರಿನಲ್ಲಿ ಸುದ್ದಿಗಾರರಿಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟನೆ ನೀಡಿದ್ದು, ಈ ವಿಚಾರವಾಗಿ ಕಾರ್ಯಕರ್ತರು ಅಭಿಪ್ರಾಯ ತಿಳಿಸಿದ್ದಾರೆ. ಸಚಿವ ಸಂಪುಟ ಸಭೆಯಲ್ಲಿ ಈ ವಿಚಾರ ಚರ್ಚೆಗೆ ಬರುತ್ತದೆ. ದೇವಾಸ್ಥಾನದ ಗೌರವ, ಘನತೆ ಉಳಿಸಿಕೊಂಡು ಹೋಗುವುದಾಗಿ ಹೇಳಿದ್ದಾರೆ. ನಾವು ಹಿಂದೂ ಧರ್ಮದವರು. ನಮ್ಮ ರಾಜ್ಯದಲ್ಲಿ ಎಲ್ಲಾ ಸಂಸ್ಕೃತಿಯನ್ನು ಒಟ್ಟಿಗೆ ತೆಗೆದುಕೊಂಡು ಹೋಗುವವರು. ಬಹಳ ದಿನದಿಂದ ಸುಬ್ರಹ್ಮಣ್ಯಕ್ಕೆ ಹೋಗಬೇಕೆಂಬ ಆಸೆಯಿತ್ತು. ಆದ ಕಾರಣ ಕುಟುಂಬ ಸಮೇತ ಹೋಗುತ್ತಿದ್ದೇನೆ. ಅವರವರ ನಂಬಿಕೆ ಪ್ರಕಾರ ಅವರು ಪ್ರಾರ್ಥಿಸುತ್ತಾರೆʼ ಎಂದಿದ್ದಾರೆ.
ಇನ್ನು ಕಳೆದ ಸೋಮವಾರ ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಅಧ್ಯಕ್ಷತೆಯಲ್ಲಿ ಬೆಂಗಳೂರಿನಲ್ಲಿ ಸೋಮವಾರ ನಡೆದ ರಾಜ್ಯ ಧಾರ್ಮಿಕ ಪರಿಷತ್ ಸಭೆಯಲ್ಲಿ ಕಡಬ ತಾಲೂಕಿನ ಕುಕ್ಕೆ ಸುಬ್ರಹ್ರಣ್ಯ ಪ್ರಾಧಿಕಾರ ರಚನೆ ಬಗ್ಗೆ ಸಚಿವರ ಸಮ್ಮುಖದಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ ಎಂದು ವರದಿಯಾಗಿದೆ.
ಇದನ್ನು ಓದಿ : ಹಾಲಿನ ದರ ಹೆಚ್ಚಳ ಹಿಂಪಡೆಯುವಂತೆ ವಿಪಕ್ಷ ನಾಯಕ ಆರ್.ಅಶೋಕ್ ಆಗ್ರಹ
ಇನ್ನು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅವಧಿ ಮಾರ್ಚ್ಗೆ ಕೊನೆಗೊಂಡಿದ್ದು, ಸದ್ಯ ಆಡಳಿತಾಧಿಕಾರಿಯನ್ನು ನೇಮಿಸಲಾಗಿದೆ. ಸಭೆಯಲ್ಲಿ ವ್ಯವಸ್ಥಾಪನ ಸಮಿತಿ ರಚನೆಗೆ ಅಧಿಸೂಚನೆ ಹೊರಡಿಸುವ ನಿರ್ಧಾರ ನಿರೀಕ್ಷೆಯಲ್ಲಿತ್ತು. ಆದರೆ ಸುಬ್ರಹ್ಮಣ್ಯ ದೇವಸ್ಥಾನ 100 ಕೋಟಿಗೂ ಅಧಿಕ ಆದಾಯ ಬರುವ ಕ್ಷೇತ್ರವಾಗಿರುವುದರಿಂದ ಅಭಿವೃದ್ಧಿ ಪ್ರಾಧಿಕಾರ ಮಾಡುವ ಬಗ್ಗೆ ಸಚಿವರು ಆಸಕ್ತಿ ತಳೆದಿದ್ದಾರೆ.
ಈ ಹಿನ್ನೆಲೆಯಲ್ಲಿ ವ್ಯವಸ್ಥಾಪನ ಸಮಿತಿ ರಚಿಸುವ ಪ್ರಸ್ತಾವವನ್ನು ಕೈಬಿಡಲಾಗಿದೆ. ಸುಬ್ರಹ್ಮಣ್ಯ ಅಭಿವೃದ್ಧಿ ಪ್ರಾಧಿಕಾರ ರಚನೆ ಬಗ್ಗೆ ಪ್ರಸ್ತಾವ ಸಿದ್ಧಗೊಳಿಸಿ ಮುಂದಿನ ವಿಧಾನಸಭಾ ಅಧಿವೇಶನ ಅಥವಾ ಬರುವ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ, ಅಂತಿಮ ನಿರ್ಧಾರ ಕೈಗೊಳ್ಳುವ ಬಗ್ಗೆ ತೀರ್ಮಾನಿಸಲಾಗಿದೆ ಎಂದು ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯೆ ಮಲ್ಲಿಕಾ ಪಕ್ಕಳ ಮಾಹಿತಿ ನೀಡಿದ್ದಾರೆ.
ಇದನ್ನು ನೋಡಿ : ಅಂಗನವಾಡಿಗಳ ಕತ್ತು ಹಿಸುಕಬೇಡಿ – ಕಾರ್ಯಕರ್ತರನ್ನು ತರಬೇತಿಗೊಳಿಸಿ Janashakthi Media