ಮುಂಬೈ|ಮರಾಠರಿಗೆ ಕುಣಬಿ ಜಾತಿ ಪ್ರಮಾಣಪತ್ರ ಮಹಾರಾಷ್ಟ್ರ ಸರ್ಕಾರ ಒಪ್ಪಿಗೆ ; ನಾವು ಗೆದ್ದುಬಿಟ್ಟೆವು’ ಜರಾಂಗೆ ಘೋಷಣೆ

ಮುಂಬೈ: ಐದು ದಿನಗಳಿಂದ ಸಾವಿರಾರು ಹೋರಾಟಗಾರರೊಂದಿಗೆ ಜರಾಂಗೆ ಅವರು ಇಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದರು.  ‘ಮರಾಠರಿಗೆ ಕುಣಬಿ ಜಾತಿ ಪ್ರಮಾಣಪತ್ರ ನೀಡಲು ಮಹಾರಾಷ್ಟ್ರ ಸರ್ಕಾರ ಮಂಗಳವಾರ ಒಪ್ಪಿಕೊಂಡಿದೆ. ಸ್ನೇಹಿತರೇ ನಾವು ಗೆದ್ದುಬಿಟ್ಟೆವು’ ಎಂದು ಹೋರಾಟಗಾರ ಮನೋಜ್‌ ಜರಾಂಗೆ ಘೋಷಿಸಿದರು. ಮುಂಬೈ

ಮರಾಠರಿಗೆ ಮೀಸಲಾತಿ ನೀಡುವ ವಿಷಯ ಪರಿಶೀಲಿಸಲು ರಚಿಸಿದ ಸಂಪುಟ ಉಪಸಮಿತಿಯು ಜರಾಂಗೆ ಅವರ ಬಹುಪಾಲು ಬೇಡಿಕೆಗಳನ್ನು ಒಪ್ಪಿಕೊಂಡಿದೆ.  ಮರಾಠ ಸಮುದಾಯದವರಿಗೆ ಈಗ ಹಿಂದುಳಿದ ವರ್ಗದ ಕೋಟಾದಡಿ ಮೀಸಲಾತಿ ದೊರೆಯಲಿದೆ ಎಂದು ಒಪ್ಪಿಗೆ ನೀಡಿರುವುದಾಗಿ ಸಮಿತಿಯ ಮುಖ್ಯಸ್ಥ, ಸಚಿವ ರಾಧಾಕೃಷ್ಣ ವಿಖೆ ಪಾಟೀಲ್‌ ಅವರು ಜರಾಂಗೆ ಅವರಿಗೆ ತಿಳಿಸಿದರು. ಮುಂಬೈ

ಇದನ್ನೂ  ಓದಿ:  ಯುಎಪಿಎ ಪ್ರಕರಣ: 7 ಆರೋಪಿಗಳು ಸಲ್ಲಿಸಿದ್ದ ಜಾಮೀನು ಅರ್ಜಿ ವಜಾ

ನನ್ನ ಬೇಡಿಕೆಗಳು ಈಡೇರದ ಹೊರತು ಮುಂಬೈ ಬಿಟ್ಟು ತೆರಳುವುದಿಲ್ಲ’ ಎಂದು ಜರಾಂಗೆ ಅವರು ಬೆಳಿಗ್ಗೆಯಷ್ಟೇ ಹೇಳಿದ್ದರು. ‘ಸರ್ಕಾರದೊಂದಿಗೆ ಮಾತನಾಡಲು ಸಿದ್ಧನಿದ್ದೇನೆ ಎಂದರು.  ಸಮಿತಿಯ ಕರಡುಪ್ರತಿಯನ್ನು ಜರಾಂಗೆ ಅವರು ಓದಿ ಹೇಳುತ್ತಿದ್ದಂತೆಯೇ ಇಲ್ಲಿನ ಆಜಾದ್‌ ಮೈದಾನದಲ್ಲಿ ಹೋರಾಟಗಾರರು ಹಲಗೆ ಹೊಡೆದು, ಕುಣಿದು ಕುಪ್ಪಳಿಸಿ ಸಂಭ್ರಮಿಸಿದರು.

ಮುಂಬೈ|ಮರಾಠರಿಗೆ ಕುಣಬಿ ಜಾತಿ ಪ್ರಮಾಣಪತ್ರ ಮಹಾರಾಷ್ಟ್ರ ಸರ್ಕಾರ ಒಪ್ಪಿಗೆ ; ನಾವು ಗೆದ್ದುಬಿಟ್ಟೆವು’ ಜರಾಂಗೆ ಘೋಷಣೆ

‘ಮರಾಠ ಮೀಸಲಾತಿ ಹೋರಾಟಗಾರರ ವಿರುದ್ಧ ದಾಖಲಾಗಿರುವ ಎಲ್ಲ ಪ್ರಕರಣಗಳನ್ನು ಸೆಪ್ಟೆಂಬರ್‌ ಅಂತ್ಯದ ಒಳಗಾಗಿ ಕೈಬಿಡಲಾಗುವುದು ಎಂದು ಉಪ ಸಮಿತಿಯವರು ಹೇಳಿದ್ದಾರೆ’ ಎಂದರು.

‘ಕುಣಬಿ ಮತ್ತು ಮರಾಠರು ಒಂದೇ ಸಮುದಾಯದವರು ಎಂದು ಸರ್ಕಾರಿ ಆದೇಶ ಹೊರಡಿಸಲು ಕಾನೂನು ಪ್ರಕಾರ ಇರುವ ಆಯ್ಕೆಗಳ ಕುರಿತು ಹುಡುಕಾಟ ನಡೆಯುತ್ತಿದೆ. ಎಲ್ಲ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಎರಡು ತಿಂಗಳು ಬೇಕಾಗಬಹುದು’ ಎಂದು ಸಚಿವ ರಾಧಾಕೃಷ್ಣ ಹೇಳಿದರು.

ಜರಾಂಗೆ ಅವರು ತಮ್ಮ ಉಪವಾಸ ಸತ್ಯಾಗ್ರಹವನ್ನು ಅಂತ್ಯಗೊಳಿಸಿ, ಕಣ್ಣೀರು ಹಾಕಿದರು. ಆಜಾದ್‌ ಮೈದಾನದಿಂದ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು.

ಇದನ್ನೂ ನೋಡಿ: ವಚನಾನುಭವ 33 | ಉದಕ ಮಜ್ಜನವಲ್ಲ ಪತ್ರೆ ಪೂಜೆಯಲ್ಲ Janashakthi Media

 

Donate Janashakthi Media

Leave a Reply

Your email address will not be published. Required fields are marked *