ಬೆಂಗಳೂರು: ಜನ ಶಿಕ್ಷಣ ಟ್ರಸ್ಟ್‌ನ ‘ಯುವತಲೆಮಾರಿಗಾಗಿ ಕುವೆಂಪು ಓದು ಅಭಿಯಾನ’ದ ಸಮಾರೋಪ ಸಮಾರಂಭವು ಮಾರ್ಚ್ 23ರಂದು ನಗರದ ಬಿ.ಎಂ.ಎಸ್ ಮಹಿಳಾ ಕಾಲೇಜಿನಲ್ಲಿ ನಡೆಯಲಿದೆ.
ಕರ್ನಾಟಕ ಸಾಹಿತ್ಯ ಅಕಾಡೆಮಿ, ಬಿ.ಎಂ.ಎಸ್ ಮಹಿಳಾ ಕಾಲೇಜು ಹಾಗೂ ಜನ ಶಿಕ್ಷಣ ಟ್ರಸ್ಟ್ ಸಂಯುಕ್ತವಾಗಿ ಈ ಕಾರ್ಯಕ್ರಮವನ್ನು ಆಯೋಜಿಸಿವೆ.
ಇದನ್ನೂ ಓದಿ: ಧರ್ಮಸ್ಥಳ ಪ್ರಕರಣ: 74 ಪ್ರಕರಣಗಳ ಸಂಪೂರ್ಣ ವರದಿ ಸಲ್ಲಿಸಲು ಹೈಕೋರ್ಟ್ ಆದೇಶ
ಸಮಾರಂಭದಲ್ಲಿ ‘ಕುವೆಂಪು ಸಾಹಿತ್ಯದಲ್ಲಿ ವೈಚಾರಿಕತೆ’ ವಿಷಯದ ಮೇಲೆ ಹಿರಿಯ ಕವಿ ಮತ್ತು ಚಿಂತಕರಾದ ಪ್ರೊ. ಎಸ್.ಜಿ. ಸಿದ್ದರಾಮಯ್ಯ ಅವರು ವಿಚಾರ ಮಂಡಿಸಲಿದ್ದಾರೆ. ಕರ್ನಾಟಕ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಎಲ್.ಎನ್. ಮುಕುಂದರಾಜ್ ಅವರು ಸಮಾರೋಪ ಭಾಷಣ ಮಾಡಲಿದ್ದಾರೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಿ.ಎಂ.ಎಸ್ ಮಹಿಳಾ ಕಾಲೇಜಿನ ಪ್ರಾಂಶುಪಾಲರಾದ ಡಾ. ರಘುಕುಮಾರ್ ಎನ್ ವಹಿಸಲಿದ್ದಾರೆ.

ಇದೇ ವೇಳೆ ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆ ಹಾಗೂ ಕುವೆಂಪು ಸಾಹಿತ್ಯ ಓದು ಕಾರ್ಯಾಗಾರಗಳ ವಿಜೇತರಿಗೆ ಬಹುಮಾನಗಳನ್ನು ವಿತರಿಸಲಾಗುವುದು. ಸ್ಪರ್ಧೆಯಲ್ಲಿ ಭಾಗವಹಿಸಿದವರಿಗೆ ಪ್ರಮಾಣಪತ್ರಗಳನ್ನು ನೀಡಲಾಗುವುದು ಎಂದು ಜನ ಶಿಕ್ಷಣ ಟ್ರಸ್ಟ್‌ನ ಕೆ.ಎಸ್. ವಿಮಲಾ ಹಾಗೂ ಬಿ.ಎಂ.ಎಸ್ ಮಹಿಳಾ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥರಾದ ಡಾ. ರಾಧಾ ನಾಡಿಗ್ ತಿಳಿಸಿದ್ದಾರೆ.
ಇದನ್ನೂ ನೋಡಿ: ಎಲ್‌ಪಿಜಿ ಸಿಲಿಂಡರ್ ಬೆಲೆ ಏರಿಕೆಗೆ ಖಂಡನೆ: ಸೌದೆ ಒಲೆ ಹಚ್ಚಿ ಸಿಪಿಐ(ಎಂ) ಪ್ರತಿಭಟನೆ Janashakthi Media
