ಕುವೆಂಪು ವಿಶ್ವವಿದ್ಯಾಲಯ: ರಾಜ್ಯಪಾಲರ ಭಾಷಣದ ವೇಳೆ ಎನ್‌ಎಸ್‌ಯುಐ ಪ್ರತಿಭಟನೆ

ಉಪಕುಲಪತಿ ಪ್ರೊ.ಬಿ.ಪಿ.ವೀರಭದ್ರಪ್ಪ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿದ ಎನ್‌ಎಸ್‌ಯುಐ ಕಾರ್ಯಕರ್ತರು ಕುವೆಂಪು ವಿಶ್ವವಿದ್ಯಾಲಯ

ಶಿವಮೊಗ್ಗ: ಕುವೆಂಪು ವಿಶ್ವವಿದ್ಯಾಲಯದ ಬಸವ ಭವನದಲ್ಲಿ ಶನಿವಾರ ನಡೆದ 33ನೇ ಘಟಿಕೋತ್ಸವದಲ್ಲಿ ವಿದ್ಯಾರ್ಥಿ ಸಂಘಟನೆ ಎನ್‌ಎಸ್‌ಯುಐ ಕಾರ್ಯಕರ್ತರು ಉಪಕುಲಪತಿ ಪ್ರೊ.ಬಿ.ಪಿ.ವೀರಭದ್ರಪ್ಪ ಅವರನ್ನು ಟೀಕಿಸಿ ಘೋಷಣೆಗಳನ್ನು ಕೂಗಿದ್ದು ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು.

ರಾಜ್ಯಪಾಲ ತಾವರ್‌ಚಂದ್ ಗೆಹ್ಲೋಟ್ ಅವರು ತಮ್ಮ ಭಾಷಣವನ್ನು ಪ್ರಾರಂಭಿಸುತ್ತಿದ್ದಂತೆ, ಸಭಿಕರ ನಡುವೆ ಕೆಲ ವಿದ್ಯಾರ್ತಿಗಳು ಘೋಷಣೆಗಳನ್ನು ಕೂಗಿ ಕಪ್ಪು ಬಾವುಟಗಳನ್ನು ಬೀಸಿದ್ದು, ಭ್ರಷ್ಟ ಉಪಕುಲಪತಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

ಈ ವೇಳೆ ಪೊಲೀಸರು ಪ್ರತಿಭಟನಾಕಾರರು ಇದ್ದ ಬಾಲ್ಕನಿಗೆ ಧಾವಿಸಿ ಅವರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ರಾಜ್ಯಪಾಲರು ತಮ್ಮ ಭಾಷಣವನ್ನು ಮುಕ್ತಾಯಗೊಳಿಸುತ್ತಾ, ಪ್ರತಿಭಟನಾಕಾರರ ನಾಲ್ಕೈದು ಪ್ರತಿನಿಧಿಗಳೊಂದಿಗೆ ಮಾತನಾಡಲು ಬಯಸುವುದಾಗಿ ಹೇಳಿದರು. ನಂತರ ರಾಜ್ಯಪಾಲರು ಪ್ರತಿಭಟನಾಕಾರರನ್ನು ಭೇಟಿ ಮಾಡಿ ಅಹವಾಲು ಆಲಿಸಿದರು.

ಇದನ್ನೂ ಓದಿ: ಯುಪಿ: ಉಪಕುಲಪತಿ & ಪೊಲೀಸರ ಮೇಲೆ ತೀವ್ರ ಹಲ್ಲೆ ನಡೆಸಿದ ABVP ದುಷ್ಕರ್ಮಿಗಳು

ತಮ್ಮ ದೂರುಗಳನ್ನು ಲಿಖಿತವಾಗಿ ಸಲ್ಲಿಸುವಂತೆ ರಾಜ್ಯಪಾಲರು ಪ್ರತಿಭಟನಾಕಾರರಿಗೆ ತಿಳಿಸಿದ್ದು, ಈ ಆರೋಪಗಳನ್ನು ಪರಿಶೀಲಿಸುವುದಾಗಿ ತಿಳಿಸಿದ್ದಾರೆ.

ಎನ್‌ಎಸ್‌ಯುಐನ ಶಿವಮೊಗ್ಗ ಘಟಕದ ಮುಖಂಡ ವಿಜಯ್ ಮಾತನಾಡಿ, ಉಪಕುಲಪತಿ ವಿರುದ್ಧದ ಭ್ರಷ್ಟಾಚಾರದ ಆರೋಪದ ಬಗ್ಗೆ ರಾಜ್ಯಪಾಲರ ಗಮನ ಸೆಳೆಯಲು ಈ ಪ್ರಯತ್ನ ನಡೆಸಲಾಗಿದೆ ಎಂದು ಹೇಳಿದ್ದಾರೆ.

“ನಾವು ಘಟಿಕೋತ್ಸವಕ್ಕೆ ಅಡ್ಡಿಪಡಿಸಲು ಬಯಸುವುದಿಲ್ಲ. ಸಮಸ್ಯೆಯನ್ನು ರಾಜ್ಯಪಾಲರ ಗಮನಕ್ಕೆ ತರುವಲ್ಲಿ ಯಶಸ್ವಿಯಾಗಿದ್ದೇವೆ. ರಾಜ್ಯಪಾಲರು ನಮ್ಮೊಂದಿಗೆ ಮಾತನಾಡಿರುವುದು ನಮಗೆ ಖುಷಿ ತಂದಿದೆ. ಅವರ ನಿರ್ದೇಶನದಂತೆ ನಾವು ನಮ್ಮ ದೂರನ್ನು ಲಿಖಿತವಾಗಿ ಸಲ್ಲಿಸುತ್ತೇವೆ” ಎಂದು ಅವರು ಹೇಳಿದರು.

ವಿಡಿಯೊ ನೋಡಿ: ಬೇಟಿ ಬಚಾವೋ ಅಂದ್ರೆ ಬೆತ್ತಲೆ ಮಾಡೋದಾ ಪ್ರಧಾನಿಗಳೆ? ಕೇಂದ್ರದ ವಿರುದ್ದ ಕೆರಳಿದ ಪ್ರತಿಭಟನೆಕಾರರು Janashakthi Media

Donate Janashakthi Media

Leave a Reply

Your email address will not be published. Required fields are marked *