ಕಾಡಾನೆ ದಾಳಿಗೆ ಕಾರ್ಮಿಕ ಮಹಿಳೆ ಸಾವು, ಇನ್ನಿಬ್ಬರ ಸ್ಥಿತಿ ಗಂಭೀರ

ಚಿಕ್ಕಮಗಳೂರು: ಕಾಡಾನೆಯೊಂದು ದಾಳಿಯ ಪರಿಣಾಮವಾಗಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಹೆಡದಾಳು ಗ್ರಾಮದಲ್ಲಿ  ಬುಧವಾರ ನಡೆದಿದೆ.ಇನ್ನಿಬ್ಬರು ಕಾರ್ಮಿಕರ ಮೇಲೂ ಆನೆ ದಾಳಿ ಮಾಡಿದ್ದು, ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಕಾಡಾನೆಯ ದಾಳಿಗೆ ಸಾವಿಗೀಡಾದವರನ್ನು 45 ವರ್ಷದ ಮೀನಾ ಎಂದು ಗುರುತಿಸಲಾಗಿದೆ. ಇನ್ನಿಬ್ಬರು ಕಾರ್ಮಿಕ ಗಾಯಾಳುಗಳನ್ನು ಚಿಕ್ಕಮಗಳೂರು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ಅವರ ಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗಿದೆ.

ಮೀನಾ ಮತ್ತು ಇತರರು ತಮ್ಮ ಮನೆಯಿಂದ ಜಮೀನಿನ ಕಡೆಗೆ ಹೋಗುತ್ತಿದ್ದಾಗ ಕಾಡಾನೆ ದಾಳಿ ಮಾಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮೀನಾ ತಪ್ಪಿಸಿಕೊಳ್ಳಲು ಯತ್ನಿಸಿದರಾದರೂ ಸಾಧ್ಯವಾಗಿಲ್ಲ. ಈ ವೇಳೆ ಆಕೆಯ ತಲೆಯ ಮೇಲೆ ಆನೆ ಕಾಲಿಟ್ಟಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಆಲ್ದೂರು ಅರಣ್ಯ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದ್ದಾರೆ.

ಇದನ್ನೂ ಓದಿ: ಅಸಮರ್ಪಕ ಬಿಸಿಯೂಟ ವಿತರಣೆ: ತರಗತಿ ಬಹಿಷ್ಕರಿಸಿ, ಪ್ರತಿಭಟನೆ ನಡೆಸಿದ ಶಾಲಾ ವಿದ್ಯಾರ್ಥಿಗಳು

ಏಳು ಆನೆಗಳ ಹಿಂಡು ಗ್ರಾಮದ ಸಮೀಪದಲ್ಲಿಯೇ ಬೀಡುಬಿಟ್ಟಿದ್ದು, ಅವುಗಳನ್ನು ಕೂಡಲೇ ಕಾಡಿಗೆ ಓಡಿಸಬೇಕು. ತಾವು ಜೀವವನ್ನು ಕೈಯಲ್ಲಿಡಿದು ಓಡಾಡುವಂತ ಪರಿಸ್ಥಿತಿ ಎದುರಾಗಿದೆ. ತಮ್ಮ ಜೀವಕ್ಕೆ ರಕ್ಷಣೆ ನೀಡಬೇಕು ಎಂದು ಗ್ರಾಮಸ್ಥರು ಅರಣ್ಯಾಧಿಕಾರಿಗಳನ್ನು ಒತ್ತಾಯಿಸಿದ್ದಾರೆ.

ಒಂಟಿ ಆನೆಯೊಂದು ಕಳೆದ ತಿಂಗಳಿನಿಂದ ಹಿಂಡಿನಿಂದ ಬೇರ್ಪಟ್ಟು, ಜನವಸತಿ ಪ್ರದೇಶಗಳು ಮತ್ತು ಕೃಷಿ ಭೂಮಿಗಳಲ್ಲಿ ವಿಹರಿಸುತ್ತಾ ಜನರ ಜೀವಕ್ಕೆ ಗಂಭೀರ ಅಪಾಯವನ್ನುಂಟುಮಾಡಿದೆ. ತಿಂಗಳ ಹಿಂದೆಯೇ ಈ ಬಗ್ಗೆ ಮನವಿ ಸಲ್ಲಿಸಿದ್ದರೂ ಅರಣ್ಯಾಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ವಿಡಿಯೋ ನೋಡಿ: ನಮ್ಮನ್ನು ಸರ್ಕಾರಿ ನೌಕರರೆಂದು ಪರಿಗಣಿಸಿಸಿಡಿದೆದ್ದ ಗ್ರಾಮ ಪಂಚಾಯಿತಿ ನೌಕರರು Janashakthi Media

Donate Janashakthi Media

Leave a Reply

Your email address will not be published. Required fields are marked *