ಬೆಂಗಳೂರು: ರಾಜ್ಯದ ಹಲವೆಡೆ ಕುಡಿಯುವ ನೀರಿನ ಅಭಾವ ಎದುರಾಗಿದ್ದು, ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಶುಕ್ರವಾರ ಹಿರಿಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ ಅಗತ್ಯ ಕ್ರಮಕ್ಕೆ ಸೂಚನೆ ನೀಡಿದ್ದಾರೆ.
ಗೃಹ ಕಚೇರಿ ಕೃಷ್ಣಾದಲ್ಲಿ ಅಧಿಕಾರಿಗಳೊಂದಿಗೆ ಚರ್ಚಿಸಿದ ಮುಖ್ಯಮಂತ್ರಿಗಳು, ರಾಜ್ಯದ ಯಾವ ಭಾಗದಲ್ಲೂ ಕುಡಿಯುವ ನೀರಿಗೆ ಸಮಸ್ಯೆ ಆಗಬಾರದು. ಕಳೆದ ವಾರವೇ ನೀಡಿರುವ ಸೂಚನೆ ಪ್ರಕಾರ ಅಗತ್ಯ ಮುನ್ನೆಚ್ಚರಿಕೆ ಮತ್ತು ಸಿದ್ಧತೆಗಳನ್ನು ಪರಿಣಾಮಕಾರಿ ರೀತಿಯಲ್ಲಿ ಮಾಡಿಕೊಳ್ಳಬೇಕು ಎಂದು ಹೇಳಿದರು.
ಇದನ್ನೂ ಓದಿ:ಪ್ರಕೃತಿಯನ್ನು ಪ್ರೀತಿಸುವ ಕೆಲಸವಾಗಬೇಕು; ಸಿಎಂ ಸಿದ್ದರಾಮಯ್ಯ
ಈ ಸಂಬಂಧ ಸೋಮವಾರ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು. ಇದೇ ವೇಳೆ ಕೊಪ್ಪಳದಲ್ಲಿ ಕಲುಷಿತ ನೀರು ಸೇವಿಸಿ ಮೃತಪಟ್ಟಿರುವ ಪ್ರಕರಣಗಳು ವರದಿಯಾಗಿರುವ ಕುರಿತಂತೆಯೂ ಮುಖ್ಯಮಂತ್ರಿಗಳು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.