ಹಿಂಸಾಚಾರ ಪ್ರಕರಣ: ಸಂಪೂರ್ಣ ಸ್ಥಿತಿಗತಿಯ ವರದಿ ಸಲ್ಲಿಸುವಂತೆ ಯುಪಿ ಸರ್ಕಾರಕ್ಕೆ ಸುಪ್ರೀಂ ಸೂಚನೆ

ನವದೆಹಲಿ: ಲಖಿಂಪುರ ಖೇರಿ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡ ಸುಪ್ರೀಂ ಕೋರ್ಟ್‌ ಇಂದು ವಿಚಾರಣೆಯ ಸಂದರ್ಭದಲ್ಲಿ ಉತ್ತರಪ್ರದೇಶ ಸರ್ಕಾರಕ್ಕೆ ಹಿಂಸಾಚಾರ ಘಟನೆಯಲ್ಲಿ  “ನೀವು ಎಷ್ಟು ಜನರನ್ನು ಬಂಧಿಸಿದ್ದೀರಿ?”ಎಂದು ಪ್ರಶ್ನೆ ಮಾಡಿದೆ.

ಸುಪ್ರೀಂಕೋರ್ಟ್​ ನಿನ್ನೆ ಸ್ವಯಂಪ್ರೇರಿತವಾಗಿ ವಿಚಾರಣೆ ಕೈಗೆತ್ತಿಕೊಂಡಿತ್ತು. ಇದರಂತೆ ಇಂದು ಮುಖ್ಯನ್ಯಾಯಮೂರ್ತಿ ಎನ್​.ವಿ.ರಮಣ ನೇತೃತ್ವದ ನ್ಯಾ.ಸೂರ್ಯಕಾಂತ್ ಹಿಮಾ ಕೊಹ್ಲಿ ಅವರನ್ನೊಳಗೊಂಡ ಪೀಠ ವಿಚಾರಣೆ ನಡೆಸಿ ವಾದ ಪ್ರತಿವಾದ ಆಲಿಸಿದ ನ್ಯಾಯಪೀಠವು, ಪ್ರಕರಣಕ್ಕೆ ಸಂಬಂಧಿಸಿದಂತೆ ನಾಳೆಯೊಳಗೆ ವರದಿ ನೀಡುವಂತೆ ಉತ್ತರ ಪ್ರದೇಶ ರಾಜ್ಯ ಸರ್ಕಾರಕ್ಕೆ ಸೂಚಿಸಿತು.

ಇದನ್ನು ಓದಿ: ರೈತರ ಮೇಲೆ ಕಾರು ಹರಿಸಿದ ಭಯಾನಕ ದೃಶ್ಯ ಮೊಬೈಲ್‌ ಸೆರೆ: ಧಾಳಿ ಮಾಡಲೆಂದೇ ಕಾರು ನುಗ್ಗಿಸಿದ್ದು

“ಸ್ಥಿತಿಗತಿ ವರದಿಯಲ್ಲಿ ಕೊಲ್ಲಲ್ಪಟ್ಟ ರೈತರು, ಪತ್ರಕರ್ತರು ಇತ್ಯಾದಿ ಎಂಟು ವ್ಯಕ್ತಿಗಳ ಬಗ್ಗೆಯೂ ನಮಗೆ ತಿಳಿಸಿ. ಇದು ದುರದೃಷ್ಟಕರ ಘಟನೆ. ನೀವು ಯಾರ ವಿರುದ್ಧ ಎಫ್ಐಆರ್ ದಾಖಲಿಸಿದ್ದೀರಿ ಎಂದು ನಮಗೆ ತಿಳಿಸಿ. ನೀವು ಎಷ್ಟು ಜನರನ್ನು ಬಂಧಿಸಿದ್ದೀರಿ” ಎಂದು ಸುಪ್ರೀಂ ಕೋರ್ಟ್ ಪ್ರಶ್ನಿಸಿದೆ.

ಉತ್ತರಪ್ರದೇಶದ ಲಖಿಂಪುರ ಖೇರಿಯಲ್ಲಿ ರೈತರ ಹತ್ಯೆಗೆ ಕ್ರಮ ಕೈಗೊಳ್ಳುವಂತೆ ಕೋರಿ ಸುಮೊಟೊ ದಾಖಲಿಸಿಕೊಳ್ಳಬೇಕು ಎಂದು ವಕೀಲರಾದ ಶಿವಕುಮಾರ ತ್ರಿಪಾಠಿ ಮತ್ತು ಸಿಎಸ್ ಪಾಂಡ ಇಬ್ಬರು ಸಿಜೆಐ ಎನ್​. ವಿ.ರಮಣ ಅವರಿಗೆ ಪತ್ರ ಬರೆದಿದ್ದರು. ಅದರಲ್ಲಿ ಒಬ್ಬರಾದ ಶಿವಕುಮಾರ್​ ತ್ರಿಪಾಠಿ ಅವರಿಗೆ ವಾದ ಮಂಡಿಸಲು ಸುಪ್ರೀಂಕೋರ್ಟ್​ ಇಂದು ಅವಕಾಶ ಮಾಡಿಕೊಟ್ಟಿತ್ತು.

ಇದನ್ನು ಓದಿ: ಲಖಿಂಪುರ್ ಖೇರಿ ಹಿಂಸಾಚಾರ: ಕೇಂದ್ರ ಸಚಿವ ಅಜಯ್ ಮಿಶ್ರಾ ಪುತ್ರ ಸೇರಿ ಇತರರ ವಿರುದ್ಧ ಎಫ್ಐಆರ್

ಉತ್ತರಪ್ರದೇಶ ಸರ್ಕಾರದ ಪರ ವಾದ ಮಂಡಿಸಿದ ಹೆಚ್ಚುವರಿ ಅಡ್ವೊಕೇಟ್ ಜನರಲ್ ಗರಿಮಾ ಪ್ರಶಾದ್​, ಲಖಿಂಪುರದಲ್ಲಿ ಏನು ನಡೆಯಿತೋ ಅದು ನಿಜಕ್ಕೂ ದುರ್ದೈವ. ಈ ಸಂಬಂಧ ತನಿಖೆ ನಡೆಸಲು ಎಸ್​ಐಟಿ ರಚನೆಯಾಗಿದೆ. ಅಷ್ಟೇ ಅಲ್ಲ, ನಿವೃತ್ತ ನ್ಯಾಯಾಧೀಶರೊಬ್ಬರು ತನಿಖೆ ನಡೆಸಲಿದ್ದಾರೆ. ಇನ್ನುಳಿದಂತೆ ಎಲ್ಲ ಸೂಕ್ತ ಕ್ರಮಗಳನ್ನೂ ಕೈಗೊಳ್ಳಲಾಗುವುದು ಎಂದು ಹೇಳಿದರು.

ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ ಅವರ ಪುತ್ರ ಮತ್ತಿತರರ ವಿರುದ್ಧ ಈಗಾಗಲೇ ಎಫ್‌ಐಆರ್‌ ದಾಖಲಿಸಲಾಗಿದೆ. ರೈತರ ಪ್ರತಿಭಟನೆಯಲ್ಲಿ ಭಾನುವಾರ ಎಂಟು ಜನರು ಸಾವನ್ನಪ್ಪಿದ್ದು ಅವರಲ್ಲಿ ನಾಲ್ವರು ಬಿಜೆಪಿಗೆ ಕಾರ್ಯಕರ್ತರೆನ್ನಲಾಗಿದ್ದು ಉಳಿದ ನಾಲ್ವರು ರೈತರಾಗಿದ್ದಾರೆ. ಪ್ರತಿಭಟನಾಕಾರರ ಮೇಲೆ ಹರಿದ ವಾಹನದಲ್ಲಿ ಸಚಿವರ ಪುತ್ರ ಆಶಿಶ್‌ ಮಿಶ್ರಾ ಇದ್ದರು. ಘಟನೆ ನಡೆದು ನಾಲ್ಕು ದಿನಗಳ ನಂತರವೂ ಪೊಲೀಸ್ ದೂರಿನಲ್ಲಿ ಹೆಸರಿಸಲಾಗಿದ್ದರೂ, ಆತನನ್ನು ಇನ್ನೂ ಬಂಧಿಸಲಾಗಿಲ್ಲ.

Donate Janashakthi Media

Leave a Reply

Your email address will not be published. Required fields are marked *