ಬೆಳಗಾವಿ: ರಾಷ್ಟ್ರೀಯ ಹೆದ್ದಾರಿ ಪಕ್ಕದ ನ್ಯೂ ಗಾಂಧಿ ನಗರದ ಬಳಿ ಏಪ್ರಿಲ್ 16 ಬುಧವಾರದಂದು ಕಾಮಗಾರಿಯ ವೇಳೆ ಮಣ್ಣು ಕುಸಿದು ಇಬ್ಬರು ಕೂಲಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ನಡೆದಿದೆ. ಗೋಕಾಕ ಮೂಲದ ಕಾರ್ಮಿಕರು ಪೈಪ್ ಲೈನ್ ಕಾಮಗಾರಿಯ ವೇಳೆ ಕೆಲಸ ಮಾಡುವಾಗ ಈ ದುರ್ಘಟನೆ ಸಂಭವಿಸಿದೆ.
ಮತ್ತೋರ್ವ ಕಾರ್ಮಿಕ ನಾಪತ್ತೆಯಾಗಿದ್ದು, ಆತನಿಗಾಗಿ ಶೋಧ ಕಾರ್ಯ ಮುಂದುವರೆದಿದೆ.
ಇದನ್ನೂ ಓದಿ: ಎನ್‌ಕೌಂಟರ್ ರಾಜ್ಯ
ಜೆಸಿಬಿಯಿಂದ ಅಗೆಯಲಾಗಿದ್ದ ಮಣ್ಣಿನಲ್ಲಿ ಕಾರ್ಮಿಕರು ಹೂತು ಹೋಗಿದ್ದು, ಉಸಿರುಗಟ್ಟಿ ಮೃತಪಟ್ಟಿದ್ದಾರೆ. ಕೂಡಲೇ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರು ಧಾವಿಸಿ ಕಾರ್ಯಾಚರಣೆ ಪ್ರಾರಂಭಿಸಿದ್ದಾರೆ.
ಮಾಳಮಾರುತಿ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ನಾಪತ್ತೆಯಾಗಿರುವ ಕಾರ್ಮಿಕನಿಗಾಗಿ ಶೋಧ ಕಾರ್ಯ ನಡೆಸಿದ್ದಾರೆ.
ಇದನ್ನೂ ನೋಡಿ: ಅಂಬೇಡ್ಕರ್ ಸ್ಥಾಪಿಸಿದ “ಅಖಿಲ ಭಾರತ ಪರಿಶಿಷ್ಟ ಜಾತಿಗಳ ಒಕ್ಕೂಟ” AISCF ಪಕ್ಷದ ಪ್ರಣಾಳಿಕೆಯಲ್ಲಿ ಏನಿದೆ?