ಭಾಷಾ ಅಲ್ಫಾಸಂಖ್ಯಾತ ಶಿಕ್ಷಣ ಸಂಸ್ಥೆಗಳಿಗೆ ಷರತ್ತು ಸಡಿಲಿಸಲು ಪ್ರಸ್ತಾವನೆ

ಬೆಂಗಳೂರು : ಧಾರ್ಮಿಕ ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆ ಗಳಿಗೆ ವಿಧಿಸಿರುವ ಮಾನದಂಡವನ್ನೇ ಭಾಷಾ ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆ ಗಳಿಗೆ ಅನ್ವಯ ಮಾಡಬೇಕು ಎಂದು ವಿಧಾನ ಪರಿಷತ್ ಸದಸ್ಯ ಪುಟ್ಟಣ್ಣ ನೇತೃತ್ವದ ನಿಯೋಗ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ಅವರಿಗೆ ಮನವಿ ಸಲ್ಲಿಸಿದೆ.

ವಿಕಾಸ ಸೌಧದಲ್ಲಿ ಈ ಕುರಿತು ಸಚಿವರನ್ನು ಭೇಟಿ ಮಾಡಿದ ನಿಯೋಗ, ಭಾಷಾ ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆ ಗಳಲ್ಲಿ ಶೇ. 25 ರಷ್ಟು ಆಯಾ ಮತೀಯ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ಕಡ್ಡಾಯವಾಗಿ ನೀಡಬೇಕು ಎಂಬುದು ಸೇರಿದಂತೆ ಹಲವು ಷರತ್ತು ಇದ್ದು, ಇದರಿಂದ ಸಮಸ್ಯೆ ಆಗಿದ್ದು, ಷರತ್ತುಸಡಿಲಿಸಿ ಭಾಷಾ ಮತ್ತು ಮತೀಯ ಅಲ್ಪಸಂಖ್ಯಾತರಿಗೆ ಸಂವಿಧಾನ ದ ಮೂಲಭೂತ ಹಕ್ಕುಗಳನುಸಾರ ಸರಿ ಸಮನಾದ ನ್ಯಾಯ ಒದಗಿಸಬೇಕು ಎಂದು ಪ್ರಸ್ತಾವನೆ ಸಲ್ಲಿಸಿದರು.

ಇದನ್ನು ಓದಿ : ಅಂತರ್ಜಾತಿ ವಿವಾಹಕ್ಕೆ ಸಹಾಯ : ಸಿಪಿಐ(ಎಂ) ಕಚೇರಿ ಮೇಲೆ ದಾಳಿ, 8 ಮಂದಿ ಬಂಧನ

ಭಾಷಾ ಮತ್ತು ಧಾರ್ಮಿಕ ಅಲ್ಪಸಂಖ್ಯಾತರಿಗೆ ಶಿಕ್ಷಣ ಸಂಸ್ಥೆ ಗಳನ್ನು ಸ್ಥಾಪಿಸಿ ಭಾಷೆ ಮತ್ತು ಧರ್ಮ ಪೋಷಿಸಿ ಬೆಳೆಸಿಕೊಂಡು ಹೋಗಲು ವಿಶೇಷ ಸ್ಥಾನ ಮಾನ ಸಮಾನವಾಗಿ ಕಲ್ಪಿಸಲಾಗಿದ್ದು, ಧಾರ್ಮಿಕ ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆ ಗಳಿಗೆ ವಿಧಿಸಿರುವ ಷರತ್ತು ಮಾನದಂಡ ಭಾಷಾ ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳಿಗೆ ಅನ್ವಯಿಸಿ ಆದೇಶ ಹೊರಡಿಸಬೇಕಿದೆ ಎಂದು ಪ್ರತಿಪಾದಿಸಿದರು.

ಈ ಕುರಿತು ಸಾಧಕ -ಬಾಧಕ ಪರಿಶೀಲಿಸಿ ಮುಂದಿನ ಕ್ರಮ ಕೈಗೊಳ್ಳುವಂತೆ ಸಚಿವರು ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಇಲಾಖೆ ಕಾರ್ಯದರ್ಶಿ ಮನೋಜ್ ಜೈನ್ ಹಾಗೂ ಇತರೆ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

ಇದನ್ನು ನೋಡಿ : ಆಡಳಿತ ನಡೆಸುವವರಿಗೆ ಸಂವಿಧಾನ ಶಿಕ್ಷಣದ ಅಗತ್ಯವಿದೆ’ – ಜಸ್ಟೀಸ್ ಎಚ್.ಎನ್. ನಾಗಮೋಹನ ದಾಸ್Janashakthi Media

Donate Janashakthi Media

Leave a Reply

Your email address will not be published. Required fields are marked *