ಲಸಿಕೆ ಪಡೆದಂತೆ ನಾಟಕವಾಡಿದ ವೈದ್ಯಾಧಿಕಾರಿಗಳು

ತುಮಕೂರು ಜ 21: ಕೊರೊನಾ ಲಸಿಕೆ ಸುತ್ತ ಪ್ರಶ್ನೆಗಳ ಹುತ್ತ ಬೆಳೆಯುತ್ತಿರುವಾಗಲೇ ಕೊವಾಕ್ಸಿನ್‌‌ ತೆಗೆದುಕೊಂಡಂತೆ ನಟನೆ ಮಾಡಿದ ಘಟನೆ ತುಮಕೂರಿನಲ್ಲಿ ನಡೆದಿದೆ.

ಜಿಲ್ಲಾ ವೈದ್ಯಾಧಿಕಾರಿ ಮತ್ತು ಸರ್ಕಾರಿ ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲೆ ರಜನಿ ಲಸಿಕೆ ಪಡೆದಂತೆ ನಾಟಕವಾಡಿದ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ.

ಕೊರೊನಾ ಸೋಂಕು ನಿಯಂತ್ರಣಕ್ಕಾಗಿ ಸರಕಾರ ಬಿಡುಗಡೆ ಮಾಡಿರುವ ಕೊರೊನಾ ವ್ಯಾಕ್ಸಿನ್ ಅನ್ನು ಡಿಎಚ್‌ಒ ನಾಗೇಂದ್ರಪ್ಪ, ಸರಕಾರಿ ನರ್ಸಿಂಗ್ ಕಾಲೇಜು ಪ್ರಾಂಶುಪಾಲೆ ರಜನಿಯವರು ಲಸಿಕೆ ತೆಗೆದುಕೊಳ್ಳುವ ನಾಟಕವಾಡಿ ಪೋಸ್ ನೀಡಿರುವುದು ಭಾರೀ ಚರ್ಚೆಗೆ ಕಾರಣವಾಗಿದೆ.

ಕಳೆದ ಜ.16ರಂದು ತುಮಕೂರು ಜಿಲ್ಲೆಯಲ್ಲಿ ಪ್ರಥಮವಾಗಿ ಕೊರೊನಾ ವಾರಿಯರ್ಸ್ ಗೆ ವ್ಯಾಕ್ಸಿನ್ ನೀಡುವ ಕಾಯ್ರಕ್ರಮಕ್ಕೆ ಜಿಲ್ಲಾಸ್ಪತ್ರೆಯಲ್ಲಿ ಅದ್ಧೂರಿಯಾಗಿ ಚಾಲನೆ ನೀಡಲಾಗಿತ್ತು. ಇದೇ ವೇಳೆ ಡಿಎಚ್‌ಒ ಡಾ.ನಾಗೇಂದ್ರಪ್ಪ ಅವರು ಇಂಜೆಕ್ಷನ್ ತುಂಬಿದ ಸೂಜಿಯನ್ನು ಚುಚ್ಚಿಕೊಳ್ಳುತ್ತಿರುವಂತೆ ಪೋಸ್ ನೀಡಿ ನಾಟಕವಾಡಿರುವುದು ಭಾರೀ ಚರ್ಚೆಗೆ ಗ್ರಾಸವಾಗಿದೆ.

ಸರಕಾರಿ ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲೆ ಡಾ.ರಜನಿಯವರು ಕೊರೊನಾ ವ್ಯಾಕ್ಸಿನ್ ತೆಗೆದುಕೊಳ್ಳುತ್ತಿರುವಂತೆ ವಿಕ್ಟರಿ ತೋರಿಸಿ ಫೋಟೋಗಳಲ್ಲಿ ಮಿಂಚಿದ್ದಾರೆಯೇ ಹೊರತು ವ್ಯಾಕ್ಸಿನ್ ತೆಗೆದುಕೊಂಡಿಲ್ಲ.

ಈ ಇಬ್ಬರು ಅಧಿಕಾರಿಗಳು ಸರಕಾರಿ ವ್ಯಾಕ್ಸಿನ್ ಮೇಲೆ ನಂಬಿಕೆಯಿಟ್ಟಿಲ್ಲದಿರುವುದು ಕಂಡುಬರುತ್ತಿದೆ. ಆದರೆ ಅಮಾಯ ಪೌರ ಕಾರ್ಮಿಕರು, ಅಂಗನವಾಡಿ ಕಾರ್ಯಕರ್ತೆಯರ, ಆಶಾ ಕಾರ್ಯಕರ್ತೆ ಯರ ಮೇಲೆ ಪ್ರಯೋಗ ಮಾಡಿದ್ದು ಎಷ್ಟು ಸರಿ. ಧೈರ್ಯ ತುಂಬವ ಬದಲು ವೈದ್ಯಾಧಿಕಾರಿಗಳು ನಡೆದುಬಕೊಂಡ ರೀತಿ ಲಸಿಕೆಯ ಸುತ್ತ ಅನುಮಾನದ ಹುತ್ತವನ್ನು ಬೆಳೆಸಿದೆ. ಈ ಇಬ್ಬರೂ ಅಧಿಕಾರಿಗಳನ್ನು ಅಮಾನತ್ತು ಮಾಡಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಆದರೆ ಈ ಆರೋಪವನ್ನು ನಿರಾಕರಿಸಿರುವ ಡಿಹೆಚ್‌ಓ ನಾಗೇಂದ್ರಪ್ಪ ಅವರು, ನಾನು ಲಸಿಕೆ ಹಾಕಿಸಿಕೊಂಡಿದ್ದೇನೆ ಎಂದು ಸ್ಪಷ್ಟನೆ ನೀಡಿದ್ದಾರೆ. ‘ಸಾರ್ವಜನಿಕರಿಗೆ ಅರಿವು ಮೂಡಿಸುವ ಸಲುವಾಗಿ ಜ.16ರಂದು ಜಿಲ್ಲಾ ಆಸ್ಪತ್ರೆಯಲ್ಲಿ ಖುದ್ದಾಗಿ ಲಸಿಕೆ ಹಾಕಿಸಿಕೊಳ್ಳಲಾಗಿತ್ತು. ಆದರೆ ಇದಕ್ಕೆ ಸಂಬಂಧಿಸಿದಂತೆ ದಾಖಲಾತಿಯು ತಾಂತ್ರಿಕ ಅಂಶಗಳಿಂದ ಅಪ್‌ಲೋಡ್ ಆಗಿಲ್ಲ. ಈ ಬಗ್ಗೆ ಸೂಕ್ತ ಕ್ರಮ ವಹಿಸಲಾಗುವುದು ಹಾಗೂ ಈ ಮೂಲಕ ಮಾಧ್ಯಮ ವರದಿ ಬಗ್ಗೆ ಸ್ಪಷ್ಟನೆ ನೀಡುತ್ತಿದ್ದೇವೆ’ ಎಂದು ಸ್ಪಷ್ಟನೆ ನೀಡಿದ್ದಾರೆ.

ಡಾ.ರಜನಿ ಅವರು ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ಇದು ಸುಳ್ಳು ಸುದ್ದಿ ಎಂದು ಸ್ಪಷ್ಟನೆ ನೀಡಿದ್ದಾರೆ. ಜೊತೆಗೆ ಲಸಿಕೆ ತೆಗೆದುಕೊಂಡಿರುವುದರ ಬಗ್ಗೆ ದಾಖಲೆಗಳನ್ನು ಬಿಡುಗಡೆ ಮಾಡಿದ್ದಾರೆ.

 

ವಿಡಿಯೋ ನೋಡಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ

ಕೋವಿಡ್ ಲಸಿಕೆ ತೆಗೆದುಕೊಂಡಂತೆ ನಾಟಕ ಮಾಡಿದ ವೈದ್ಯಾಧಿಕಾರಿಗಳು

Donate Janashakthi Media

Leave a Reply

Your email address will not be published. Required fields are marked *