ಅಪರಾಧ ಕೃತ್ಯಗಳಲ್ಲಿ ನಿರಂತರವಾಗಿ ಭಾಗಿ; ಮುಖಂಡ ಪುನೀತ್ ಕೆರೆಹಳ್ಳಿ ಬಂಧನ

ಬೆಂಗಳೂರು: ಅಪರಾಧ ಕೃತ್ಯಗಳಲ್ಲಿ ನಿರಂತರವಾಗಿ ಭಾಗಿಯಾಗುತ್ತಿರುವ ಆರೋಪದಡಿ ರಾಷ್ಟ್ರರಕ್ಷಣಾ ಪಡೆ ಸಂಘಟನೆಯ ಮುಖಂಡ ಪುನೀತ್ ಕುಮಾರ್‌ ಅಲಿಯಾಸ್‌ ಪುನೀತ್ ಕೆರೆಹಳ್ಳಿ ರನ್ನು ಸೆಪ್ಟೆಂಬರ್‌ 10 ರಾತ್ರಿ ಬಸವನಗುಡಿ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

ಪುನೀತ್ ಇದುವರೆಗೂ 14 ಗಂಭೀರ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದಾರೆ. ಬಿಎನ್‌ಎಸ್‌ಎಸ್ ಸೆಕ್ಷನ್ 127ರ ಅಡಿ ಪ್ರಕರಣ ದಾಖಲಿಸಿಕೊಂಡು ಬೆಂಗಳೂರು ದಕ್ಷಿಣ ವಿಭಾಗದ ವಿಶೇಷ ಕಾರ್ಯನಿರ್ವಾಹಕ ದಂಡಾಧಿಕಾರಿ ಎದುರು ಹಾಜರು‌ ಪಡಿಸಲಾಯಿತು.

ಇದನ್ನೂ ಓದಿ: ಮೈಕ್ರೊಫೈನಾನ್ಸ್ : ಬಂಡವಾಳಶಾಹಿಯನ್ನು ಸ್ಥಿರೀಕರಿಸಬಹುದೆಂಬ ಹುಚ್ಚು ಕಲ್ಪನೆ

ಇನ್ನ ಮುಂದೆ ಯಾವುದೇ ಅಪರಾಧ ಕೃತ್ಯಗಳಲ್ಲಿ ಭಾಗಿ ಆಗುವುದಿಲ್ಲ. ಸಾರ್ವಜನಿಕರ ಶಾಂತಿ ಹಾಗೂ ಸೌಹಾರ್ದಕ್ಕೆ ಧಕ್ಕೆ ತರುವುದಿಲ್ಲ ಎಂಬುದಾಗಿ ಮುಚ್ಚಳಿಕೆ ಬರೆದುಕೊಡುವಂತೆ ದಂಡಾಧಿಕಾರಿಯವರು ಆರೋಪಿ ಪುನೀತ್‌ಗೆ ಸೂಚನೆ ನೀಡಿದರು. ಆದರೆ, ಮುಚ್ಚಳಿಕೆ ಬರೆದುಕೊಡಲು ನಿರಾಕರಿಸಿದ್ದರಿಂದ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶಿಸಿದ್ದಾರೆ.

ಇದನ್ನೂ ನೋಡಿ: ಗೌರಿ ನೆನಪು : ವಿಚಾರಗಳನ್ನು ಕೊಲ್ಲಲು ಸಾಧ್ಯವಿಲ್ಲ – ಡಾ. ಎಂ.ಎಸ್. ಆಶಾದೇವಿ – Janashakthi Media

Donate Janashakthi Media

Leave a Reply

Your email address will not be published. Required fields are marked *