ವಿಪಕ್ಷಗಳ ನಾಯಕರಿಂದ ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ – ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ ಮಣಿಪುರದ ಪರಿಸ್ಥಿತಿ ಮತ್ತು ಅಲ್ಲಿಗೆ ಭೇಟಿ ನೀಡಿದ್ದ ಇಂಡಿಯಾ ಒಕ್ಕೂಟದ ಸಂಸದರ ಅವಲೋಕನವನ್ನು ರಾಷ್ಟ್ರಪತಿಗಳ ಗಮನಕ್ಕೆ ತರುತ್ತೇವೆ ಎಂದು ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಹೇಳಿದ್ದಾರೆ.

ಕಳೆದ ವಾರಾಂತ್ಯದಲ್ಲಿ ಮಣಿಪುರಕ್ಕೆ ಭೇಟಿ ನೀಡಿದ್ದ ಇಂಡಿಯಾ ಒಕ್ಕೂಟದ 21 ಸಂಸದರ ಜೊತೆಗೂಡಿ, ವಿರೋಧ ಪಕ್ಷಗಳ ಹಿರಿಯ ನಾಯಕರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾಗಿ ಮಣಿಪುರ ವಿಷಯದಲ್ಲಿ ಮಧ್ಯಪ್ರವೇಶಿಸುವಂತೆ ಮನವಿ ಮಾಡಲಿದ್ದೇವೆ ಎಂದರು.

ಇದನ್ನೂ ಓದಿ:ಮಣಿಪುರ ವಿಷಯದಲ್ಲಿ ಮೋದಿಯವರೇ ನಿಮ್ಮ ಮೌನವನ್ನು ಭಾರತ ಎಂದಿಗೂ ಕ್ಷಮಿಸುವುದಿಲ್ಲ:ಮಲ್ಲಿಕಾರ್ಜುನ ಖರ್ಗೆ

ಮಣಿಪುರ ವಿಚಾರದಲ್ಲಿ ಪ್ರಧಾನಿ ಮೋದಿ ಹೇಳಿಕೆಗೆ ವಿಪಕ್ಷಗಳು ಪಟ್ಟು ಹಿಡಿದಿದ್ದರಿಂದ ಈವರೆಗೆ ನಡೆದಿರುವ 9 ದಿನಗಳ ಸಂಸತ್ತಿನ ಮುಂಗಾರು ಅಧಿವೇಶನ ಗದ್ದಲ ಕೋಲಾಹಲದಲ್ಲೇ ಕಳೆದುಹೋಗಿದೆ. ನಿಯಮ 267ರ ಅಡಿಯಲ್ಲಿ ವಿಷಯದ ಬಗ್ಗೆ ಸಮಗ್ರ ಚರ್ಚೆಯನ್ನು ನಡೆಸಬೇಕು ಎಂಬುದು ವಿಪಕ್ಷಗಳು ಒತ್ತಾಯಿಸಿವೆ.

ಲೋಕಸಭೆಯಲ್ಲಿ ಪ್ರತಿಪಕ್ಷಗಳು ಅವಿಶ್ವಾಸ ನಿರ್ಣಯ ಮಂಡಿಸುವ ಮೂಲಕ ಮಣಿಪುರ ವಿಚಾರದಲ್ಲಿ ಪ್ರಧಾನಿ ಬಾಯಿ ಬಿಡಿಸುವ ಕೊನೆಯ ಪ್ರಯತ್ನ ನಡೆಸಿವೆ. ಮಣಿಪುರ ಸ್ಥಿತಿ ಕುರಿತಂತೆ ತೀವ್ರ ಕಳವಳ ವ್ಯಕ್ತಪಡಿಸಿದ್ದ ಸುಪ್ರೀಂಕೋರ್ಟ್‌, ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ. ಸಾಂವಿಧಾನಿಕ ಆಡಳಿತ ಯಂತ್ರವೇ ಕುಸಿದಿದೆ ಎಂದು ಹೇಳಿತ್ತು.

Donate Janashakthi Media

Leave a Reply

Your email address will not be published. Required fields are marked *