ಹಾಸನ: ಹಾಸನದ ಪಾಳೆಗಾರಿಕೆ ಅಂತ್ಯ ಮಾಡಲು ನ್ಯಾಯಾಂಗ ಹೋರಾಟ ಯಶಸ್ವಿಯಾಗಬೇಕು ಎಂದು ಸಮಾಜ ಪರಿವರ್ತನಾ ಸಮುದಾಯದ ಸಂಸ್ಥಾಪಕ ಅಧ್ಯಕ್ಷ ಎಸ್.ಆರ್.ಹಿರೇಮಠ್ ಸ್ಪಷ್ಟಪಡಿಸಿದ್ದಾರೆ.
ವಿವಿಧ ಜನಪರ ಸಾಮಾಜಿಕ ಹೋರಾಟಗಾರರು, ವಿವಿಧ ಸಂಘಟನೆಗಳು ಒಗ್ಗಟ್ಟಾಗಿ ಹಾಸನದಲ್ಲಿಂದು ವಿಕೃತ ಲೈಂಗಿಕ ಹಗರಣದ ಆರೋಪಿ ಪ್ರಜ್ವಲ್ ರೇವಣ್ಣ ಬಂಧನ್ಕಕೆ ಆಗ್ರಹ, ಲೈಂಗಿಕ ದೌರ್ಜನ್ಯಕ್ಕೊಳಗಾದವರಿಗೆ ಆತ್ಮಸ್ಥೈರ್ಯ ತುಂಬುವ, ಹೆಣ್ಣು ಸಂಕುಲದ ಘನತೆ ಎತ್ತಿ ಹಿಡಿಯಲು “ ಹೋರಾಟದ ನಡಿಗೆ ಹಾಸನದ ಕಡೆಗೆ” ಅಡಿಬರಹದಡಿ ಆಯೋಜಿಸಿದ್ದ “ ಹಾಸನ ಚಲೋ” ಬೃಹತ್ ಕಾರ್ಯಕ್ರವನ್ನುದ್ದೇಶಿ ಎಸ್.ಆರ್.ಹಿರೇಮಠ್ ಮಾತನಾಡಿದರು.
ಹಾಸನದಲ್ಲಿ ಸುದೀರ್ಘಕಾಲ ನಡೆದು ಬಂದಿರುವ ಪಾಳಿಗಾರಿಕೆ ದರ್ಪದಿಂದ ನಡೆದಿರುವ ದೌರ್ಜನ್ಯಕ್ಕೆ ಕೊನೆ ಹಾಡೋಣ. ಸಮಗ್ರ ನ್ಯಾಯ ಪಡೆಯಲು ಅನುಸರಣೆಯಾಗಿ ಐತಿಹಾಸಿಕ ಹೋರಾಟ ನಡೆಸಬೇಕಿದೆ. ನ್ಯಾಯಾಂಗ ಹೋರಾ ಹೋರಾಟ ಹೇಗೆ ಬಳ್ಳಾರಿಯ ಗಣಿ ಧಣಿಗಳ ಪಾಳೆಗಾರಿಕೆಯನ್ನು ಅಂತ್ಯ ಕಾಣಿಸಿದಂತೆ, ಹಾಸನದ ಪಾಳೆಗಾರಿಕೆಯನ್ನು ಅಂತ್ಯ ಮಾಡಲು ನ್ಯಾಯಾಂಗ ಹೋರಾಟವನ್ನು ಯಶಸ್ವಿಯಾಗಿ ನಡೆಸಲು ನನ್ನ ಕೊನೆ ಉಸಿರು ಇರುವವರೆಗೂ ಸಹಕಾರ ನೀಡುವುದಾಗಿ ಹೇಳಿದರು.
ಇದನ್ನು ಓದಿ : ಅಷ್ಟಕ್ಕೂ ಕೇರಳದತ್ತ ಹೆಚ್.ಡಿ.ಕುಮಾರಸ್ವಾಮಿ ಇದ್ದಕ್ಕಿದ್ದಂತೆ ನಡೆದದ್ದೇಕೆ?
ಹೋರಾಟದ ನಡಿಗೆ ಹಾಸನದ ಕಡೆಗೆ ಎಂಬುದರ ಜತೆಗೆ ಸಮಾನತೆಯ ಕಡೆಗೆ ಆಗಬೇಕು. ಈ ದೇಶದಲ್ಲಿ ಮೂರು ಐತಿಹಾಸಿಕ ಹೋರಾಟಗಳು ನಡೆದಿವೆ. ಅಂದು ಮಹಾಡ್ ಸತ್ಯಾಗ್ರಹವನ್ನು ಅಂಬೇಡ್ಕರ್ ನಡೆಸಿದ್ದರೆ, ಸೂರ್ಯ ಮುಳುಗದ ಸಾಮ್ರಾಜ್ಯ ನಮ್ಮದು ಅಂತ ಕೊಚ್ಚಿಕೊಳ್ಳುತ್ತಿದ್ದ ಬ್ರಿಟಿಷರಿಗೆ ವಾಪಸ್ ಕಳಿಸಲು ನಡೆದ ಸತ್ಯಾಗ್ರಹ ಹೋರಾಟ ಹಾಗೂ ಸಾಮೂಹಿಕ ನಾಯಕತ್ವದಲ್ಲಿ ದೆಹಲಿ ಗಡಿಗಳಲ್ಲಿ ನಡೆದ ರೈತ ಹೋರಾಟದಲ್ಲಿ ಲಕ್ಷಗಟ್ಟಲೆ ಜನ ಅಹಂಕಾರಿ, ಅಸಹಿಷ್ಣುತೆಯ ಪ್ರತೀಕವಾಗಿರುವ ಪ್ರಧಾನಿ ನರೇಂದ್ರ ಮೋದಿಯನ್ನು ಬಗ್ಗಿಸಿದ ಹೋರಾಟದಂತೆ ಇಂದು ಹಾಸನದಲ್ಲಿ ಮಹಿಳೆಯರ ಸಮಾನತೆಯ ಕಡೆಗೆ ಕೊಂಡೊಯ್ಯಲು ಹೋರಾಟ ನಡೆಯುತ್ತಿದೆ ಎಂದು ಎಸ್.ಆರ್.ಹಿರೇಮಠ್ ವಿವರಿಸಿದರು.
ಈ ರಾಜ್ಯದ ಗೃಹಮಂತ್ರಿ, ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳೇ ಈಗಾಲಾದರೂ ಹಾಸನಕ್ಕೆ ಬನ್ನಿ ನೊಂದ ಮಹಿಳೆಯರ ದನಿ ಕೇಳಿ ನ್ಯಾಯ ನೀಡಿ. ಇಂದು ಪ್ರಜಾಪ್ರಭುತ್ವದ, ಸಂವಿಧಾನದ ಪ್ರತೀಕವಾಗಿ ನಡೆದಿರುವ ಈ ಹೋರಾಟವನ್ನು ಮುಂದುವರೆಸೋಣ ಎಂದರು.
ಇದನ್ನು ನೋಡಿ : ಪ್ರಜ್ವಲ್ ರೇವಣ್ಣ – ಲೈಂಗಿಕ ಹತ್ಯಾಕಾಂಡ ಆರೋಪಿJanashakthi Media