ಬೆಂಗಳೂರು | ಅರೆಕಾಲಿಕ ಕಾನೂನು ಸ್ವಯಂ ಸೇವಕರನ್ನು ನೇಮಿಸಲು ಕಾನೂನು ಸೇವಗಳ ಪ್ರಾಧಿಕಾರ ತೀರ್ಮಾನ

ಬೆಂಗಳೂರು : ಒಂದು ವರ್ಷದ ಅವಧಿಗೆ ಕಾನೂನು ಸೇವೆಗಳನ್ನು ಜನರಿಗೆ ತಲುಪಿಸುವ ಹಾಗೂ ಅವರಿಗೆ ಸಹಾಯ ಮಾಡುವ ನಿಟ್ಟಿನಲ್ಲಿ ಅರೆಕಾಲಿಕ ಕಾನೂನು ಸ್ವಯಂ ಸೇವಕರನ್ನು (ಅಧಿಕಾರ ಮಿತ್ರರು)  ರಾಜ್ಯಾದ್ಯಂತ ನೇಮಿಸಲು ಕರ್ನಾಟಕ ರಾಜ್ಯ ಕಾನೂನು ಸೇವಗಳ ಪ್ರಾಧಿಕಾರ ತೀರ್ಮಾನಿಸಿದೆ ಎಂದು ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಚ್.ಶಶಿಧರ ಶೆಟ್ಟಿ ತಿಳಿಸಿದ್ದಾರೆ.  ಬೆಂಗಳೂರು 

ಇದನ್ನೂ ಓದಿ : ಪೊಲೀಸ್‌ ಇಲಾಖೆಗೆ ಕ್ರಿಮಿನಲ್‌ಗಳು ಯಾರು? ಸಜ್ಜನರು ಯಾರು? ಎಂಬ ವ್ಯತ್ಯಾಸವೇ ಗೊತ್ತಿಲ್ಲವೆ? – ಟಿ.ಎಲ್. ಕೃಷ್ಣೆಗೌಡ

ಮಂಗಳವಾರ ನಗರದ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ‘ಅರೆಕಾಲಿಕ ಕಾನೂನು ಸ್ವಯಂ ಸೇವಕರ’ ಯೋಜನೆಯಡಿ ಈ ಕಾನೂನು ಸ್ವಯಂ ಸೇವಕರ ನೇಮಕ ಮಾಡಿಕೊಂಡು, ಅವರಿಗೆ ತರಬೇತಿಯನ್ನು ನೀಡಲಾಗುವುದು. ಅರೆಕಾಲಿಕ ಕಾನೂನು ಸ್ವಯಂ ಸೇವಕರು ಸಾಮಾನ್ಯ ಜನರು ಮತ್ತು ಸೇವಾ ಸಂಸ್ಥೆಗಳ ನಡುವಿನ ಸಂಪರ್ಕ ಕೊಂಡಿಗಳಾಗಿ ಕೆಲಸ ನಿರ್ವಹಿಸುತ್ತಾರೆ ಎಂದು ಹೇಳಿದರು.

ಇದನ್ನೂ ನೋಡಿ : 2024ನೇ ಕ್ಯಾಲೆಂಡರ್ ವರ್ಷದ ವಡ್ಡರ್ಸೆ ರಘುರಾಮ ಶೆಟ್ಟಿ ಸಾಮಾಜಿಕ ನ್ಯಾಯ ಪತ್ರಿಕೋದ್ಯಮ ಪ್ರಶಸ್ತಿ

Donate Janashakthi Media

Leave a Reply

Your email address will not be published. Required fields are marked *