ಬೆಂಗಳೂರು |ವಿಧಾನ ಪರಿಷತ್‌ ಗೆ ರಮೇಶ್ ಬಾಬು ಸೇರಿದಂತೆ ನಾಲ್ವರನ್ನು ನಾಮ ನಿರ್ದೇಶನ ವರದಿ

ಬೆಂಗಳೂರು : ಪ್ರಸುತ್ತ ಖಾಲಿಯಿರುವ ವಿಧಾನ ಪರಿಷತ್‌ ನಾಲ್ಕೂ ಸ್ಥಾನಗಳಿಗೆ  ರಾಜ್ಯ ಸರಕಾರ ನಾಮ ನಿರ್ದೇಶನ ಮಾಡಿರುವುದಾಗಿ ವರದಿಯಾಗಿದೆ.

ಕೆಪಿಸಿಸಿ ಸಂವಹನ ಮತ್ತು ಮಾಧ್ಯಮ ವಿಭಾಗದ ಅಧ್ಯಕ್ಷ ರಮೇಶ್ ಬಾಬು, ಅನಿವಾಸಿ ಭಾರತೀಯ ಸಮಿತಿಯ ಉಪಾಧ್ಯಕ್ಷೆ ಡಾ.ಆರತಿ ಕೃಷ್ಣ, ಹಿರಿಯ ಪತ್ರಕರ್ತ ಕೆ.ಶಿವಕುಮಾರ್‌ ಮತ್ತು ದಲಿತ ಮುಖಂಡ ಎಫ್‌.ಎಚ್‌.ಜಕ್ಕಪ್ಪನವರ್ ಅವರನ್ನು ನಾಮ ನಿರ್ದೇಶನ ಮಾಡಲಾಗಿದೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ: ಬೆಂಗಳೂರು | ರಂಗಭೂಮಿಯ ಮೌನ ಆತಂಕಕಾರಿ ನಾಗರಾಜಮೂರ್ತಿ

ಪರಿಷತ್‌ ಸದಸ್ಯರಾಗಿದ್ದ ಕಾಂಗ್ರೆಸ್‌ನ ಯು.ಬಿ.ವೆಂಕಟೇಶ್‌, ಪ್ರಕಾಶ್‌ ಕೆ. ರಾಥೋಡ್‌ ಅವರ ಅವಧಿ ಅಕ್ಟೋಬರ್‌ 2024ಕ್ಕೆ, ಜೆಡಿಎಸ್‌ನ ಕೆ.ಎ.ತಿಪ್ಪೇಸ್ವಾಮಿ ಅವರ ಅವಧಿ ಜನವರಿ 2025ಕ್ಕೆ ಮುಕ್ತಾಯವಾಗಿತ್ತು. ಚನ್ನಪಟ್ಟಣ ಉಪಚುನಾವಣೆಗೆ ಸ್ಪರ್ಧಿಸಲು ಸಿ.ಪಿ. ಯೋಗೇಶ್ವರ್‌ ರಾಜೀನಾಮೆ ನೀಡಿದ್ದರಿಂದ ಅವರ ಸ್ಥಾನವೂ ತೆರವಾಗಿತ್ತು. ಹೀಗಾಗಿ ಖಾಲಿ ಇದ್ದ ಸ್ಥಾನಗಳಿಗೆ ನಾಲ್ವರು ಸದಸ್ಯರನ್ನು ನಾಮನಿರ್ದೇಶನ ಮಾಡಲಾಗಿದೆ.

ಇದನ್ನೂ ನೋಡಿ: ಧರ್ಮಸ್ಥಳದ ಎಲ್ಲ ಪ್ರಕರಣಗಳನ್ನು ಎಸ್‌ಐಟಿ ವ್ಯಾಪ್ತಿಗೆ ನೀಡಬೇಕುJanashakthi Media

Donate Janashakthi Media

Leave a Reply

Your email address will not be published. Required fields are marked *