ರಾಜಕೀಯ ಹಂಬಲ: ಬಿಜೆಪಿ ಸೇರುವ ಕಾಲ ಬಂದಿದೆ-ಬಸವರಾಜ ಹೊರಟ್ಟಿ

ಹುಬ್ಬಳ್ಳಿ: ರಾಜ್ಯ ವಿಧಾನ ಪರಿಷತ್ ಚುನಾವಣೆಗೂ ಮುನ್ನವೇ ರಾಜಕೀಯ ಚಟುವಟಿಕೆಗಳು ಬಿರುಸುಗೊಂಡಿವೆ. ಇದರೊಂದಿಗೆ, ಜೆಡಿಎಸ್ ಪಕ್ಷದ ಪರಿಷತ್‌ ಸದಸ್ಯ ಹಾಗೂ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಬಿಜೆಪಿ ಸೇರ್ಪಡೆಯಾವುದು ಖಚಿತವಾಗಿದೆ. ಹೊರಟ್ಟಿ ಅವರ ಅವಧಿ ಜೂನ್ ತಿಂಗಳ ವರೆಗೆ ಇದೆ.

ಹುಬ್ಬಳ್ಳಿ ನಗರದಲ್ಲಿ ಭಾನುವಾರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಶಿಕ್ಷಕರ ಕ್ಷೇತ್ರದಿಂದ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ನಡೆಯುವ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸುತ್ತೇನೆ. ಚುನಾವಣೆ ಘೋಷಣೆಯಾಗುತ್ತಿದ್ದಂತೆಯೇ ಬಿಜೆಪಿಗೆ ಸೇರ್ಪಡೆಯಾಗುತ್ತೇನೆ ಎಂದು ಬಸವರಾಜ ಹೊರಟ್ಟಿ ಸ್ಪಷ್ಟಪಡಿಸಿದ್ದಾರೆ.

ಇದನ್ನು ಓದಿ: ಆಮ್‌ ಆದ್ಮಿ ಪಕ್ಷದತ್ತ ಭಾಸ್ಕರ್‌ ರಾವ್‌ ಹೆಜ್ಜೆ?

ಈಗಾಗಲೇ ಬಿಜೆಪಿ ನಾಯಕರು ಎಲ್ಲ ಹಂತದ ನಾಯಕರ ಜೊತೆಗೆ ಮಾತುಕತೆ ನಡೆಸಿದ್ದಾರೆ ಎಂದು ತಿಳಿಸಿದರು.

ನಮ್ಮ ಪಕ್ಷದಿಂದಲೇ ಸ್ಪರ್ಧಿಸುವಂತೆ ಬಿಜೆಪಿ ನಾಯಕರು ಹೇಳಿದ್ದಾರೆ. ಈ ಕುರಿತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾ, ಬಿ. ಎಸ್. ಯಡಿಯೂರಪ್ಪ ಅವರು ನನ್ನೊಂದಿಗೆ ಮಾತನಾಡಿದ್ದಾರೆ.

ಬಿಜೆಪಿ ಪಕ್ಷದ ಕೆಲವರಿಂದ ವಿರೋಧವಿದೆಯಲ್ಲವೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ‘ಯಾರು ವಿರೋಧ ಮಾಡುತ್ತಿದ್ದಾರೆ ಅದು ನನಗೆ ಬೇಕಾಗಿಲ್ಲ. ಶನಿವಾರ ಯಡಿಯೂರಪ್ಪ ಅವರು ನನ್ನೊಂದಿಗೆ ಮಾತನಾಡಿದ್ದಾರೆ’ ಎಂದರು. ಇನ್ನು ಬಿಜೆಪಿಯಿಂದ ಸ್ಪರ್ಧೆಗೆ ಎಚ್. ಡಿ. ಕುಮಾರಸ್ವಾಮಿ ಅವರೂ ಕೂಡಾ ಮುಕ್ತವಾಗಿ ಒಪ್ಪಿದ್ದಾರೆ. ಬಿಜೆಪಿ ಸೇರ್ಪಡೆಗೆ ಕರ್ನಾಟಕದ ಎಲ್ಲಾ ನಾಯಕರು ಸಹಮತ ವ್ಯಕ್ತಪಡಿಸಿದ್ದಾರೆ ಎಂದು ಹೊರಟ್ಟಿ ಸ್ಪಷ್ಟಪಡಿಸಿದರು.

ಇದನ್ನು ಓದಿ: ಕಾಂಗ್ರೆಸ್ ವಿರೋಧಿ ಬಿಜೆಪಿ ಅಲ್ಲ-ಆರ್‌ಎಸ್‌ಎಸ್: ಬಿ.ಕೆ. ಹರಿಪ್ರಸಾದ್

ಇದು ನನ್ನ ರಾಜಕೀಯ ಜೀವನಕ್ಕೆ ಅನಿವಾರ್ಯತೆ ಮತ್ತು ಅವಶ್ಯಕತೆಯಾಗಿತ್ತು. ಬಿಜೆಪಿ ಸೇರುತ್ತಿರುವುದು ಒಂದು ದಿಢೀರ್ ಬೆಳವಣಿಗೆ. ಇದನ್ನು ಜಾಸ್ತಿ ದಿನ ಮುಚ್ಚಿಟ್ಟಿಕೊಳ್ಳುವ ಅವಶ್ಯಕತೆ ಇಲ್ಲ. ನನ್ನ ಜೊತೆಗೆ ಬಿಜೆಪಿಗೆ ಬನ್ನಿ ಅಂತ ಯಾರಿಗೂ ಬಲವಂತ ಮಾಡುವುದಿಲ್ಲ. ನಾನು ಬಿಜೆಪಿ ಸೇರುವುದಕ್ಕೆ ಕೆಲ ಸ್ಥಳೀಯ ಕಾರ್ಯಕರ್ತರ ವಿರೋಧವಿದೆ. ಅದನ್ನು ಬಿಜೆಪಿ ನಾಯಕರು ಸರಿ ಮಾಡುತ್ತಾರೆ ಎಂದು ಹೇಳಿದರು.

ಶಿಕ್ಷಕರ ಕ್ಷೇತ್ರದಿಂದ 7 ಬಾರಿ ಗೆಲುವು ಸಾಧಿಸಿರುವ ಬಸವರಾಜ ಹೊರಟ್ಟಿ ಅವರಿಗೆ 76 ವರ್ಷ. ಅವರನ್ನು ಬಿಜೆಪಿಗೆ ಸೇರ್ಪಡೆ ಮಾಡಿಕೊಂಡು ಟಿಕೆಟ್ ಕೊಡಬಾರದು ಎಂದು ಬಿಜೆಪಿಯ ಕೆಲವರು ಹೈಕಮಾಂಡ್‌ಗೆ ಪತ್ರ ಬರೆದಿದ್ದಾರೆ ಎಂದು ತಿಳಿದುಬಂದಿದೆ.

3 ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿ ಪಟ್ಟಿ ಪ್ರಕಟ

ರಾಜ್ಯ ವಿಧಾನ ಪರಿಷತ್ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಹೆಸರುಗಳನ್ನು ಘೋಷಣೆ ಮಾಡಿದೆ. ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ನಾಲ್ಕು ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ಈ ಪೈಕಿ 3ಕ್ಕೆ ಮಾತ್ರ ಬಿಜೆಪಿ ಕೇಂದ್ರ ಚುನಾವಣಾ ಸಮಿತಿ ಅಭ್ಯರ್ಥಿಗಳ ಪಟ್ಟಿಯನ್ನು ಶುಕ್ರವಾರ ಬಿಡುಗಡೆ ಮಾಡಿದೆ.

ವಾಯುವ್ಯ ಶಿಕ್ಷಕರ ಕ್ಷೇತ್ರಕ್ಕೆ ಅರುಣ್ ಶಹಾಪುರ, ವಾಯುವ್ಯ ಪದವೀಧರರ ಕ್ಷೇತ್ರಕ್ಕೆ ಹನುಮಂತ ನಿರಾಣಿ ಮತ್ತು ದಕ್ಷಿಣ ಪದವೀಧರ ಕ್ಷೇತ್ರಕ್ಕೆ ಎಂ.ವಿ. ರಾಜಶೇಖರ್ ಅವರನ್ನು ಅಭ್ಯರ್ಥಿಗಳನ್ನಾಗಿ ಘೋಷಿಸಲಾಗಿದೆ. ದಕ್ಷಿಣ ಪದವೀಧರ ಕ್ಷೇತ್ರದಲ್ಲಿ ಮಾಜಿ ಎಂಎಲ್​ಸಿ ಗೋ. ಮಧುಸೂಧನ್  ಅವರಿಗೆ ಟಿಕೆಟ್ ಕೈತಪ್ಪಿದೆ.

Donate Janashakthi Media

Leave a Reply

Your email address will not be published. Required fields are marked *