ಬೆಂಗಳೂರು: ನಾನು ವಿಪಕ್ಷ ನಾಯಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ, ನೈತಿಕತೆ ಇದ್ರೆ ಸಿಎಂ ಸಿದ್ದರಾಮಯ್ಯ ರಿಂದ 4 ಸಚಿವರು ರಾಜೀನಾಮೆ ಪಡೆಯಲಿ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಸವಾಲು ಹಾಕಿದ್ದಾರೆ.
ನೈತಿಕತೆ ಹೊತ್ತು ಸಿದ್ದರಾಮಯ್ಯ ರಾಜೀನಾಮೆಯನ್ನ 4 ಜನ ಮಂತ್ರಿಗಳು ಪಡೆಯಲಿ ಅಥವಾ ಪರಮೇಶ್ವರ್ ಬಿಟ್ಟು ಉಳಿದ 3 ಜನ ಸಚಿವರು ರಾಜೀನಾಮೆ ಕೊಟ್ಟು ಸಿದ್ದರಾಮಯ್ಯ ಮೇಲಿನ ಪ್ರೀತಿ ಅನಾವರಣ ಮಾಡಲಿ ಅಂತ ವಿಪಕ್ಷ ನಾಯಕ ಆರ್. ಅಶೋಕ್ 4 ಜನ ಸಚಿವರಿಗೆ ಸವಾಲ್ ಹಾಕಿದ್ದಾರೆ.
ಇದನ್ನೂ ಓದಿ: ಉತ್ತರ ಪ್ರದೇಶ| ಇಬ್ಬರು ಮಕ್ಕಳ ಸಹಿತ ದಲಿತ ಕುಟುಂಬದ ನಾಲ್ವರ ಗುಂಡಿಕ್ಕಿ ಹತ್ಯೆ
ಅಶೋಕ್ ವಿರುದ್ಧ ಭೂ ಅಕ್ರಮದ ಬಗ್ಗೆ ಪ್ರಸ್ತಾಪ ಮಾಡಿದ್ದ ಬೆನ್ನಲ್ಲೇ 4 ಜನ ಸಚಿವರಿಗೆ ತಿರುಗೇಟು ಕೊಟ್ಟ ಅಶೋಕ್, ಸಚಿವರಿಗೆ ನಾನು ಕೊಟ್ಟಿರೋ ಸವಾಲನ್ನ 24 ಗಂಟೆ ಒಳಗೆ ಸ್ವೀಕಾರ ಮಾಡಲಿ ಅಂತ ಸವಾಲ್ ಹಾಕಿದ್ರು.
ಲೊಟ್ಟೆಗೊಲ್ಲಹಳ್ಳಿ ಭೂಮಿಗೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ನ್ಯಾಯಾಲಯ ಮತ್ತು ಹೈಕೋರ್ಟ್‌ನಲ್ಲಿ ನನ್ನ ಪರ ತೀರ್ಪು ಕೊಟ್ಟಿದೆ. ಸಿದ್ದರಾಮಯ್ಯ ರೀತಿ ತನಿಖೆಗೆ ಆದೇಶ ಮಾಡಿಲ್ಲ. ಹೀಗಿದ್ರೂ ದ್ವೇಷದ ರಾಜಕೀಯಕ್ಕಾಗಿ ನನ್ನ ಮೇಲೆ ಆರೋಪ ಮಾಡೋದು ಸರಿಯಲ್ಲ ಎಂದಿದ್ದಾರೆ.
ಇದನ್ನೂ ನೋಡಿ: ಮುಡಾ ಪ್ರಕರಣ | ದ್ವೇಷ ಸಾಧನೆಗೆ ರಾಜಕೀಯ ಕುಟುಂಬದ ಹೆಣ್ಣುಮಕ್ಕಳನ್ನು ಎಳೆದುತರಬೇಡಿ; ಸಿದ್ದರಾಮಯ್ಯ ಪತ್ನಿ ಭಾವುಕ ಪತ್ರ