40% ಕಮಿಷನ್ ಆರೋಪವನ್ನು ದಾಖಲೆ ಸಹಿತ ತೋರಿಸಲಿ: ಕಾಂಗ್ರೆಸ್‌ಗೆ ಬಸವರಾಜ ಬೊಮ್ಮಾಯಿ ಸವಾಲು

ಬೆಂಗಳೂರು: ಬಿಜೆಪಿ ಸರ್ಕಾರದ ಮೇಲಿನ ಶೇ.40ರಷ್ಟು ಕಮಿಷನ್ ಆರೋಪವನ್ನು ಕಾಂಗ್ರೆಸ್ ಸರ್ಕಾರ ದಾಖಲೆ ಸಹಿತ ತೋರಿಸಲಿ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಕಾಂಗ್ರೆಸ್‌ ನಾಯಕರಿಗೆ ಸವಾಲು ಹಾಕಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿ ಅವಧಿಯ ಹಗರಣಗಳ ತನಿಖೆ ಮಾಡುತ್ತೇವೆ ಎಂದಿರುವ ಕಾಂಗ್ರೆಸ್‌ಗೆ ನಾನು ಸ್ಪಷ್ಟವಾಗಿ ಹೇಳುತ್ತಿದ್ದೇ‌ನೆ. ದಯವಿಟ್ಟು ಎಲ್ಲ ತನಿಖೆ ಮಾಡಲಿ. 40% ಕಮಿಷನ್ ಆರೋಪವನ್ನು ನಮ್ಮ ಮೇಲೆ ಅವರು ಹೊರಿಸಿದ್ದಾರೆ. 40% ಆಗಿದೆ ಅಂತ ಅವರು ಪುರಾವೆ ಸಮೇತ ತೋರಿಸಬೇಕು. ಕಾಂಗ್ರೆಸ್ ಸರ್ಕಾರ 40% ಆರೋಪ ಕುರಿತ ಎಲ್ಲ ದಾಖಲೆ ಕೊಡಲಿ. ನಾವು 40% ಕಮಿಷನ್ ತೆಗೆದುಕೊಂಡಿದ್ದೇವೆ ಎಂಬುದನ್ನು ದಾಖಲೆ ಸಹಿತ ತೋರಿಸಲಿ. ಈ ಸಂಬಂಧ ನಾನು ಕೂಡ ಆಗ್ರಹ ಮಾಡುತ್ತೇನೆ ಎಂದರು.

ಇದನ್ನೂ ಓದಿಸಾರ್ವಜನಿಕರಿಂದ ಸನ್ಮಾನ ರೂಪದಲ್ಲಿ ಹಾರ-ತುರಾಯಿ, ಶಾಲು-ಶಲ್ಯಗಳನ್ನು ಸ್ವೀಕರಿಸಲ್ಲ; ಪುಸ್ತಕಗಳನ್ನು ನೀಡಬಹುದು – ಸಿಎಂ ಸಿದ್ದರಾಮಯ್ಯ

ಗುತ್ತಿಗೆದಾರರ ಸಂಘದವರೂ 40% ಕಮಿಷನ್ ಆರೋಪ ಮಾಡಿದ್ದರು. ಈಗ ಅವರ ಸರ್ಕಾರ ಬಂದಿದೆ. 40% ಇಲ್ಲ ಅಂತ ಹೇಳಬಹುದು. ಗುತ್ತಿಗೆದಾರ ಸಂಘದವರು ಇನ್ನು ಮುಂದಿನ ಎಲ್ಲ ಟೆಂಡರ್‌ಗಳಲ್ಲೂ 40% ಕಡಿಮೆ ಹಾಕಲಿ. ಅಂದರೆ ಮಾತ್ರ ನಮ್ಮ ಕಾಲದಲ್ಲಿ 40% ಇತ್ತು ಅಂತ ಆಗುತ್ತದೆ. ಇವತ್ತು ಅಷ್ಟೇ ಮೊತ್ತಕ್ಕೆ ಟೆಂಡರ್ ಹಾಕಿದರೆ, 40% ಈಗಲೂ ಇದೆ ಅಂತ ಆಗುತ್ತದೆ ಎಂದರು. ಗುತ್ತಿಗೆದಾರರು ಸಂಘದ ಅಧ್ಯಕ್ಷ ಕೆಂಪಣ್ಣ ಮೇಲೆ ಬಹಳ ದೊಡ್ಡ ಜವಾಬ್ದಾರಿ ಇದೆ. ಇನ್ಮೇಲೆ ಕೆಂಪಣ್ಣ ತಮ್ಮೆಲ್ಲ ಸಂಘದವರಿಗೂ 40% ಕಮ್ಮಿಗೆ ಟೆಂಡರ್ ಹಾಕುವಂತೆ ಹೇಳಬೇಕು. ಕೆಂಪಣ್ಣ ಇದುವರೆಗೆ 40% ದಾಖಲೆ ಕೊಡ್ಲಿಲ್ಲ, ಕೋರ್ಟ್‌ಗೂ ಕೊಡ್ಲಿಲ್ಲ. ನಮ್ಮ ವಿರುದ್ಧ ಅಪಪ್ರಚಾರ ಮಾಡಿದರು. ಕಾಂಗ್ರೆಸ್‌ನವರು ಅದರ ಲಾಭ ತೆಗೆದುಕೊಂಡಿದ್ದಾರೆ. ನಮ್ಮ ಕಾಲದ, ಅವರ ಕಾಲದ ಎಲ್ಲವನ್ನೂ ತನಿಖೆ ಮಾಡಲಿ. ಅದರ ಜೊತೆಗೆ ಪಿಎಸ್ಐ ಪ್ರಕರಣವನ್ನೂ ತನಿಖೆ ಮಾಡಲಿ. ಎಲ್ಲ ಪ್ರಕರಣಗಳ ಸತ್ಯ ಹೊರಗೆ ಬರಲಿ. ನಾವು ಅವರ ಕಾಲದ ಹಗರಣಗಳನ್ನು ಲೋಕಾಯುಕ್ತಕ್ಕೆ ಕೊಟ್ಟಿದೀವಿ ಎಂದರು.

 

Donate Janashakthi Media

Leave a Reply

Your email address will not be published. Required fields are marked *