ಲಿಂಗಸ್ಗೂರು : ರಾಯಚೂರು ಜಿಲ್ಲೆಯ, ಲಿಂಗಸ್ಗೂರು ತಾಲ್ಲೂಕಿನ ಆನ್ವರಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎರಡು ವರ್ಷಗಳ ಹಿಂದೆಯಷ್ಟೆ ನಿರ್ಮಾಣಗೊಂಡ ಶಾಲಾ ಕೊಠಡಿ ಕುಸಿದು ವಿದ್ಯಾರ್ಥಿಯ ತಲೆಗೆ ಗಂಭೀರ ಪೆಟ್ಟು ಬಿದ್ದಿರುವ ಘಟನೆ ಸೋಮುವಾರ ನಡೆದಿದೆ.
1ನೇ ತರಗತಿಯ ವಿದ್ಯಾರ್ಥಿ ಅರುಣ್ ತಲೆಗೆ ಗಂಭೀರ ಪೆಟ್ಟಾಗಿದೆ. ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರ ಆನ್ವರಿ ಗೆ ದಾಖಲಿಸಲಾಗಿದ್ದು 5 ಹೊಲಿಗೆಗಳು ಬಿದ್ದಿವೆ. ಈ ಘಟನೆಯನ್ನು ಭಾರತ ವಿದ್ಯಾರ್ಥಿ ಫೆಡರೇಷನ್ ಖಂಡಿಸಿದ್ದು, ತಕ್ಷಣೆವೇ ಗಾಯಗೊಂಡ ವಿದ್ಯಾರ್ಥಿಯ ಸಂಪೂರ್ಣ ಆಸ್ಪತ್ರೆ ವೆಚ್ಚವನ್ನು ಸಂಬಂಧಪಟ್ಟ ಸರ್ಕಾರ ಹೊರಬೇಕು. ಹಾಗೂ ಕುಟುಂಬಕ್ಕೆ ಪರಿಹಾರ ನೀಡಬೇಕು ಎಂದು ಆಗ್ರಹಿಸಿದೆ.
ಇದನ್ನೂ ಓದಿ : ‘ನೀಟ್ ಪ್ರಶ್ನೆ ಪತ್ರಿಕೆ ಲೀಕ್ ಆಗಿರೋದು ನಿಜ; ಮರುಪರೀಕ್ಷೆ ನಡೆಸಿ’ ಎಂದ ಸುಪ್ರೀಂಕೋರ್ಟ್!
ನೂತನವಾಗಿ ನಿರ್ಮಾಣಗೊಂಡ ಕಟ್ಟಡ ಸಂಪೂರ್ಣವಾಗಿ ಕಳಪೆಯಾಗಿದ್ದು, ಈ ಘಟನೆಯ ಹೊಣೆಯನ್ನು ಕಟ್ಟಡ ನಿರ್ಮಾಣದ ಗುತ್ತಿಗೆದಾರರು ಹಾಗೂ ಶಾಸಕರು ಹಾಗೂ ಸಂಬಂಧಪಟ್ಟ ಇಲಾಖೆಯವರು ಕಾರಣ ಇವರ ಮೇಲೆ ಸೂಕ್ತ ಕಾನೂನು ಕ್ರಮ ಆಗಬೇಕು. ಗುತ್ತಿಗೆದಾರನ ಲೈಸೆನ್ಸ್ ರದ್ದು ಆಗಬೇಕು ಎಂದು ಎಸ್ಎಫ್ಐ ಜಿಲ್ಲಾಧ್ಯಕ್ಷ ರಮೇಶ್ ವಿರಾಪೂರ ಆಗ್ರಹಿಸಿದ್ದಾರೆ.
ಘಟನಾ ಸ್ಥಳಕ್ಕೆ ಭೇಟಿ ನೀಡಿದ ಕ್ಷೇತ್ರಶಿಕ್ಷಣಾಧಿಕಾರಿಗಳು ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸುವುದಾಗಿ ಭರವಸೆ ನೀಡಿದರು.