ಕಾಂಗ್ರೆಸ್: ದೆಹಲಿ ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

ವದೆಹಲಿ: ದೆಹಲಿ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಐವರು ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಇದರೊಂದಿಗೆ 70 ಕ್ಷೇತ್ರಗಳ ಪೈಕಿ 68 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಿದಂತಾಗಿದೆ.

ಕಾಂಗ್ರೆಸ್ ಸರ್ಕಾರವು ಬವಾನಾ (ಎಸ್‌ಸಿ) ಕ್ಷೇತ್ರದಿಂದ ಸುರೇಂಧ್ರ ಕುಮಾರ್, ರೋಹಿಣಿ ಕ್ಷೇತ್ರದಿಂದ ಸುಮೇಶ್ ಗುಪ್ತಾ, ಕರೋಲ್ ಬಾಗ್‌ (ಎಸ್‌ಸಿ) ಕ್ಷೇತ್ರದಿಂದ ರಾಹುಲ್ ಧನಕ್, ತುಘಲಕಾಬಾದ್‌ನಿಂದ ವೀರೇಂದ್ರ ಬಿಧೂರಿ ಮತ್ತು ಬದರ್‌ಪುರದಿಂದ ಅರ್ಜುನ್ ಭದಾನ ರನ್ನು ಕಣಕ್ಕಿಳಿಸಿದೆ.

ಕಾಂಗ್ರೆಸ್‌ ಮಂಗಳವಾರ 15 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿತ್ತು. ಪಟೇಲ್ ನಗರದಿಂದ ಮಾಜಿ ಕೇಂದ್ರ ಸಚಿವ ಕೃಷ್ಣಾ ತೀರತ್ ಮತ್ತು ಓಖ್ಲಾದಿಂದ ಕೌನ್ಸಿಲರ್ ಆರಿಬಾ ಖಾನ್ ಹೆಸರನ್ನು ಪ್ರಕಟಿಸಿತ್ತು.

ಇದನ್ನೂ ಓದಿ: ತೋರಣಗಲ್ಲು ಗ್ರಾಮದ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ ವ್ಯಕ್ತಿಯ ಮೇಲೆ ಕಠಿಣ ಕ್ರಮ ಕೈಗೊಳ್ಳಲು ಒತ್ತಾಯ

ಡಿಸೆಂಬರ್ 24ರಂದು ಕಾಂಗ್ರೆಸ್ 26 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿತ್ತು. ಮಾಜಿ ಶಾಸಕಿ ಅಲ್ಕಾ ಲಂಬಾ (49) ಅವರು ದೆಹಲಿ ಮುಖ್ಯಮಂತ್ರಿ ಅತಿಶಿ ಅವರ ವಿರುದ್ಧ ಕಣಕ್ಕಿಳಿಸಲಾಗಿದೆ. ಕಲ್ಕಾಜಿ ಕ್ಷೇತ್ರದಲ್ಲಿ ರಾಷ್ಟ್ರೀಯ ಮಹಿಳಾ ಕಾಂಗ್ರೆಸ್‌ ಅಧ್ಯಕ್ಷೆಯೂ ಆಗಿರುವ ಲಂಬಾ ಹಾಗೂ ಅತಿಶಿ ಮುಖಾಮುಖಿಯಾಗಲಿದ್ದಾರೆ.

ಇದಕ್ಕೂ ಮುನ್ನ 21 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದ್ದ ಕಾಂಗ್ರೆಸ್, ಮಾಜಿ ಸಂಸದ ಸಂದೀಪ್ ದೀಕ್ಷಿತ್ ಅವರನ್ನು ನವದೆಹಲಿಯಿಂದ ಕಣಕ್ಕಿಳಿಸಿತ್ತು. ಅವರ ಎಎಪಿ ರಾಷ್ಟ್ರೀಯ ಸಂಚಾಲಕ ಅರವಿಂದ ಕೇಜ್ರಿವಾಲ್ ವಿರುದ್ಧ ಸೆಣಸಾಟ ನಡೆಸಲಿದ್ದಾರೆ.

ದೆಹಲಿ ವಿಧಾನಸಭಾ ಚುನಾವಣೆಗೆ ಫೆಬ್ರುವರಿ 5ರಂದು ಮತದಾನ ನಡೆಯಲಿದ್ದು, ಫೆಬ್ರುವರಿ 8ರಂದು ಮತ ಎಣಿಕೆ ನಡೆಯಲಿದೆ.

ಇದನ್ನೂ ನೋಡಿ: ಬಳ್ಳಾರಿ ವಿಶ್ವವಿದ್ಯಾಲಯ : ಕಿರುಕುಳಕ್ಕೆ ಹಂಗಾಮಿ ನೌಕರ ಆತ್ಮಹತ್ಯೆ – ಎಸ್ಎಫ್ಐ ಆರೋಪ Janashakthi Media

Donate Janashakthi Media

Leave a Reply

Your email address will not be published. Required fields are marked *