1008 ಸರಕಾರಿ ಶಾಲೆಗಳಲ್ಲಿ ಎಲ್.ಕೆ.ಜಿ – ಯು.ಕೆ.ಜಿ ತರಗತಿ ಪ್ರಾರಂಭ: ಮಧು ಬಂಗಾರಪ್ಪ

Please follow and like us:
ಬಳ್ಳಾರಿ: ಬಜೆಟ್‌ನಲ್ಲಿ ಶಾಲಾ ಶಿಕ್ಷಣ ಇಲಾಖೆಗೆ ಈ ಬಾರಿ 41 ಸಾವಿರ ಕೋಟಿ ರೂ. ಅನುದಾನ ನೀಡಲಾಗಿದ್ದೂ, 1008 ಸರಕಾರಿ ಶಾಲೆಗಳಲ್ಲಿ ಎಲ್.ಕೆ.ಜಿ ಮತ್ತು ಯು.ಕೆ.ಜಿ ತರಗತಿ ಪ್ರಾರಂಭಿಸಲಾಗಿದೆ ಎಂಬುದಾಗಿ ಶಾಲಾ ಶಿಕ್ಷಣ ಸಚಿವ ಮಧು ಎಸ್ ಬಂಗಾರಪ್ಪ ತಿಳಿಸಿದ್ದಾರೆ. ಸರಕಾರಿ 

ರಾಜ್ಯದಲ್ಲಿ ಶಾಲೆಗಳ ಶಿಥಿಲ ಕೊಠಡಿಗಳ ದುರಸ್ತಿಗೆ ಕ್ರಮ ವಹಿಸಲಾಗುತ್ತಿದೆ ಎಂದು ತಿಳಿಸಿದರು.

ಇದನ್ನೂ ಓದಿ: ವೈದ್ಯಕೀಯ ಕಾಲೇಜುಗಳಲ್ಲಿ ಅಧ್ಯಯನಕ್ಕೆ ಬೇಕಾದ ಮೃತದೇಹಗಳ ಕೊರತೆ

ರಾಜ್ಯದಲ್ಲಿ ಕರ್ನಾಟಕ ಪಬ್ಲಿಕ್ ಶಾಲೆಗಳು ಸಾಕಷ್ಟು ಪ್ರಭಾವ ಬೀರುತ್ತಿವೆ. ಈ ಶಾಲೆಗಳಲ್ಲಿ ಗುಣಮಟ್ಟ ಶಿಕ್ಷಣ ಲಭಿಸುತ್ತಿದ್ದು, ದಾಖಲಾತಿಗೆ ಬೇಡಿಕೆ ಹೆಚ್ಚುತ್ತಿದೆ. ಮಕ್ಕಳ ಭವಿಷ್ಯಕ್ಕೆ ಎಲ್ಲಾ ಸೌಲಭ್ಯ ನೀಡಲು ನಮ್ಮ ಸರ್ಕಾರ ಬದ್ಧವಾಗಿದೆ. ವಿದ್ಯಾರ್ಥಿಗಳು ಪರೀಕ್ಷೆಗಳಿಗೆ ಭಯಭೀತರಾಗಬಾರದು. ಈ ಹಿಂದೆ ಅವಕಾಶದ ಕೊರತೆಯಿಂದ ವಿದ್ಯಾರ್ಥಿಗಳು ಅನುತ್ತೀರ್ಣರಾಗುತ್ತಿದ್ದರು. ಈಗ ಎಲ್ಲಾ ರೀತಿಯ ಅನುವು ಮಾಡಿಕೊಡಲಾಗುತ್ತಿದೆ ಎಂದರು.

ಕಲ್ಯಾಣ ಕರ್ನಾಟಕ ಭಾಗದ ಶಾಲೆಯ ಮಕ್ಕಳನ್ನು ಮುಂಚೂಣಿಗೆ ತರಲು ರಾಜ್ಯ ಸರ್ಕಾರ ಸಾಕಷ್ಟು ಕೆಲಸ ಮಾಡುತ್ತಿದೆ. ವಿಶೇಷ ಅನುದಾನ ನೀಡಲಾಗಿದೆ. ಶಿಕ್ಷಕರ ನೇಮಕಾತಿಯಲ್ಲಿ ಹೆಚ್ಚಿನ ಶಿಕ್ಷಕರನ್ನು ಇಲ್ಲಿಗೆ ನೀಡಲಾಗುತ್ತಿದೆ ಎಂದು ಹೇಳಿದ ಸಚಿವ ಮಧು ಬಂಗಾರಪ್ಪ ಅವರು, ಗಡಿಭಾಗದ ಶಾಲೆಗಳಲ್ಲಿ ಪೋಷಕರು ತಮ್ಮ ಮಕ್ಕಳಿಗೆ ಪ್ರವೇಶಾತಿ ಪಡೆದು, ವಿದ್ಯಾಭ್ಯಾಸಕ್ಕೆ ಅನುವು ಮಾಡಿಕೊಡಬೇಕು. ಇದರಿಂದ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪುವುದಿಲ್ಲ. ಇದಕ್ಕೆ ಬೇಕಾದ ಎಲ್ಲಾ ಸೌಲಭ್ಯ ರಾಜ್ಯ ಸರ್ಕಾರ ನೀಡಲಿದೆ ಎಂದರು.

ಇದನ್ನೂ ನೋಡಿ: ಭಾರತದ ರಾಜಕೀಯ ಮತ್ತು ಹಣಕಾಸು ಒಕ್ಕೂಟ ಸವಾಲುಗಳು ಮತ್ತು ಸಾಧ್ಯತೆಗಳು Janashakthi Media

Please follow and like us:
Donate Janashakthi Media

Leave a Reply

Your email address will not be published. Required fields are marked *