ಬೆಂಗಳೂರು: ಸಹಕಾರ ಬ್ಯಾಂಕ್ಗಳಿಗೆ 439.12 ಕೋಟಿ ರು. ವಂಚನೆ ಪ್ರಕರಣ ಸಂಬಂಧದಡಿ ತಮ್ಮ ವಿರುದ್ಧದ ಆರೋಪಪಟ್ಟಿಯನ್ನು ನ್ಯಾಯಾಲಯಕ್ಕೆ ಸಿಐಡಿ ಸಲ್ಲಿಸಿದ ಬೆನ್ನಲ್ಲೇ ದಿಢೀರ್ ಬೆಳವಣಿಗೆಯೊಂದರಲ್ಲಿ ಮಾಜಿ ಸಚಿವ, ಶಾಸಕ ರಮೇಶ್ ಜಾರಕಿಹೊಳಿ ಬ್ಯಾಂಕಿಗೆ 120 ಕೋಟಿ ರು. ಸಾಲ ಮರುಪಾವತಿಸಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ.
ಚಾಮರಾಜಪೇಟೆಯಲ್ಲಿರುವ ರಾಜ್ಯ ಅಪೆಕ್ಸ್ ಬ್ಯಾಂಕ್ಗೆ ಮಾಜಿ ಸಚಿವ ಹಾಗೂ ಬೆಳಗಾವಿ ಜಿಲ್ಲೆ ಗೋಕಾಕ್ ಕ್ಷೇತ್ರದ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಸಾಲ ಕಟ್ಟಿದ್ದಾರೆ. ಈ ಸಾಲ ಪಾವತಿ ಬಳಿಕವೂ ಅವರಿಗೆ ಸಂಕಷ್ಟ ತಪ್ಪಿಲ್ಲ.
ಈಗಾಗಲೇ ವಂಚನೆ ಪ್ರಕರಣದಲ್ಲಿ ಮಾಜಿ ಸಚಿವರ ವಿರುದ್ಧ ನ್ಯಾಯಾಲಯಕ್ಕೆ ಸಿಐಡಿ ದೋಷಾರೋಪ ಪಟ್ಟಿ ಸಲ್ಲಿಸಿದೆ. ಇನ್ನು ಮಾಜಿ ಸಚಿವರು ಸಾಲ ಮರಳಿಸಿರುವುದನ್ನು ‘ಕನ್ನಡಪ್ರಭ’ಕ್ಕೆ ಸಿಐಡಿ ಹಿರಿಯ ಅಧಿಕಾರಿಯೊಬ್ಬರು ಖಚಿತಪಡಿಸಿದ್ದಾರೆ. ‘ತಾವು ಪಡೆದ ಸಾಲದಲ್ಲಿ 120 ಕೋಟಿ ರು. ಅನ್ನು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಪಾವತಿಸಿರುವ ಮಾಹಿತಿ ಗೊತ್ತಾಗಿದೆ.
ಇದನ್ನೂ ಓದಿ: ಕಾವೇರಿ ಆರತಿ ಜಾರಿಗೆ ಸಮಿತಿ ರಚನೆ -ಸಂಸ್ಕೃತಿಕ ಪರಂಪರೆಯ ಹೊಸ ಅಧ್ಯಾಯ
ಆದರೆ ವಂಚನೆ ಪ್ರಕರಣ ಸಂಬಂಧ ಸಾಲ ಪಾವತಿಸಿದರೂ ಆರೋಪಪಟ್ಟಿ ಆಧಾರದ ಮೇಲೆ ನ್ಯಾಯಾಲಯದ ವಿಚಾರಣೆ ನಡೆಯಲಿದೆ’ ಎಂದು ಅಧಿಕಾರಿಗಳು ಹೇಳಿದ್ದಾರೆ.
ಸಿಐಡಿ ತನಿಖೆ ವೇಳೆ ನಾನು ತಪ್ಪು ಮಾಡಿಲ್ಲ. ನನಗೆ ಸಾಲದ ವಿಚಾರ ಗೊತ್ತಿಲ್ಲ ಎಂದು ಹೇಳುತ್ತಿದ್ದ ರಮೇಶ್ ಜಾರಕಿಹೊಳಿ ಅವರು, ಇದೀಗ ದಿಢೀರ್ ಆಗಿ ಬ್ಯಾಂಕ್ಗೆ ಸ್ಪಲ್ಪ ಪ್ರಮಾಣದ ಸಾಲ ಮರಳಿಸಿರುವುದು ಕುತೂಹಲ ಮೂಡಿಸಿದೆ. ಈ ಸಾಲ ಪಾವತಿ ಹಿನ್ನೆಲೆಯಲ್ಲಿ ಮಾಜಿ ಸಚಿವರ ನಡೆ ಕುರಿತು ವಿಶ್ಲೇಷಣೆ ನಡೆದಿದೆ.
ವಂಚನೆ ಕೃತ್ಯದಲ್ಲಿ ತಾವು ದೋಷ ಮುಕ್ತರಾಗುವ ವಿಶ್ವಾಸದಲ್ಲಿದ್ದ ಅವರಿಗೆ ಸಿಐಡಿ ಅಧಿಕಾರಿಗಳು ಆರೋಪಪಟ್ಟಿ ಸಲ್ಲಿಕೆಗೆ ಮುಂದಾಗಿದ್ದು ಮುಂದಿನ ಕಾನೂನು ಕ್ರಮದ ಭೀತಿ ಹುಟ್ಟಿಸಿದೆ. ಅದರಿಂದ ತಪ್ಪಿಸಿಕೊಳ್ಳುವ ದೂರದೃಷ್ಟಿ ಇಟ್ಟುಕೊಂಡು ಮಾಜಿ ಸಚಿವರು ಹಣ ಪಾವತಿಸಿರಬಹುದು ಎಂದು ಮೂಲಗಳು ಹೇಳಿವೆ.
ಇದನ್ನೂ ನೋಡಿ: ಪಹಲ್ಗಾಮ್ ದಾಳಿ : ಸಂಜೆ ರಾಜ್ಯಕ್ಕೆ ಆಗಮಿಸಲಿದೆ ಮಂಜುನಾಥ್ ಮೃತದೇಹ Janashakthi Media