ವಿಧಾನ ಪರಿಷತ್‌ನಲ್ಲಿ ಸಾಲ ಮನ್ನಾಕ್ಕೆ ಬಿಜೆಪಿ ಸದಸ್ಯರ ಆಗ್ರಹ

ಬೆಂಗಳೂರು: ರಾಜ್ಯದ ಬರ ಪರಿಸ್ಥಿತಿ ಕುರಿತು ನಡೆದ ಚರ್ಚೆಯಲ್ಲಿ ಬರ ಪರಿಸ್ಥಿತಿ ಎದುರಿಸುತ್ತಿರುವ ಪ್ರದೇಶದ ರೈತರ ಸಾಲ ಮನ್ನಾ ಮಾಡಬೇಕು. ತಕ್ಷಣದ ಪರಿಹಾರವಾಗಿ ₹10 ಸಾವಿರ ಕೋಟಿ ನೆರವು ಘೋಷಿಸಬೇಕು ಎಂದು ಜೆಡಿಎಸ್‌–ಬಿಜೆಪಿ ಸದಸ್ಯರು ಆಗ್ರಹಿಸಿದರು.

ರಾಜ್ಯದ ಬರ ಪರಿಸ್ಥಿತಿ ಕುರಿತು ನಡೆದ ಚರ್ಚೆಯಲ್ಲಿ ವಿಷಯ ಪ್ರಸ್ತಾಪಿಸಿದ ಬಿಜೆಪಿಯ ಛಲವಾದಿ ನಾರಾಯಣ ಸ್ವಾಮಿ, ‘ಕೇಂದ್ರ ಸರ್ಕಾರ ಬರ ಪರಿಹಾರ ಮೊತ್ತ ಬಿಡುಗಡೆ ಮಾಡಿಲ್ಲ ಎಂದು ಆರೋಪ ಮಾಡುವ ಬದಲು ರಾಜ್ಯ ಸರ್ಕಾರ ತನ್ನ ಬಳಿ ಇರುವ ಹಣವನ್ನು ಬಿಡುಗಡೆ ಮಾಡಿ ರೈತರ ಸಂಕಷ್ಟಗಳಿಗೆ ಸ್ಪಂದಿಸಬೇಕು’ ಎಂದರು.

‘ಹಗಲು ವೇಳೆ ಎಂಟು ಗಂಟೆ ತ್ರಿಫೇಸ್‌ ವಿದ್ಯುತ್‌ ನೀಡಬೇಕು. ವಿದ್ಯುತ್‌ ಪರಿವರ್ತಕಗಳ ಅಳವಡಿಕೆಗೆ ರೈತರಿಂದ ಹಣ ಪಡೆಯಬಾರದು, ಕಂದಾಯ ಬಾಕಿ ಮನ್ನಾ ಮಾಡಬೇಕು. ಸಾಲ ವಸೂಲಾತಿ ಮುಂದೂಡಬೇಕು. ಬರದ ಕಾರಣಕ್ಕೆ ಗುಳೆ ಹೋಗುವುದನ್ನು ತಡೆಯಲು ಆಯಾ ಗ್ರಾಮಗಳಲ್ಲೇ ಕೂಲಿ ಸಿಗುವಂತೆ ಮಾಡಬೇಕು. ಅದಕ್ಕೆ ತಗಲುವ ವೆಚ್ಚ ತಕ್ಷಣ ಬಿಡುಗಡೆ ಮಾಡಬೇಕು’ ಎಂದು ಬಹುತೇಕ ಸದಸ್ಯರು ಒತ್ತಾಯಿಸಿದರು.

Donate Janashakthi Media

Leave a Reply

Your email address will not be published. Required fields are marked *