ನವೆಂಬರ್ ಒಳಗೆ ಸ್ಥಳೀಯ ಸಂಸ್ಥೆಗಳ ಚುನಾವಣೆ: ಸಿಎಂ ಡಿಕೆ ಶಿವಕುಮಾರ್

ಬೆಂಗಳೂರು: ರಾಜ್ಯದಲ್ಲಿ ಬಾಕಿ ಇರುವ ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ, ನಗರಸಭೆ ಹಾಗೂ ಮಹಾನಗರ ಪಾಲಿಕೆ ಚುನಾವಣೆಗಳನ್ನು ನವೆಂಬರ್–ಡಿಸೆಂಬರ್ ಒಳಗೆ ನಡೆಸಲು ಸರ್ಕಾರ ಸಿದ್ಧತೆ ನಡೆಸುತ್ತಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ನವೆಂಬರ್ 

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಸ್‌ಐಆರ್‌ ಪ್ರಕ್ರಿಯೆ ಪೂರ್ಣಗೊಂಡ ತಕ್ಷಣ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ದಿನಾಂಕ ನಿಗದಿಪಡಿಸುವಂತೆ ಚುನಾವಣಾ ಆಯೋಗಕ್ಕೆ ಪತ್ರ ಬರೆಯಲಾಗಿದೆ ಎಂದು ಹೇಳಿದರು. ಎಸ್‌ಐಆರ್‌ ಮುಗಿದ ತಕ್ಷಣ ಚುನಾವಣೆ ನಡೆಸುವಂತೆ ಆಯೋಗಕ್ಕೆ ತಿಳಿಸಲಾಗಿದೆ ಎಂದರು.

ಸ್ಥಳೀಯ ಸಂಸ್ಥೆಗಳಿಗೆ ಚುನಾಯಿತ ಪ್ರತಿನಿಧಿಗಳಿಲ್ಲದಿರುವುದರಿಂದ ಅಭಿವೃದ್ಧಿ ಕಾರ್ಯಗಳಿಗೆ ಹಾಗೂ ಸರ್ಕಾರದ ಅನುದಾನಗಳ ಬಳಕೆಗೆ ತೊಂದರೆಯಾಗುತ್ತಿದೆ. ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಬರುವ ಅನುದಾನಗಳ ಮೇಲೂ ಪರಿಣಾಮ ಬೀರುವ ಸಾಧ್ಯತೆ ಇರುವುದರಿಂದ ಚುನಾವಣೆಗಳನ್ನು ಮತ್ತಷ್ಟು ವಿಳಂಬಗೊಳಿಸಲು ಅವಕಾಶ ನೀಡಬಾರದು ಎಂದು ಸಿಎಂ ಡಿಕೆ ಶಿವಕುಮಾರ್ ಹೇಳಿದರು.

ಇದನ್ನೂ ಓದಿ : ಹನೂರು ರೈತರ ಶೂಟೌಟ್ ಹತ್ಯೆ ಖಂಡಿಸಿ ಪ್ರತಿಭಟನೆ: ನ್ಯಾಯಾಂಗ ತನಿಖೆಗೆ ಆಗ್ರಹ

ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ, ನಗರಸಭೆ ಹಾಗೂ ಮಹಾನಗರ ಪಾಲಿಕೆ ಸೇರಿದಂತೆ ಎಲ್ಲ ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ನಿಗದಿತ ಅವಧಿಯಲ್ಲಿ ನಡೆಸುವುದು ಅಗತ್ಯ ಎಂದು ಅವರು ತಿಳಿಸಿದರು.

ಇದೇ ವೇಳೆ ಗ್ರಾಮೀಣ ಪ್ರದೇಶಗಳಿಂದ ನಗರಗಳಿಗೆ ಜನರು ವಲಸೆ ಹೋಗುವುದನ್ನು ತಡೆಯಲು ಸ್ಥಳೀಯ ಮಟ್ಟದಲ್ಲೇ ಉದ್ಯೋಗಾವಕಾಶಗಳನ್ನು ಸೃಷ್ಟಿಸುವ ಅಗತ್ಯವಿದೆ ಎಂದು ಮುಖ್ಯಮಂತ್ರಿ ಹೇಳಿದರು. ಗ್ರಾಮೀಣ ಪ್ರದೇಶಗಳು, ತಾಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿ ಕೈಗಾರಿಕೆಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡುವ ಮೂಲಕ ಅಲ್ಲಿಯೇ ಉದ್ಯೋಗ ಸೃಷ್ಟಿಸುವಂತೆ ಶಾಸಕರಿಗೆ ಸೂಚಿಸಲಾಗಿದೆ ಎಂದರು.

ತಮ್ಮ ಕ್ಷೇತ್ರ ಹಾಗೂ ಜಿಲ್ಲೆಗಳಲ್ಲಿ ಕೈಗಾರಿಕೆ ಸ್ಥಾಪನೆಗೆ ಇರುವ ಸಮಸ್ಯೆಗಳನ್ನು ಗುರುತಿಸಿ ಸರ್ಕಾರದ ಗಮನಕ್ಕೆ ತರುವಂತೆ ಶಾಸಕರಿಗೆ ತಿಳಿಸಲಾಗಿದೆ. ಸ್ಥಳೀಯವಾಗಿ ಕೈಗಾರಿಕೆಗಳು ಬೆಳೆಯುವುದರಿಂದ ಉದ್ಯೋಗಾವಕಾಶಗಳು ಹೆಚ್ಚಲಿದ್ದು, ಉದ್ಯೋಗಕ್ಕಾಗಿ ಜನರು ನಗರ ಪ್ರದೇಶಗಳಿಗೆ ವಲಸೆ ಹೋಗುವುದನ್ನು ತಡೆಯಲು ಸಾಧ್ಯವಾಗಲಿದೆ ಎಂದು ಸಿಎಂ ಡಿಕೆ ಶಿವಕುಮಾರ್ ಹೇಳಿದರು.

ಇದನ್ನೂ ನೋಡಿ : ಬೀದಿ ವ್ಯಾಪಾರಿಗಳ ಬದುಕು ಕಟ್ಟಿಕೊಡುವವರು ಯಾರು? ಸುಪ್ರೀಂ ಕೋರ್ಟ್‌ ಹೇಳಿರುವುದು ಏನು? Janashakthi Media

Donate Janashakthi Media

Leave a Reply

Your email address will not be published. Required fields are marked *