ಧರ್ಮಸ್ಥಳ| ಯೂಟ್ಯೂಬರ್‌ ಮೇಲೆ ಸ್ಥಳೀಯರು ಹಲ್ಲೆ; ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ

ಧರ್ಮಸ್ಥಳ: ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲ್ಲೂಕಿನ ಧರ್ಮಸ್ಥಳ ಗ್ರಾಮದಲ್ಲಿ ಯೂಟ್ಯೂಬರ್‌ಗಳ ಮೇಲೆ ಸ್ಥಳೀಯರು ಹಲ್ಲೆ ನಡೆಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ.

ಅಸ್ಥಿಪಂಜರ ಶೋಧ ಕಾರ್ಯಾಚರಣೆ ಸ್ಥಳದ ಸಮೀಪ ಹಲ್ಲೆ ನಡೆಸಲಾಗಿದೆ. ನೇತ್ರಾವತಿಯ ಪಾಂಗಳ ಬಳಿ ಪ್ರತಿಷ್ಠಿತ ಕುಟುಂಬದ ವಿರುದ್ಧ ಸುಳ್ಳು ಆರೋಪ ಮಾಡಲಾಗುತ್ತಿದೆ. ಸುಳ್ಳು ವರದಿ ಮಾಡಿದ್ದಾರೆ ಎಂದು ಗ್ರಾಮಸ್ಥರು ಯೂಟ್ಯೂಬರ್‌ಗಳ ಮೇಲೆ ಹಲ್ಲೆ ಮಾಡಿದ್ದಾರೆ.

ಅಜಯ್‌, ಅಭಿಷೇಕ್‌, ಸಂತೋಷ್‌ ಎಂಬುವವರ ಮೇಲೆ ದಾಳಿ ನಡೆಸಿ ಹಲ್ಲೆ ಮಾಡಲಾಗಿದೆ. ಕ್ಯಾಮರಾ ಕಸಿದುಕೊಂಡು ಹಾನಿ ಮಾಡಲಾಗಿದೆ ಎನ್ನಲಾಗಿದ್ದು, ಈ ವೇಳೆ ಪರಿಸ್ಥಿತಿ ಕೈ ಮೀರಿದೆ.

ಇದನ್ನೂ ಓದಿ: ಮುಖ್ಯ ಲೆಕ್ಕಾಧಿಕಾರಿಯ ಕಾರು ಚಾಲಕ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಆತ್ಮಹತ್ಯೆ

ಯುವಕರನ್ನು ಚದುರಿಸಲು ಪೊಲೀಸರು ಲಘು ಲಾಠಿ ಪ್ರಹಾರ ಮಾಡಿದ್ದಾರೆ. ಸ್ಥಳದಲ್ಲಿ ಬಿಗುವಿನ ಪರಿಸ್ಥಿತಿ ಉಂಟಾಗಿದ್ದು, ಭಾರೀ ಸಂಖ್ಯೆಯ ಪೊಲೀಸರನ್ನು ಭದ್ರತೆಗಾಗಿ ನಿಯೋಜನೆ ಮಾಡಲಾಗಿದೆ. ಹಲ್ಲೆಗೊಳಗಾದ ಯುವಕರನ್ನು ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ.

ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಸಿಎಂ ಸಿದ್ದರಾಮಯ್ಯ ಅವರು, ಕಾನೂನು ಎಲ್ಲರಿಗೂ ಒಂದೇ, ಯಾರೇ ತಪ್ಪು ಮಾಡಿದರೂ ಶಿಕ್ಷೆ ವಿಧಿಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಇನ್ನು ರಾಹುಲ್‌ ಗಾಂಧಿ ನೇತೃತ್ವದಲ್ಲಿ ಆಗಸ್ಟ್‌ 8ರಂದು ಪ್ರತಿಭಟನೆ ನಡೆಸಲು ನಾವು ಸಿದ್ಧರಿದ್ದೇವೆ.  ಪ್ರತಿಭಟನೆ ಮಾಡುತ್ತೇವೆ ಎಂದು ಮಾಹಿತಿ ನೀಡಿದರು.

ಇದನ್ನೂ ನೋಡಿ: ಸಿಯುಕೆ| ಶೈಕ್ಷಣಿಕ ಹತ್ಯೆ – ಪೊಲೀಸ್‌ ಬರುವ ಮುನ್ನವೇ ಕಾರ್ಪೆಂಟರ್‌ ಮೂಲಕ ಬಾಗಿಲು ಮುರಿದಿದ್ದು ಯಾಕೆ ? #CUK

Donate Janashakthi Media

Leave a Reply

Your email address will not be published. Required fields are marked *