ಬೆಳಗಾವಿ : ಸ್ಥಳೀಯರು ಜಿಲ್ಲೆಯ ಕಿತ್ತೂರು ತಾಲೂಕಿನ ಎಂ. ಕೆ. ಹುಬ್ಬಳ್ಳಿ ಪಟ್ಟಣದಲ್ಲಿ ಗ್ಯಾಸ್ ಸಿಲಿಂಡರ್ ಸಮಸ್ಯೆ ತೀವ್ರಗೊಂಡ ಹಿನ್ನೆಲೆಯಲ್ಲಿ ರಸ್ತೆ ತಡೆದು ಪ್ರತಿಭಟನೆ ನಡೆಸಿದರು.
ಗ್ಯಾಸ್ ಸಿಲಿಂಡರ್ ಏಜೆನ್ಸಿಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಗ್ರಾಮಸ್ಥರು, ತಮ್ಮೂರಿಗೆ ಬಂದ ಸಿಲಿಂಡರ್‌ಗಳನ್ನು ಬೇರೆ ಊರಿಗೆ ಕಳುಹಿಸಲಾಗುತ್ತಿದೆ ಎಂದು ಆರೋಪಿಸಿದ್ದೂ, ಕಳೆದ ಒಂದು ತಿಂಗಳಿನಿಂದ ಸರಿಯಾಗಿ ಸಿಲಿಂಡರ್ ಸಿಗುತ್ತಿಲ್ಲ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ: ಬೆಲೆ ಏರಿಕೆ ಯುದ್ಧ: ಕೇಂದ್ರ ವಿರುದ್ಧ ಡಿಕೆ ಶಿವಕುಮಾರ್ ಕಿಡಿ
ನಡುರಸ್ತೆಯಲ್ಲಿ ಸಿಲಿಂಡರ್ ಇಟ್ಟು ಪ್ರತಿಭಟನೆ ನಡೆಸಿದ ಸ್ಥಳೀಯರು, ಹಣ ನೀಡುವವರಿಗೆ ಮಾತ್ರ ಸಿಲಿಂಡರ್ ನೀಡಲಾಗುತ್ತಿದೆ ಎಂದು ಆರೋಪಿಸಿದರು. “ನಮಗೆ ಮಾತ್ರ ನಾಳೆ ಬನ್ನಿ ಎಂದು ಹೇಳುತ್ತಿದ್ದಾರೆ” ಎಂದು ಮಹಿಳೆಯರು ಆಕ್ರೋಶ ವ್ಯಕ್ತಪಡಿಸಿದರು.
ಘಟನೆ ಕಿತ್ತೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ.
ಇದನ್ನೂ ನೋಡಿ: ಬೇರೆ ಜಾತಿಯಾಗಿದ್ದರೆ ಟಿಪ್ಪುಗೆ ಇಂದಿನ ಪರಿಸ್ಥಿತಿ ಬಂದಿರುತ್ತಿತ್ತೇ? – ಮುನೀರ್ ಕಾಟಿಪಳ್ಳ Janashakthi Media
