ಕೇರಳ: ಮೇ 8 ರಿಂದ 16ರವರೆಗೆ ಸಂಪೂರ್ಣ ಲಾಕ್​ಡೌನ್

ತಿರುವನಂತಪುರಂ: ಕೇರಳದಲ್ಲಿ ಕೋವಿಡ್‌-19ರ ಪ್ರಕರಣಗಳು ಅಧಿಕಗೊಳ್ಳುತ್ತಿರುವುದರಿಂದ ಅದರ ನಿಯಂತ್ರಣಕ್ಕಾಗಿ ಮೇ 8 ರಿಂದ 16ರವರೆಗೆ ಸಂಪೂರ್ಣ ಲಾಕ್​ಡೌನ್ ಘೋಷಿಸಲಾಗಿದೆ.

ಕೋವಿಡ್ ಪ್ರಕರಣಗಳು ಏರುತ್ತಿರುವ ರಾಜ್ಯಗಳಲ್ಲಿ ನೆರೆಯ ಕೇರಳ ಕೂಡಾ ಒಂದು. ಸಿಎಂ ಪಿಣರಾಯಿ ವಿಜಯನ್ ರಾಜ್ಯಾದ್ಯಂತ ಸಂಪೂರ್ಣ ಲಾಕ್‌ಡೌನ್‌ ಘೋಷಿಸಿದ್ದಾರೆ.

ಶನಿವಾರ ಬೆಳಗ್ಗೆ 6 ಗಂಟೆಯಿಂದ ಲಾಕ್​ಡೌನ್ ಆರಂಭವಾಗಲಿದೆ. ಸತತ 9 ದಿನಗಳ ಕಾಲ ಕೇರಳ ರಾಜ್ಯವಿಡೀ ಬಂದ್ ಆಗಿರುತ್ತವೆ. ಕೊವಿಡ್ ಎರಡನೇ ಅಲೆಯಿಂದಾಗಿ ರಾಜ್ಯದಲ್ಲಿ ಸೋಂಕು ಹರಡುವಿಕೆ ಅಧಿಕಗೊಳ್ಳುತ್ತಿದೆ. ಕಳೆದ ಒಂದು ವಾರದಲ್ಲಿ ರೋಗಿಗಳ ಸಂಖ್ಯೆ ಏರಿಕೆಯಾಗುತ್ತಿರುವ ಪರಿಣಾಮವಾಗಿ ಈ ಕ್ರಮಕೈಗೊಳ್ಳಲಾಗಿದೆ.

ಇದನ್ನು ಓದಿ: ಕೋವಿಡ್:‌ ರಾಜ್ಯದಲ್ಲಿ ದಾಖಲಾದ 50 ಸಾವಿರ ಹೊಸ ಪ್ರಕರಣಗಳು

ಅಗತ್ಯ ವಸ್ತುಗಳನ್ನು ಮಾರುವ ಅಂಗಡಿಗಳು ತೆರೆಯಲು ಅವಕಾಶ ನೀಡಿದ್ದು. ಅದಕ್ಕಾಗಿ ನಿರ್ದಿಷ್ಟ ಸಮಯವನ್ನು ನಿಗದಿಪಡಿಸಲಾಗಿದೆ. ಆಸ್ಪತ್ರೆ, ಕೊವಿಡ್ ಚಿಕಿತ್ಸಾ ಕೇಂದ್ರಗಳು ಮತ್ತಷ್ಟು ಪರಿಣಾಮಕಾರಿಯಾಗಿ ಸೇವೆಗಳನ್ನು ಒದಗಿಸಲಿದೆ.

ಈಗಾಗಲೇ ಜಾರಿಯಲ್ಲಿರುವ ಮಿನಿ ಲಾಕ್​ಡೌನ್ ನಿಂದ ಕೋವಿಡ್‌ ನಿಯಂತ್ರಣಕ್ಕೆ ಬಾರದ ಕಾರಣಕ್ಕೆ ತಜ್ಞರ ಮಾಹಿತಿಯಂತೆ ಮತ್ತಷ್ಟು ಕಠಿಣ ಕ್ರಮಗಳೊಂದಿಗೆ ಸಂಪೂರ್ಣ ಲಾಕ್ ಡೌನ್ ಮಾಡಲು ಸರ್ಕಾರ ನಿರ್ಧರಿಸಿದೆ.

ಇದನ್ನು ಓದಿ: ತೇಜಸ್ವಿ ಸೂರ್ಯ ಹೇಳುವಂತೆ ಬೆಂಗಳೂರಲ್ಲಿ ಹಾಸಿಗೆ ಲಭ್ಯತೆ ಶೂನ್ಯಕ್ಕೆ ಇಳಿದಿಲ್ಲ

ದಿನದಿಂದ ದಿನಕ್ಕೆ ಕೋವಿಡ್‌ ಪ್ರಕರಣಗಳು ಹೆಚ್ಚಾಗುತ್ತಿವೆ. ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಇಲ್ಲಿ 41,953 ಮಂದಿಗೆ ಕೊವಿಡ್ ದೃಢಪಟ್ಟಿದೆ. ಅಲ್ಲದೆ ಒಟ್ಟಾರೆ ಪಾಸಿಟಿವ್‌ ದರ ಶೇ, 25.69ರಷ್ಟಾಗಿದೆ.

ಸಂಪೂರ್ಣ ಲಾಕ್‌ಡೌನ್ ಜಾರಿ ಅನಿವಾರ್ಯ ಕೊವಿಡ್ ಪ್ರಕರಣಗಳ ಸಂಖ್ಯೆ  40,000 ದಾಟಿದೆ ಹಾಗಾಗಿ ಲಾಕ್‌ಡೌನ್ ಅನಿವಾರ್ಯ ಎಂದು ತೀರ್ಮಾನಕ್ಕೆ ಬರಲಾಗಿದೆ ಎಂದು ಸರಕಾರ ತಿಳಿಸಿದೆ.

ರಾಜ್ಯದ ಸ್ಥಿತಿಗತಿ ಬಗ್ಗೆ ತಜ್ಞರ ಸಮಿತಿಯ ವರದಿಯು ಮುಖ್ಯಮಂತ್ರಿಯವರಿಗೆ ಹಸ್ತಾಂತರಿಸಿದ ನಂತರ ಸಂಪೂರ್ಣ ಲಾಕ್‌ಡೌನ್ ನಿರ್ಧಾರಕ್ಕೆ ಬರಲಾಗಿದೆ. ಮುಂದಿನ ವಾರ ಪ್ರಕರಣಗಳು ಹೆಚ್ಚಾಗಲಿವೆ ಮತ್ತು ಅದು ನಿರ್ಣಾಯಕವಾಗಿದೆ ಎಂದು ತಜ್ಞರ ಸಮಿತಿ ತಿಳಿಸಿದೆ.

Donate Janashakthi Media

Leave a Reply

Your email address will not be published. Required fields are marked *