ನವದೆಹಲಿ : ಒಂದೇ ವಿಮಾನದಲ್ಲಿ ಆರ್ಜೆಡಿಯ ತೇಜಸ್ವಿ ಕುಮಾರ್ ಯಾದವ್ ಹಾಗೂ ಜೆಡಿಯು ಮುಖ್ಯಸ್ಥ ನಿತೀಶ್ ಕುಮಾರ್ ಇಂದು ದೆಹಲಿಗೆ ತೆರಳಿದ್ದಾರೆ. ನಿತೀಶ್ ಕುಮಾರ್ ಎನ್‌ಡಿಎ ಸಭೆಯಲ್ಲಿ ಭಾಗವಹಿಸುತ್ತಿದ್ದರೆ, ತೇಜಸ್ವಿ ಇಂಡಿ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಇಬ್ಬರೂ ಪಾಟ್ನಾದಿಂದ ಜತೆಯಾಗಿಯೇ ತೆರಳಿದ್ದಾರೆ. ಲೋಕಸಭಾ
ಲೋಕಸಭೆ ಚುನಾವಣೆ ಫಲಿತಾಂಶ 2024 ಪ್ರಕಟಗೊಂಡಿದ್ದು, ಫಲಿತಾಂಶದಲ್ಲಿ ಯಾವ ಪಕ್ಷಕ್ಕೂ ಸ್ಪಷ್ಟ ಬಹುಮತ ದೊರೆತಿಲ್ಲ. ಹೀಗಾಗಿ ಅತಂತ್ರ ಸ್ಥಿತಿ ಎದುರಾಗಿದೆ.ಆದರೆ, ಬಿಜೆಪಿ 240 ಕ್ಷೇತ್ರಗಳಲ್ಲಿ ಗೆಲುವು ದಾಖಲಿಸುವ ಮೂಲಕ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ.
ಈ ಹಿನ್ನೆಲೆಯಲ್ಲಿ ಇಂದು ಎನ್‌ಡಿಎ ಸಭೆಯನ್ನು ಹಮ್ಮಿಕೊಂಡಿದ್ದು, ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಕೂಡ ಪಾಲ್ಗೊಳ್ಳಲಿದ್ದಾರೆ. ನಿತೀಶ್ ಕುಮಾರ್ ಹಾಗೂ ತೇಜಸ್ವಿ ಯಾದವ್ ಪಾಟ್ನಾದಿಂದ ಒಂದೇ ವಿಮಾನದಲ್ಲಿ ಆಗಮಿಸುತ್ತಿರುವುದು ವಿಶೇಷವಾಗಿದೆ.
ಇಬ್ಬರು ವಿಸ್ತಾರಾ ಯುಕೆ-718ನಲ್ಲಿ ದೆಹಲಿಗೆ ಹೊರಟಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. 2024ರ ಲೋಕಸಭಾ ಚುನಾವಣೆಯಲ್ಲಿ ಬಿಹಾರದಲ್ಲಿ 40ರಲ್ಲಿ 30 ಸ್ಥಾನಗಳನ್ನು ಎನ್‌ಡಿಎ ಗೆದ್ದಿದೆ, ಆದರೆ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಪಕ್ಷ 12 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ.
ಇದನ್ನು ಓದಿ : ಶ್ರೀರಾಮುಲು ಸೋಲಿಗೆ ಕಾರಣರಾದವರ್ಯಾರು ಗೊತ್ತಾ ?
ಇಂಡಿ ಮೈತ್ರಿಕೂಟದ ಸಭೆಯಲ್ಲಿ ಪಾಲ್ಗೊಳ್ಳಲು ದೆಹಲಿಗೆ ತೆರಳುವ ಮೊದಲು ತೇಜಸ್ವಿ ಯಾದವ್ ಬಿಹಾರದಲ್ಲಿ ರಾಷ್ಟ್ರೀಯ ಜನತಾ ದಳವು ಗರಿಷ್ಠ ಮತಗಳನ್ನು ಗಳಿಸಿದೆ ಮತ್ತು ನಮ್ಮಲ್ಲಿ ಹೆಚ್ಚಿನ ಮತದಾನದ ಶೇಕಡಾವಾರು ಪ್ರಮಾಣವಿದೆ, ಮತದಾನವೂ ಹೆಚ್ಚಾಗಿದೆ ಎಂದರು. ಒಂದೆಡೆ ನಿತೀಶ್ ಕುಮಾರ್ ಐಎನ್ಡಿಐಎ ಒಕ್ಕೂಟ ಸೇರಿದರೆ ಎನ್ನುವ ಅನುಮಾನ ಕಾಡುತ್ತಿರುವಾಗಲೇ ಈ ಚಿತ್ರ ಎಲ್ಲೆಡೆ ವೈರಲ್ ಆಗಿದೆ. ಲೋಕಸಭಾ
ಬಿಜೆಪಿಗೆ ತನ್ನದೇ ಆದ ಬಹುಮತವಿಲ್ಲ ಮತ್ತು ಇಂದು ಬಿಹಾರ ಕಿಂಗ್ ಮೇಕರ್ ಆಗಿ ಹೊರಹೊಮ್ಮುತ್ತಿದೆ ಎಂದು ಹೇಳಿದರು. ಎನ್‌ಡಿಎ ಮತ್ತು ಇಂಡಿ ಎರಡೂ ಮೈತ್ರಿಕೂಟಗಳ ನಾಯಕರು ಮುಂದಿನ ಹಾದಿಯ ಕುರಿತು ಚರ್ಚೆ ನಡೆಸಲು ದೆಹಲಿಗೆ ಹಾರುತ್ತಿದ್ದಾರೆ.
ನಿತೀಶ್ ಕುಮಾರ್ ಅವರ ಆಪ್ತ ಸಹಾಯಕ ಮತ್ತು ಜೆಡಿಯು ನಾಯಕ ಕೆಸಿ ತ್ಯಾಗಿ ನಿನ್ನೆ ಸುದ್ದಿ ಸಂಸ್ಥೆ ಎಎನ್‌ಐಗೆ ಪಕ್ಷವು ಎನ್‌ಡಿಎಯಲ್ಲಿ ಉಳಿಯುತ್ತದೆ ಮತ್ತು ಇಂಡಿ ಒಕ್ಕೂಟಕ್ಕೆ ಬದಲಾಯಿಸುವ ಯಾವುದೇ ಊಹಾಪೋಹಗಳನ್ನು ತಿರಸ್ಕರಿಸಿದರು.
ಆಂಧ್ರಪ್ರದೇಶದಲ್ಲಿ ಎನ್‌ಡಿಎಯ ಅದ್ಭುತ ಪ್ರದರ್ಶನಕ್ಕೆ ಪ್ರಧಾನಿ ನರೇಂದ್ರ ಮೋದಿಯವರನ್ನು ಅಭಿನಂದಿಸಿದ ಮತ್ತೊಬ್ಬ ಕಿಂಗ್‌ಮೇಕರ್ ಚಂದ್ರಬಾಬು ನಾಯ್ಡು ಮತ್ತು ಟಿಡಿಪಿ ಮತ್ತು ಬಿಜೆಪಿ ಒಟ್ಟಾಗಿ ರಾಜ್ಯವನ್ನು ಮರುನಿರ್ಮಾಣ ಮಾಡುತ್ತವೆ ಎಂದು ಹೇಳಿದರು.
ಆದಾಗ್ಯೂ, ಈ ಇಬ್ಬರೂ ನಾಯಕರು ಈ ಹಿಂದೆ ಪ್ರಧಾನಿ ಮೋದಿ ಮತ್ತು ಬಿಜೆಪಿಯನ್ನು ಬಲವಾಗಿ ಟೀಕಿಸಿದ್ದರು ಎಂಬುದು ಗಮನಾರ್ಹವಾಗಿದೆ.
ಇದನ್ನು ನೋಡಿ : ಲೋಕಮತ 2024 | ಐದು ರಾಜ್ಯಗಳಲ್ಲಿ ನಡೆಯದ ಬಿಜೆಪಿ ಆಟ | ನಾಯ್ಡು, ನಿತೀಶ್ ಕಿಂಗ್‌ಮೇಕರ್ Janashakthi Media