ಲೋಕಸಭೆ ಸದಸ್ಯತ್ವ ಅನರ್ಹತೆ ರದ್ದು ನಂತರ ಸಂಸತ್ತಿಗೆ ಸಿಂಹದಂತೆ ಪ್ರವೇಶ:ಕಾಂಗ್ರೆಸ್‌

ಬೆಂಗಳೂರು: ಲೋಕಸಭೆ ಸದಸ್ಯತ್ವ ಅನರ್ಹತೆ ಆದೇಶ ರದ್ದುಗೊಂಡ ಬಳಿಕ ರಾಹುಲ್‌ ಗಾಂಧಿ ಅವರು ಮತ್ತೊಮ್ಮೆ ಸಂಸತ್ತಿಗೆ ಸಿಂಹದಂತೆ ಕಾಲಿಡುತ್ತಿದ್ದಾರೆ ಎಂದು ಕಾಂಗ್ರೆಸ್‌ ಹೇಳಿದೆ.

ಇದನ್ನೂ ಓದಿ:ಮೋದಿ ಉಪನಾಮ ಹೇಳಿಕೆ : ಪಾಟ್ನಾ ಹೈಕೋರ್ಟ್​ನಿಂದ ರಾಹುಲ್​ ಗಾಂಧಿಗೆ ರಿಲೀಫ್

ರಾಹುಲ್‌ ಗಾಂಧಿಯವರ ಸದಸ್ಯತ್ವ ಅನರ್ಹತೆಯನ್ನು ಲೋಕಸಭೆ ಸಚಿವಾಲಯ ಹಿಂಪಡೆದಿದ್ದು, ಅವರ ಸದಸ್ಯತ್ವವನ್ನು ಮರುಸ್ಥಾಪಿಸಲಾಗಿದೆ ಎಂದು ತಿಳಿಸಿದೆ. ರಾಹುಲ್‌ ಸದಸ್ಯತ್ವ ಅನರ್ಹತೆ ರದ್ದುಪಡಿಸಲಾಗಿರುವ ಸಂಬಂಧ ಟ್ವೀಟ್‌ ಮಾಡಿರುವ ಕಾಂಗ್ರೆಸ್‌, ಸತ್ಯಕ್ಕೆ ಹಿನ್ನೆಡೆ ಇರಬಹುದು, ಸತ್ಯಕ್ಕೆ ಅಂತ್ಯವಿರುವುದಿಲ್ಲ ಎಂದು ಹೇಳಿದೆ. ಯಾವ ಯಾವ ಬಗೆಯಲ್ಲಿ ತುಳಿಯಲು ಯತ್ನಿಸಿದರೂ ರಾಹುಲ್‌ ಪುಟಿದು ಮೇಲೆದ್ದು ಬರುತ್ತಾರೆ. ಏಕೆಂದರೆ ಅವರೊಂದಿಗೆ ನ್ಯಾಯವಿದೆ, ಸತ್ಯವಿದೆ. ಭ್ರಷ್ಟರಿಗೆ ದುಃಸ್ವಪ್ನವಾಗಿ ಮತ್ತೊಮ್ಮೆ ಸಂಸತ್ತಿಗೆ ಸಿಂಹದಂತೆ ಕಾಲಿಡುತ್ತಿದ್ದಾರೆ.

ಮಾನಹಾನಿ ಪ್ರಕರಣದಲ್ಲಿ ರಾಹುಲ್‌ ಗಾಂಧಿ ತಪ್ಪಿತಸ್ಥ ಎಂದು ಆದೇಶಿಸಿದ್ದ ಗುಜರಾತ್‌ನ ಸೂರತ್‌ ನ್ಯಾಯಾಲಯ, ಮಾರ್ಚ್‌ 23ರಂದು 2 ವರ್ಷ ಜೈಲು ಶಿಕ್ಷೆ ವಿಧಿಸಿತ್ತು. ಇದರ ಬೆನ್ನಲ್ಲೇ ಅವರನ್ನು ಲೋಕಸಭೆ ಸದಸ್ಯತ್ವದಿಂದ ಅನರ್ಹಗೊಳಿಸಲಾಗಿತ್ತು. ಸೂರತ್‌ ನ್ಯಾಯಾಲಯದ ಆದೇಶ ಪ್ರಶ್ನಿಸಿ ರಾಹುಲ್ ಗಾಂಧಿ ಅವರು ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದರು. ಶುಕ್ರವಾರ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌, ಸೂರತ್‌ ನ್ಯಾಯಾಲಯದ ಆದೇಶಕ್ಕೆ ತಡೆ ನೀಡಿದೆ. ರಾಹುಲ್‌ ಗಾಂಧಿ ಅವರು ಕೇರಳದ ವಯನಾಡ್‌ ಲೋಕಸಭೆ ಕ್ಷೇತ್ರದಿಂದ ಸಂಸತ್‌ ಪ್ರವೇಶಿಸಿದ್ದರು.

Donate Janashakthi Media

Leave a Reply

Your email address will not be published. Required fields are marked *